ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ಐವರ ದುರ್ಮರಣ..!

ಕೊಪ್ಪಳದಲ್ಲಿ ಬರ್ತ್ ಡೇ ಪಾರ್ಟಿ ಮುಗಿಸಿಕೊಂಡು ಯಲಬುರ್ಗಾ ತಾಲೂಕಿನ ಬಿನ್ನಾಳಕ್ಕೆ ವಾಪಸ್ ಹೋಗುವಾಗ ಅಪಘಾತ ಸಂಭವಿಸಿದೆ.

Written by - Zee Kannada News Desk | Last Updated : Jul 24, 2022, 09:37 AM IST
  • ಕೊಪ್ಪಳದಲ್ಲಿ ಭೀಕರ ರಸ್ತೆ ಅಪಘಾತಕ್ಕೆ ಒಂದೇ ಕುಟುಂಬದ ಐವರು ಬಲಿ
  • ಬರ್ತ್‍ ಡೇ ಪಾರ್ಟಿ ಮುಗಿಸಿಕೊಂಡು ವಾಪಸ್ ಆಗುತ್ತಿದ್ದವರು ಮಸಣಕ್ಕೆ
  • ಸ್ಕಾರ್ಪಿಯೋಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಸಂಭವಿಸಿದ ದುರ್ಘಟನೆ
ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ಐವರ ದುರ್ಮರಣ..! title=
ರಸ್ತೆ ಅಪಘಾತಕ್ಕೆ ಒಂದೇ ಕುಟುಂಬದ ಐವರು ಬಲಿ

ಕೊಪ್ಪಳ: ಶನಿವಾರ ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಐವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಭಾನಾಪುರ ಬಳಿ ನಡೆದಿದೆ.  

ಬಿನ್ನಾಳ ಗ್ರಾಮದ ದೇವಪ್ಪ ಕೊಪ್ಪದ(62), ಸೊಸೆ ಗಿರಿಜಮ್ಮ(45), ಅಣ್ಣನ ಮಕ್ಕಳಾದ ಶಾಂತಮ್ಮ(35), ಪಾರ್ವತಮ್ಮ(32), ಸಂಬಂಧಿ ಕಸ್ತೂರಮ್ಮ(20) ಮೃತರು ಎಂದು ತಿಳಿದುಬಂದಿದೆ. ಸ್ಕಾರ್ಪಿಯೋ ವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ.

ಇದನ್ನೂ ಓದಿ: BY Vijayendra : ಪಿಎಸ್ಐ ಹಗರಣ ಕಾಂಗ್ರೆಸ್ ಪಕ್ಷದ ಕೂಸು : ಬಿವೈ  ವಿಜಯೇಂದ್ರ

ಕೊಪ್ಪಳದಲ್ಲಿ ಬರ್ತ್ ಡೇ ಪಾರ್ಟಿ ಮುಗಿಸಿಕೊಂಡು ಯಲಬುರ್ಗಾ ತಾಲೂಕಿನ ಬಿನ್ನಾಳಕ್ಕೆ ವಾಪಸ್ ಹೋಗುವಾಗ ಅಪಘಾತ ಸಂಭವಿಸಿದೆ. ಯಲಬುರ್ಗಾ ತಾಲೂಕು ಬಿನ್ನಾಳ ಗ್ರಾಮದ ದೇವಪ್ಪ ಕೊಪ್ಪದ ಸೇರಿ ಅವರ ಕುಟುಂಬದ ಐವರು ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. ಅಪಘಾತದ ರಭಸಕ್ಕೆ ಸ್ಕಾರ್ಪಿಯೋ ವಾಹನ‌ ಸಂಪೂರ್ಣ ನಜ್ಜುಗುಜ್ಜಾಗಿದೆ.

ಇಬ್ಬರು ಮಕ್ಕಳು ಸೇರಿ ಒಟ್ಟು 9 ಜನ ಪ್ರಯಾಣಿಸುತ್ತಿದ್ದ ಸ್ಕಾರ್ಪಿಯೋಗೆ ಅಪರಿಚಿತ ವಾಹನ ಡಿಕ್ಕಿಯಾಗಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ನಾಲ್ವರನ್ನು ಜಿಲ್ಲಾಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚಾಲಕ ಹರ್ಷವರ್ಧನ, ಮಕ್ಕಳಾದ ಬಸವರಾಜ, ಪುಟ್ಟರಾಜ, ಭೂಮಿಕಾರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸ್ಕಾರ್ಪಿಯೋಗೆ ಡಿಕ್ಕಿ ಹೊಡೆಸಿ ಅಪರಿಚಿತ ವಾಹನದ ಚಾಲಕ ಎಸ್ಕೇಪ್ ಆಗಿದ್ದಾನೆ. ಆತನ ಪತ್ತೆಗಾಗಿ ಪೊಲೀಸರು ಬಲೆ ಬಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಳ್ಳಲಾಗಿದೆ.   

ಇದನ್ನೂ ಓದಿ: Mallikarjun Kharge : 'ಚುನಾವಣೆ ಮುನ್ನೆವೇ ನಾನು ಸಿಎಂ, ನಾನು ಸಿಎಂ ಎನ್ನುವುದು ಸರಿಯಲ್ಲಾ'

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News