Tumakuru: ಬೈಕ್ ಅಪಘಾತದಲ್ಲಿ ಪೊಲೀಸ್ ಪೇದೆ ಸೇರಿ ಇಬ್ಬರ ದುರ್ಮರಣ..!

Tumakuru Crime News: ಇಬ್ಬರು ಮಕ್ಕಳೊಂದಿಗೆ ಕೆರೆಗೆ ಬಿದ್ದು ತಾಯಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ನಿಟ್ಟೂರಿನಲ್ಲಿ ನಡೆದಿದೆ.

Written by - Puttaraj K Alur | Last Updated : Nov 30, 2023, 06:16 PM IST
  • ಬೈಕ್ ನಿಯಂತ್ರಣ ತಪ್ಪಿ ಬಿದ್ದು ಪೊಲೀಸ್ ಪೇದೆ ಸೇರಿ ಇಬ್ಬರ ದುರ್ಮರಣ
  • ಸಂಬಂಧಿಕರ ಮದುವೆ ಮುಗಿಸಿ ವಾಪಸ್ ತೆರಳುತ್ತಿದ್ದಾಗ ನಡೆದಿರುವ ಘಟನೆ
  • ನಿಟ್ಟೂರಿನಲ್ಲಿ ಇಬ್ಬರು ಮಕ್ಕಳೊಂದಿಗೆ ಕೆರೆಗೆ ಬಿದ್ದು ತಾಯಿ ಆತ್ಮಹತ್ಯೆ
Tumakuru: ಬೈಕ್ ಅಪಘಾತದಲ್ಲಿ ಪೊಲೀಸ್ ಪೇದೆ ಸೇರಿ ಇಬ್ಬರ ದುರ್ಮರಣ..!  title=
ಪೊಲೀಸ್ ಪೇದೆ ಸೇರಿ ಇಬ್ಬರ ದುರ್ಮರಣ!

ತುಮಕೂರು: ಸಂಬಂಧಿಕರ ಮದುವೆ ಮುಗಿಸಿ ವಾಪಸ್ ತೆರಳುತ್ತಿದ್ದಾಗ ಬೈಕ್ ಅಪಘಾತವಾಗಿ ಪೊಲಿಸ್ ಪೇದೆ ಸೇರಿ ಇಬ್ಬರು ಸಾವನ್ನಪ್ಪಿದ್ದಾರೆ. ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಸಿದ್ದರಬೆಟ್ಟ ಮಾರ್ಗದಲ್ಲಿ ಈ ದುರ್ಘಟನೆ ನಡೆದಿದೆ.

ಕೊಡಿಗೆನಹಳ್ಳಿ ಠಾಣೆಯ ಮುಖ್ಯಪೇದೆ ಮಹೇಶ್ (27) ಸ್ನೇಹಿತ ಚಂದ್ರಯ್ಯ (35) ಸಾವನ್ನಪ್ಪಿದ್ದಾರೆ. ಭರತ್(22) ಎಂಬಾತ ಗಾಯಗೊಂಡಿದ್ದಾನೆ. ಈ ಮೂವರು ಮದುವೆಗೆ ತೆರಳಿದ್ದರು. ಮದುವೆ ಮುಗಿಸಿಕೊಂಡು ಕೊರಟಗೆರೆ ಕಡೆ ಬರುವಾಗ ಬೈಕ್ ನಿಯಂತ್ರಣ ತಪ್ಪಿ ದುರಂತ ಸಂಭವಿಸಿದೆ. ಗಾಯಗೊಂಡಿರುವ ಭರತ್‍ಗೆ ತುಮಕೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: ತೆಲಂಗಾಣ ರಾಜ್ಯದಲ್ಲಿ ಮತದಾನ ಆರಂಭ

ಅಪಘಾತದಲ್ಲಿ ಸಾವನ್ನಪ್ಪಿದವರು ಮಧುಗಿರಿ ತಾಲೂಕಿನ ಗರಣಿ ಗ್ರಾಮದ ಯುವಕರು ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ತುಮಕೂರು ಎಸ್ಪಿ ಅಶೋಕ್, ಮಧುಗಿರಿ ಡಿವೈಎಸ್ಪಿ, ಕೊರಟಗೆರೆ ಸಿಪಿಐ, ಪಿಎಸೈ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇಬ್ಬರು ಮಕ್ಕಳೊಂದಿಗೆ ಕೆರೆಗೆ ಬಿದ್ದು ತಾಯಿ ಆತ್ಮಹತ್ಯೆ!

ಇಬ್ಬರು ಮಕ್ಕಳೊಂದಿಗೆ  ಕೆರೆಗೆ ಬಿದ್ದು ತಾಯಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ನಿಟ್ಟೂರಿನಲ್ಲಿ ನಡೆದಿದೆ. ವಿಜಯಲಕ್ಷ್ಮಿ ಎಂಬುವರು ತಮ್ಮ 4 ವರ್ಷದ ಹೆಣ್ಣು ಮಗು ಮತ್ತು 11 ತಿಂಗಳ ಗಂಡು ಮಗುವಿನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಬ್ಬರು ಮಕ್ಕಳೊಂದಿಗೆ ತಾಯಿಯ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. 1 ವರ್ಷದ ಹಿಂದೆ ವಿಜಯಲಕ್ಷ್ಮಿ ಪತಿ ಸಾವನಪ್ಪಿದ್ದರು. ಗುಬ್ಬಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಕಾಂತರಾಜು ವರದಿ ಸ್ವೀಕಾರಕ್ಕೆ ಸರ್ಕಾರ ಸಿದ್ಧ: ಸಚಿವ ಶಿವರಾಜ್ ತಂಗಡಗಿ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://youtu.be/--phA9ji8NM

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News