ಚಿಕ್ಕಬಳ್ಳಾಪುರ ಬಳಿ ಭೀಕರ ಅಪಘಾತ: ನಾಲ್ವರು ಯುವಕರು ಸ್ಥಳದಲ್ಲೇ ದುರ್ಮರಣ..!

Car Accident Near Chikkaballapur: ಅತಿ ವೇಗದಿಂದ ಬಂದ ಸ್ವಿಫ್ಟ್ ಕಾರೊಂದು ರಸ್ತೆ ಬದಿಯ ಗುಂಡಿಗೆ ಬಿದ್ದಿದ್ದು, ಕಾರಿನಲ್ಲಿದ್ದ ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗುಂಡಿಯೊಳಗೆ ಸ್ವಿಫ್ಟ್ ಕಾರು ಸಂಪೂರ್ಣವಾಗಿ ಮುಳುಗಿ ಹೋಗಿದೆ. ಪರಿಣಾಮ ನಾಲ್ವರು ಯುವಕರು ಕಾರಿನಲ್ಲೇ ಜಲಸಮಾಧಿಯಾಗಿದ್ದಾರೆ.

Written by - Puttaraj K Alur | Last Updated : Dec 10, 2023, 07:18 AM IST
  • ಚಿಕ್ಕಬಳ್ಳಾಪುರ ಬೈಪಾಸ್ ರಸ್ತೆಯಲ್ಲಿ ಭೀಕರ ಕಾರು ಅಪಘಾತ; ನಾಲ್ವರು ಸ್ಥಳದಲ್ಲೇ ಸಾವು
  • ಅತಿ ವೇಗವಾಗಿ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಬ್ರಿಡ್ಜ್ ಕೆಳಗೆ ಉರುಳಿಬಿದ್ದಿದೆ
  • ಗುಂಡಿಯೊಳಗೆ ಸಂಪೂರ್ಣ ಮುಳುಗಿದ ಸ್ವಿಫ್ಟ್ ಕಾರು, ನಾಲ್ವರು ಯುವಕರು ಜಲಸಮಾಧಿ
ಚಿಕ್ಕಬಳ್ಳಾಪುರ ಬಳಿ ಭೀಕರ ಅಪಘಾತ: ನಾಲ್ವರು ಯುವಕರು ಸ್ಥಳದಲ್ಲೇ ದುರ್ಮರಣ..! title=
ನಾಲ್ವರು ಯುವಕರು ಜಲಸಮಾಧಿ!

ಚಿಕ್ಕಬಳ್ಳಾಪುರ: ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಭೀಕರ ಕಾರು ಅಪಘಾತ ಸಂಭವಿಸಿದ್ದು, ನಾಲ್ವರು ಯುವಕರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಭಾನುವಾರ ಬೆಳ್ಳಂಬೆಳಗ್ಗೆ ಸಂಭವಿಸಿದೆ. ಚಿಕ್ಕಬಳ್ಳಾಪುರದ ಬೈಪಾಸ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಮೃತರ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ.

ಬೆಂಗಳೂರು ಕಡೆಯಿಂದ ಅತಿ ವೇಗವಾಗಿ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಬ್ರಿಡ್ಜ್ ಕೆಳಗೆ ಉರುಳಿಬಿದ್ದಿದ್ದು, ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ. ಚಿಕ್ಕಬಳ್ಳಾಪುರದ ಬೈಪಾಸ್ ರಸ್ತೆಯಿಂದ ನಗರದ ಕೆಳಗಿನ ತೋಟಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಪಕ್ಕದಲ್ಲಿರುವ ಅಂಜನೇಯ ಸ್ವಾಮಿ ದೇವಾಲಯದ ಎದುರು ಈ ಭೀಕರ ದುರ್ಘಟನೆ ನಡೆದಿದೆ.  

ಇದನ್ನೂ ಓದಿ: ನನ್ನನ್ನು ತುಳಿಯಲು ಯಾರಿಂದಲೂ ಸಾಧ್ಯವಿಲ್ಲ”

ಅತಿ ವೇಗದಿಂದ ಬಂದ ಸ್ವಿಫ್ಟ್ ಕಾರೊಂದು ರಸ್ತೆ ಬದಿಯ ಗುಂಡಿಗೆ ಬಿದ್ದಿದ್ದು, ಕಾರಿನಲ್ಲಿದ್ದ ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗುಂಡಿಯೊಳಗೆ ಸ್ವಿಫ್ಟ್ ಕಾರು ಸಂಪೂರ್ಣವಾಗಿ ಮುಳುಗಿ ಹೋಗಿದೆ. ಪರಿಣಾಮ ನಾಲ್ವರು ಯುವಕರು ಕಾರಿನಲ್ಲೇ ಜಲಸಮಾಧಿಯಾಗಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸರು ಮತ್ತು ಅಗ್ನಿಶಾಮಕ ದಳ ಭೇಟಿ ನೀಡಿದ್ದಾರೆ. ಗುಂಡಿಯಿಂದ ಕಾರು ಹೊರ ತೆಗೆಯುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಹೆಚ್ಚಿನ ವಿವರಗಳು ಇನ್ನೂ ಲಭ್ಯವಾಗಬೇಕಿದೆ.

ಇದನ್ನೂ ಓದಿ: ಮಂಡ್ಯದಲ್ಲಿ ಅಚ್ಚರಿಯ ಹೇಳಿಕೆ ಕೊಟ್ಟ ಶಿವಯೋಗೇಶ್ವರ ಸ್ವಾಮೀಜಿ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News