Chitradurga: ಇಬ್ಬರು ಮಕ್ಕಳನ್ನು ತೊಟ್ಟಿಯಲ್ಲಿ ಮುಳುಗಿಸಿ ತಾಯಿ ಆತ್ಮಹತ್ಯೆ..!

Chitradurga Suicide Case: ಲತಾರ ಪತಿ ತಿಪ್ಪೇಸ್ವಾಮಿ ಜಮೀನಿಗೆ ಹೋಗಿದ್ದರಂತೆ. ಹೀಗಾಗಿ ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿಕೊಂಡು ಲತಾ ತನ್ನಿಬ್ಬರು ಮಕ್ಕಳನ್ನು ಮೊದಲು ನೀರಿನ ತೊಟ್ಟಿಯಲ್ಲಿ ಮುಳುಗಿಸಿ ಸಾಯಿಸಿದ್ದಾರೆ. ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ. 

Written by - Puttaraj K Alur | Last Updated : Dec 9, 2023, 05:05 PM IST
  • ಇಬ್ಬರು ಮಕ್ಕಳನ್ನು ನೀರಿನ ತೊಟ್ಟಿಯಲ್ಲಿ ಮುಳುಗಿಸಿ ಕೊಂದು ತಾಯಿಯೂ ಆತ್ಮಹತ್ಯೆ
  • ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಯಾದಲಗಟ್ಟೆ ಗ್ರಾಮದಲ್ಲಿ ನಡೆದಿರುವ ಘಟನೆ
  • ಘಟನೆಯಿಂದ ಗ್ರಾಮದಲ್ಲಿ ನೀರವ ಮೌನ ಆವರಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿದ್ದಾರೆ
Chitradurga: ಇಬ್ಬರು ಮಕ್ಕಳನ್ನು ತೊಟ್ಟಿಯಲ್ಲಿ ಮುಳುಗಿಸಿ ತಾಯಿ ಆತ್ಮಹತ್ಯೆ..! title=
ಮಕ್ಕಳ ಕೊಂದು ತಾಯಿ ಆತ್ಮಹತ್ಯೆ!

ಚಳ್ಳಕೆರೆ(ಚಿತ್ರದುರ್ಗ): ಇಬ್ಬರು ಮಕ್ಕಳನ್ನು ನೀರಿನ ತೊಟ್ಟಿಯಲ್ಲಿ ಮುಳುಗಿಸಿ ಕೊಂದು ತಾಯಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಯಾದಲಗಟ್ಟೆ ಗ್ರಾಮದಲ್ಲಿ ನಡೆದಿದೆ.

ತಿಪ್ಪೇಸ್ವಾಮಿ ಎಂಬುವರ ಪತ್ನಿ ಲತಾ(25), ಪುತ್ರಿ ಪ್ರಣೀತಾ(5) ಮತ್ತು ಒಂದೂವರೆ ವರ್ಷದ ಪುತ್ರ ಜ್ಞಾನೇಶ್ವರ ಮೃತಪಟ್ಟವರು.

ಇದನ್ನೂ ಓದಿ: CM Ibrahim : ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಜೆಡಿಎಸ್‌ನಿಂದ ಸಿ.ಎಂ. ಇಬ್ರಾಹಿಂ ಉಚ್ಛಾಟನೆ..!

ಘಟನೆಯ ವಿವರ:

ತನ್ನಿಬ್ಬರು ಮಕ್ಕಳನ್ನು ನೀರಿನ ತೊಟ್ಟಿಯಲ್ಲಿ ಮುಳುಗಿಸಿ ಕೊಲೆ ಮಾಡಿದ ಬಳಿಕ ಲತಾ ತಾನೂ ಸಹ ಬಚ್ಚಲು ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಲತಾರ ಪತಿ ತಿಪ್ಪೇಸ್ವಾಮಿ ಜಮೀನಿಗೆ ಹೋಗಿದ್ದರಂತೆ. ಹೀಗಾಗಿ ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿಕೊಂಡು ಲತಾ ತನ್ನಿಬ್ಬರು ಮಕ್ಕಳನ್ನು ಮೊದಲು ನೀರಿನ ತೊಟ್ಟಿಯಲ್ಲಿ ಮುಳುಗಿಸಿ ಸಾಯಿಸಿದ್ದಾರೆ. ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ. 

ಇದನ್ನೂ ಓದಿ: ಅನ್ನದಾತನ ಸಂಕಷ್ಟ ಆಲಿಸಬೇಕಾದ ATM ಸರ್ಕಾರವೇ ರೈತನ ಬೆನ್ನುಮೂಳೆ ಮುರಿಯುತ್ತಿದೆ!: ಬಿಜೆಪಿ ಆಕ್ರೋಶ

ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಈ ಆಘಾತಕಾರಿ ಘಟನೆಯಿಂದ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಸ್ಥಳಕ್ಕೆ ಚಳ್ಳಕೆರೆ ಠಾಣೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಲತಾ ಹಾಗೂ ಮಕ್ಕಳ ಸಾವಿನ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News