ಮಧ್ಯಪ್ರದೇಶದ ಗುಣ ಜಿಲ್ಲೆಯಲ್ಲಿ ಡಂಪರ್‌ಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ: 12 ಮಂದಿ ಸಜೀವ ದಹನ

Guna Accident: ಮಧ್ಯಪ್ರದೇಶದ ಗುಣದಿಂದ ಆರೋನ್‌ಗೆ ಹೋಗುತ್ತಿದ್ದ ಬಸ್‌ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, 12 ಮಂದಿ ಸಜೀವವಾಗಿ ದಹನವಾಗಿರುವ ಆಘಾತಕಾರಿ ಘಟನೆ ಸಂಭವಿಸಿದೆ. 

Written by - Yashaswini V | Last Updated : Dec 28, 2023, 08:42 AM IST
  • ಬಸ್ ಮತ್ತು ಡಂಪರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ.
  • ಬುಧವಾರ ರಾತ್ರಿ 8.30 ರ ಸುಮಾರಿಗೆ ಗುಣ ಜಿಲ್ಲೆಯಿಂದ ಬುಧವಾರ ರಾತ್ರಿ 8.30 ರ ಸುಮಾರಿಗೆ
  • ಡಿಕ್ಕಿಯ ರಭಸಕ್ಕೆ ಬಸ್‌ಗೆ ಬೆಂಕಿ ಹೊತ್ತಿಕೊಂಡಿದ್ದು 12 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮಧ್ಯಪ್ರದೇಶದ ಗುಣ ಜಿಲ್ಲೆಯಲ್ಲಿ ಡಂಪರ್‌ಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ: 12 ಮಂದಿ ಸಜೀವ ದಹನ  title=

Guna Accident: ಮಧ್ಯಪ್ರದೇಶದ ಗುಣ ಜಿಲ್ಲೆಯಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿದೆ. ಗುಣಾದಿಂದ ಆರೋನ್‌ಗೆ ಹೋಗುತ್ತಿದ್ದ ಪ್ರಯಾಣಿಕರ ಬಸ್ ದುಹೈ ದೇವಸ್ಥಾನದ ಬಳಿ ಮುಂಭಾಗದಿಂದ ಬರುತ್ತಿದ್ದ ಡಂಪರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಇನ್ನೂ ಅಪಘಾತ ಸಂಭವಿಸಿದ ತಕ್ಷಣ, ಬಸ್‌ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡ ಪರಿಣಾಮ 12 ಮಂದಿ ಸಜೀವ ದಹನವಾಗಿದ್ದಾರೆ. ಆಸ್ಪತ್ರೆಯಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿರುವುದು ದೃಢಪತ್ತಿದೆ. 

ಅಪಘಾತ ಸಂಭವಿಸಿದ ಕ್ಷಣಾರ್ಧದಲ್ಲಿ ಬಸ್‌ನಲ್ಲಿ ಭಾರೀ ಬೆಂಕಿ ಹೊತ್ತಿ ಉರಿದ ಪರಿಣಾಮವಾಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಕೆಲವು ಪ್ರಯಾಣಿಕರು ಸುಟ್ಟು ಕರಕಲಾಗಿದ್ದರೆ, ಇನ್ನೂ ಕೆಲವರ ಸ್ಥಿತಿ ಗಂಭೀರವಾಗಿದೆ. ಈ ದುರ್ಘಟನೆಯಲ್ಲಿ ಇದುವರೆಗೂ 13 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ. 

ಈ ದುರ್ಘಟನೆಯಲ್ಲಿ  ಡಂಪರ್‌ಗೆ ಡಿಕ್ಕಿ ಹೊಡೆದ ತಕ್ಷಣ ಬಸ್ ಚಾಲಕ ಮೃತಪಟ್ಟಿದ್ದಾರೆ. ಅಪಘಾತದ ನಂತರ ಕೆಲ ಪ್ರಯಾಣಿಕರು ಬಸ್‌ನ ಗಾಜು ಒಡೆದು ಹೊರಗೆ ಬರುವಲ್ಲಿ ಯಶಸ್ವಿಯಾದ್ದರೆ, ಗಾಯಾಳುಗಳನ್ನು ಆಂಬ್ಯುಲೆನ್ಸ್ ಸಹಾಯದಿಂದ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಚಿಕಿತ್ಸೆ ಮುಂದುವರೆದಿದೆ. 

ಇದನ್ನೂ ಓದಿ- West Bengal: ರೀಲ್ಸ್ ಮಾಡುವಾಗ ರೈಲು ಡಿಕ್ಕಿ ಹೊಡೆದು ಮೂವರು ಯುವಕರು ಸಾವು!

ಬಸ್‌ನಲ್ಲಿ ಅಸ್ಥಿಪಂಜರಗಳನ್ನು ಕಂಡು ಬೆಚ್ಚಿಬಿದ್ದ ಜನ: 
ಬಸ್‌ನಲ್ಲಿ ಸಂಪೂರ್ಣವಾಗಿ ಬೆಂಕಿ ನಿಯಂತ್ರಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಸಂದರ್ಭದಲ್ಲಿ ಬಸ್‌ನಿಂದ ಅಸ್ಥಿಪಂಜರಗಳನ್ನು ಹೊರತೆಗೆಯುವಾಗ ಅದನ್ನು ಕಂಡ ಸ್ಥಳೀಯರು ಬೆಚ್ಚಿ ಬೆದ್ದಿದ್ದಾರೆ. 

ರಕ್ಷಣಾ ಕಾರ್ಯಾಚರಣೆ ಸಂದರ್ಭದಲ್ಲಿ ಸ್ಥಳದಲ್ಲೇ ಉಪಸ್ಥಿತರಿದ್ದ ಗುಣ ಕಲೆಕ್ಟರ್ ತರುಣ್ ರಾಠಿ, ಈ ದುರ್ಘಟನೆಯಲ್ಲಿ 12 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. 14 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಜಿಲ್ಲಾಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ದೃಢಪಡಿಸಿದ್ದಾರೆ. 

ಆರ್ಥಿಕ ನೆರವು ಘೋಷಣೆ: 
ಘಟನೆ ಬಗ್ಗೆ ಮಾಹಿತಿ ತಿಳಿದು ಸಂತಾಪ ಸೂಚಿಸಿರುವ ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಮೃತರು ಮತ್ತು ಗಾಯಾಳುಗಳ ಚಿಕಿತ್ಸೆಗೆ ಪರಿಹಾರವನ್ನು ಘೋಷಿಸಿದ್ದಾರೆ. ಅಪಘಾತದಲ್ಲಿ ಮೃತರ ಸಂಬಂಧಿಕರಿಗೆ 4 ಲಕ್ಷ ಹಾಗೂ ಗಾಯಾಳುಗಳಿಗೆ 50 ಸಾವಿರ ರೂಪಾಯಿ ಧನಸಹಾಯ ನೀಡುವುದಾಗಿ ಸಿಎಂ ಘೋಷಿಸಿದ್ದಾರೆ. ಜೊತೆಗೆ ಇಂತಹ ದುರ್ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸುವಂತೆ ಸಾರಿಗೆ ಇಲಾಖೆಗೂ ಸೂಚನೆ ನೀಡಲಾಗಿದೆ. 

ಇದನ್ನೂ ಓದಿ- ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕೊಕೇನ್ ದಂಧೆ: ಅಂತಾರಾಷ್ಟ್ರೀಯ ಮಾದಕ ವಸ್ತು ಕಳ್ಳಸಾಗಣೆ

ಇದಲ್ಲದೆ, ಘಟನೆ ಬಗ್ಗೆ ಮಾಹಿತಿ ಪಡೆದಿರುವ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ರಕ್ಷಣಾ ಮತ್ತು ಚಿಕಿತ್ಸೆಗಾಗಿ ಅಧಿಕಾರಿಗಳಿಗೆ ದೂರವಾಣಿ ಮೂಲಕ ಸೂಚನೆಗಳನ್ನು ನೀಡಿದ್ದಾರೆ.
 
ಬಸ್‌ನ ಫಿಟ್‌ನೆಸ್ ಸುತ್ತ ಅನುಮಾನದ ಹುತ್ತ: 
ಮೂಲಗಳಿಂದ ಲಭ್ಯವಿರುವ ಮಾಹಿತಿಯ ಪ್ರಕಾರ, ಅಪಘಾತಕ್ಕೀಡಾದ ಬಸ್ ಸಾಕಷ್ಟು ಹಳೆಯದಾಗಿದ್ದು ಫಿಟ್‌ನೆಸ್ ಸಮಸ್ಯೆಯಿಂದಲೇ ಬಸ್ ಅಪಘಾತಕ್ಕೀಡಾದ ಕೂಡಲೇ ಹೊತ್ತಿ ಉರಿದಿರಬಹುದು ಎಂದು ಹೇಳಲಾಗುತ್ತಿದೆ. ಗಮನಾರ್ಹವಾಗಿ, ಕಳೆದ ವರ್ಷ ಫೆಬ್ರವರಿಯಲ್ಲೇ (ಫೆಬ್ರವರಿ 17, 2022) ಬಸ್‌ನ ಫಿಟ್‌ನೆಸ್ ಪ್ರಮಾಣಪತ್ರ ಕೊನೆಗೊಂಡಿತ್ತು. ಏಪ್ರಿಲ್ 30, 2021 ಕ್ಕೆ ಬಸ್‌ನ ವಿಮೆ ಕೂಡ ಮುಕ್ತಾಯಗೊಂಡಿದೆ ಎಂದು ತಿಳಿದುಬಂದಿದೆ.  

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News