Cyber Fraud: 3.82 ಲಕ್ಷ ಕಳೆದುಕೊಂಡ ಬೋನಿ ಕಪೂರ್

Boney Kapoor cyber fraud: ಬಾಲಿವುಡ್ ನಿರ್ಮಾಪಕ ಬೋನಿ ಕಪೂರ್ ಅವರ ಕ್ರೆಡಿಟ್ ಕಾರ್ಡ್ ಬಳಸಿ ಸುಮಾರು 3.82 ಲಕ್ಷ ರೂ. ವಂಚನೆ ನಡೆದಿದೆ.

Written by - Chetana Devarmani | Last Updated : May 28, 2022, 10:34 AM IST
  • ಬಾಲಿವುಡ್ ನಿರ್ಮಾಪಕ ಬೋನಿ ಕಪೂರ್
  • ಬೋನಿ ಕಪೂರ್ ಕ್ರೆಡಿಟ್ ಕಾರ್ಡ್ ದುರ್ಬಳಕೆ
  • 3.82 ಲಕ್ಷ ಕಳೆದುಕೊಂಡ ಬೋನಿ ಕಪೂರ್
Cyber Fraud: 3.82 ಲಕ್ಷ ಕಳೆದುಕೊಂಡ ಬೋನಿ ಕಪೂರ್  title=
ಬೋನಿ ಕಪೂರ್

ಮುಂಬೈ: ಬಾಲಿವುಡ್ ಖ್ಯಾತ ನಿರ್ಮಾಪಕ ಮತ್ತು ಉದ್ಯಮಿ ಬೋನಿ ಕಪೂರ್ ಅವರ ಕ್ರೆಡಿಟ್ ಕಾರ್ಡ್ ದುರ್ಬಳಕೆ ಮಾಡಿಕೊಂಡು ವ್ಯಕ್ತಿಯೊಬ್ಬ 3.82 ಲಕ್ಷ ರೂ. ವಂಚಿಸಿರುವ ಘಟನೆ ಜರುಗಿದೆ. ದೂರಿನ ಪ್ರಕಾರ, ಅಪರಿಚಿತ ವ್ಯಕ್ತಿ ಫೆಬ್ರವರಿ 9 ರಂದು ಕಪೂರ್ ಅವರ ವಿವರಗಳು ಮತ್ತು ಪಾಸ್‍ವರ್ಡ್ ಪಡೆಯುವ ಮೂಲಕ ಐದು ಬಾರಿ ಆನ್‍ಲೈನ್ ವಹಿವಾಟುಗಳನ್ನು ನಡೆಸಲು ಕ್ರೆಡಿಟ್ ಕಾರ್ಡ್ ಬಳಸಿದ್ದಾನೆ. ಈ ವೇಳೆ ಕಪೂರ್ ಖಾತೆಯಿಂದ ಒಟ್ಟು 3.82 ಲಕ್ಷ ರೂ.ಗಳನ್ನು ವರ್ಗಾಯಿಸಲಾಗಿದೆ. 

ಇದನ್ನೂ ಓದಿ: ಮತ್ತೆ ಬರ್ತಿದೆ ನಿಮ್ಮ ನೆಚ್ಚಿನ ಶೋ ರಾಜಾ ರಾಣಿ...!

ಮಾರ್ಚ್ 30 ರಂದು ತಮ್ಮ ಬ್ಯಾಂಕ್ ಕಾರ್ಯ ನಿರ್ವಾಹಕರು ಕ್ರೆಡಿಟ್ ಕಾರ್ಡ್ ಬಿಲ್ ಪಾವತಿಗೆ ಕರೆ ಮಾಡಿದಾಗ ವಂಚನೆಯ ಬಗ್ಗೆ ತಿಳಿದುಬಂದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಮುಂಬೈನ ಅಂಬೋಲಿ ಪೊಲೀಸ್ ಠಾಣೆಯಲ್ಲಿ ಬುಧವಾರ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬೋನಿ ಕಪೂರ್‌ ಬ್ಯಾಂಕ್ ಖಾತೆಯಿಂದ ಹಣ ಡ್ರಾ ಆಗಿರುವುದು ತಿಳಿದು ಬ್ಯಾಂಕ್‌ನಲ್ಲಿ ವಿಚಾರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಪೊಲೀಸರಿಗೆ ಲಿಖಿತ ದೂರು ನೀಡಿದ್ದಾರೆ. ಅವರ ಕ್ರೆಡಿಟ್ ಕಾರ್ಡ್ ವಿವರಗಳನ್ನು ಯಾರೂ ಕೇಳಲಿಲ್ಲ ಅಥವಾ ಈ ಬಗ್ಗೆ ಯಾವುದೇ ಫೋನ್ ಕರೆಯನ್ನು ಸ್ವೀಕರಿಸಲಿಲ್ಲ ಎಂದು ನಿರ್ಮಾಪಕರು ಪೊಲೀಸರಿಗೆ ತಿಳಿಸಿದ್ದಾರೆ.

ಕಪೂರ್ ಕಾರ್ಡ್ ಬಳಸುವಾಗ ಯಾರೋ ಡೇಟಾ ಕದ್ದಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಶಂಕಿಸಿದ್ದಾರೆ. ಗುರುಗ್ರಾಮ್‌ನಲ್ಲಿರುವ ಕಂಪನಿಯೊಂದರ ಖಾತೆಗೆ ಕಪೂರ್ ಕಾರ್ಡ್‌ನಿಂದ ಹಣ ಹೋಗಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. 

ಇದನ್ನೂ ಓದಿ: ಇದೇ ಮೊದಲ ಬಾರಿಗೆ 'ರೀಲ್ಸ್‌' ಮಾಡಿದ ನಟ ಕಿಚ್ಚ ಸುದೀಪ್..!

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News