ಹುಬ್ಬಳ್ಳಿ: ಮನೆಯಲ್ಲಿನ ಕೌಟುಂಬಿಕ ಕಲಹದಿಂದ ಬೇಸತ್ತು ಕಾನ್ಸ್ಟೇಬಲ್ ಒಬ್ಬರ ಪತ್ನಿ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಂಚಾಕ್ಷರಿ ನಗರದಲ್ಲಿ ನಿನ್ನೇ ತಡ ರಾತ್ರಿ ಬೆಳಕಿಗೆ ಬಂದಿದೆ.
ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆಯನ್ನು ಕೆ ಎಸ್ ಆರ್ ಪಿ ಯಲ್ಲಿ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುವ ಸಂಗಮೇಶ ನಾಯ್ಕರ ಅವರ ಪತ್ನಿ ಸವಿತಾ ನಾಯ್ಕರ. ಸವಿತಾ ನಾಯ್ಕರ ನಿನ್ನೇ (ಜೂನ್ 18, ಭಾನುವಾರ) ಮಧ್ಯಾಹ್ನ ಪಂಚಾಕ್ಷರಿ ನಗರದಲ್ಲಿನ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ- ವಿದೇಶಿ ಯೂಟ್ಯೂಬರ್ ಮೇಲೆ ಹಲ್ಲೆಗೆ ಯತ್ನ: ಆರೋಪಿ ಅಂದರ್
ಮನೆಯವರು ಸಾಕಷ್ಟು ಬಾರಿ ಕರೆ ಮಾಡಿದರು ಕರೆ ಸ್ವೀಕರಿಸಿದ ಹಿನ್ನೆಲೆಯಲ್ಲಿ ರಾತ್ರಿ ಮನೆ ಬಾಗಿಲು ಮುರಿದು ನೋಡಿದಾಗ ಸಂಗಮೇಶ ನಾಯ್ಕರ ಅವರ ಪತ್ನಿ ಸವಿತಾ ನಾಯ್ಕರ ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ.
ಇದನ್ನೂ ಓದಿ- ಖ್ಯಾತ ನಟನ ಮದುವೆ ಪಾರ್ಟಿಯಲ್ಲಿ ಗಲಾಟೆ: ವೈಷ್ಣವಿ ಬಿಲ್ಡರ್ಸ್ ದರ್ಶನ್ ಕೊಲೆಗೆ ವೇದಾಂತ್ ದುಗಾರ್ ಯತ್ನ ಆರೋಪ
ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ ನವನಗರ ಠಾಣೆಯ ಪೊಲೀಸರು ಭೇಟಿ ನೀಡಿ ಮೃತಪಟ್ಟ ಸವಿತಾಳ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಶವಾಗಾರಕ್ಕೆ ರವಾನೆ ಮಾಡಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ