ಬೆಂಗಳೂರು: ತುಮಕೂರು ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಆರು ಮಂದಿ ಸಾವನ್ನಪ್ಪಿದ್ದಾರೆ. ಪಾವಗಡ-ಮಧುಗಿರಿ ರಸ್ತೆಯಲ್ಲಿ ಈ ಅವಘಡ ಸಂಭವಿಸಿದೆ.
ಬೆಂಗಳೂರಿನ ಜೆ.ಪಿ.ನಗರದ ನಿವಾಸಿ ಜನಾರ್ದನ ರೆಡ್ಡಿ ಅವರು ಪಾವಗಡ ತಾಲೂಕಿನ ಎತ್ತಿನಹಳ್ಳಿಯಲ್ಲಿರುವ ತಮ್ಮ ಊರಿನಲ್ಲಿ ಗೌರಿ ಗಣೇಶ ಹಬ್ಬವನ್ನು ಆಚರಿಸಿ ಕುಟುಂಬ ಸಮೇತ ವಾಪಸ್ಸಾಗುತ್ತಿದ್ದರು. ಭೀಕರ ಅಪಘಾತದಲ್ಲಿ ಮಾರುತಿ ಸಿಯಾಜ್ ಕಾರು ಟಾಟಾ ಟಿಯಾಗೊಗೆ ಡಿಕ್ಕಿ ಹೊಡೆದಿದೆ.
ಬೆಂಗಳೂರು ಕಡೆಗೆ ತೆರಳುತ್ತಿದ್ದ ಸಿಯಾಜ್ ಕಾರು ಓವರ್ ಟೇಕ್ ಮಾಡಲು ಹೋಗಿ ಮಧುಗಿರಿ ಕಡೆಗೆ ಹೋಗುತ್ತಿದ್ದ ಟಿಯಾಗೊಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ರೆಡ್ಡಿ ಕುಟುಂಬದ ಮೂವರು ಸದಸ್ಯರಾದ ಜನಾರ್ದನ ರೆಡ್ಡಿ, ಅವರ ಪುತ್ರಿ ಸಿಂಧೂಜಾ ಮತ್ತು ಸಿಂಧುಜಾ ಅವರ ಪುತ್ರ ವೇದಾಂತ ರೆಡ್ಡಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: ಆರ್.ಅಶೋಕ್ ತಮ್ಮ ಪಕ್ಷದಲ್ಲಿನ ವ್ಯತ್ಯಾಸ, ಜಗಳ ಸರಿಪಡಿಸಿಕೊಳ್ಳಲಿ: ಗೃಹ ಸಚಿವ ಪರಮೇಶ್ವರ
ಟಾಟಾ ಟಿಯಾಗೋದಲ್ಲಿದ್ದ ಮಧುಗಿರಿ ಸಹಕಾರಿ ಬ್ಯಾಂಕ್‌ನ ಇಬ್ಬರು ಉದ್ಯೋಗಿಗಳಾದ ಸಿದ್ದಗಂಗಪ್ಪ ಮತ್ತು ನಾಗರಾಜು ಕೂಡ ಪ್ರಾಣ ಕಳೆದುಕೊಂಡಿದ್ದಾರೆ.
ಸಿಯಾಜ್‌ನಲ್ಲಿದ್ದ ಗೀತಾ (38), ಅವರ ಮಗ ಯೋದ್ಧ ಮತ್ತು ಒಂದು ವರ್ಷದ ಮಗುವಿಗೆ ತೀವ್ರ ಗಾಯಗಳಾಗಿವೆ. ಗಂಭೀರವಾಗಿ ಗಾಯಗೊಂಡಿದ್ದ ಕಾರು ಚಾಲಕ ಆನಂದ್ (30) ಅವರನ್ನು ತುಮಕೂರಿನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ದುರದೃಷ್ಟವಶಾತ್ ಆನಂದ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು.
ಮಧುಗಿರಿ ಪೊಲೀಸರು, ತುಮಕೂರು ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ ಅವರೊಂದಿಗೆ ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಮಧುಗಿರಿ ತಾಲೂಕು ಆಸ್ಪತ್ರೆ ಶವಾಗಾರಕ್ಕೆ ರವಾನಿಸಲಾಗಿದೆ.
ಇದನ್ನೂ ಓದಿ: ಆಟೋ ಬಿಡಿಭಾಗ; ಸ್ವಾವಲಂಬನೆ ಸಾಧಿಸಲು ಉದ್ಯಮಕ್ಕೆ ಸಲಹೆ ನೀಡಿದ ಹೆಚ್.ಡಿ.ಕುಮಾರಸ್ವಾಮಿ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.