Crime News: ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಬರ್ಬರ ಕೊಲೆ!

ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕಲಬುರಗಿ ನಗರದ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ  ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Written by - Zee Kannada News Desk | Last Updated : Sep 18, 2022, 08:45 AM IST
  • ಮಾರಕಾಸ್ತ್ರದಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ
  • ಕಲಬುರಗಿ ನಗರದ ಹಳೆ ಜೇವರ್ಗಿ ರಸ್ತೆಯಲ್ಲಿ ಯುವಕನನ್ನು ಹತ್ಯೆ ಮಾಡಲಾಗಿದೆ
  • ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ
Crime News: ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಬರ್ಬರ ಕೊಲೆ! title=
ಯುವಕನ ಬರ್ಬರ ಕೊಲೆ!

ಕಲಬುರಗಿ: ಮಾರಕಾಸ್ತ್ರದಿಂದ ಕೊಚ್ಚಿ ಯುವಕನೋರ್ವನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಕಲಬುರಗಿ ನಗರದ ಹಳೆ ಜೇವರ್ಗಿ ರಸ್ತೆಯಲ್ಲಿ ಯುವಕನನ್ನು ಹತ್ಯೆ ಮಾಡಲಾಗಿದೆ.   

ಜಮೀರ್(23) ಕೊಲೆಯಾದ ಯುವಕ. ಕಲಬುರಗಿ ನಗರದ ಹೌಸಿಂಗ್ ಬೋರ್ಡ್ ಕಾಲೋನಿ ನಿವಾಸಿ ಜಮೀರ್‍ನನ್ನು ಕಳದೆ ರಾತ್ರಿ ಬರ್ಬರಾಗಿ ಹತ್ಯೆ ಮಾಡಲಾಗಿದೆ.  ಐದಾರು ಜನ ದುಷ್ಕರ್ಮಿಗಳು ಸೇರಿ ಬರ್ಬರ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಇದನ್ನೂ ಓದಿ: ಬೆಳೆ ಪರಿಹಾರಕ್ಕಾಗಿ 300 ಕೋಟಿ ರೂ. ಬಿಡುಗಡೆ : ಸಿಎಂ ಭರವಸೆ

ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕಲಬುರಗಿ ನಗರದ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ  ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಮಾರಾಕಾಸ್ತ್ರಗಳಿಂದ ಯುವಕನನ್ನು ಕೊಲೆ ಮಾಡಿ ಆರೋಪಿಗಳು ಎಸ್ಕೇಪ್ ಆಗಿದ್ದಾರೆ. ಜಮೀರ್ ಭೀಕರ ಕೊಲೆಯಿಂದಾಗಿ ಕಲಬುರಗಿ ನಗರದ ಜನರು ಬೆಚ್ಚಿಬಿದ್ದಿದ್ದಾರೆ. ಸದ್ಯ ಕೊಲೆ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.  

ಇದನ್ನೂ ಓದಿ: ಎಕ್ಸ್ಪ್ರೆಸ್ ಕ್ಲಿನಿಕ್ ದೇಶಕ್ಕೆ ಮಾದರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News