ವರದಕ್ಷಿಣೆ ಕಿರುಕುಳ ಆರೋಪ: ಕತ್ತು ಹಿಸುಕಿ ಪತ್ನಿಯ ಕೊಲೆ ಮಾಡಿದ ಪತಿ!

Kolar Murder Case: ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಸಯ್ಯದ್ ಶುಹೇಬ್‍ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ಸಂಬಂಧ ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Written by - Puttaraj K Alur | Last Updated : Nov 22, 2023, 08:11 PM IST
  • ವರದಕ್ಷಿಣೆ ಕಿರುಕುಳ ಹಿನ್ನಲೆ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿರುವ ಪತಿ
  • ತವರು ಮನೆಯಿಂದ ವರದಕ್ಷಿಣೆ ತರುವಂತೆ ಪತ್ನಿಗೆ ಕಿರುಕುಳ ನೀಡುತ್ತಿದ್ದ ಪತಿ
  • ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿರುವ ಗಲ್ ಪೇಟೆ ಪೊಲೀಸರು
ವರದಕ್ಷಿಣೆ ಕಿರುಕುಳ ಆರೋಪ: ಕತ್ತು ಹಿಸುಕಿ ಪತ್ನಿಯ ಕೊಲೆ ಮಾಡಿದ ಪತಿ! title=
ಕತ್ತು ಹಿಸುಕಿ ಪತ್ನಿಯ ಕೊಲೆ ಮಾಡಿದ ಪತಿ!

ಕೋಲಾರ: ವರದಕ್ಷಿಣೆ ಕಿರುಕುಳ ಆರೋಪದ ಹಿನ್ನೆಲೆ ಪತಿಯೇ ಪತ್ನಿಯ ಕೊಲೆಗೈದಿರುವ ಘಟನೆ ನಡೆದಿದೆ. ಕೋಲಾರದ ಮಿಲ್ಲತ್ ನಗರದಲ್ಲಿ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ. ಮೃತಳನ್ನು ಮಾಹೇನೂರ್ (22) ಎಂದು ಗುರುತಿಸಲಾಗಿದೆ.

ಮಾಹೇನೂರ್ ಪತಿ ಸಯ್ಯದ್ ಶುಹೇಬ್ ಎಂಬಾತ ಕೊಲೆ ಮಾಡಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಬಿಂಬಿಸಲು ಯತ್ನಿಸಿದ್ದಾನೆ ಎನ್ನಲಾಗಿದೆ. 2 ವರ್ಷಗಳ ಹಿಂದಷ್ಟೇ ಸಯ್ಯದ್ ಮತ್ತು ಮಾಹೇನೂರ್ ಮದುವೆಯಾಗಿದ್ದರು. ಕಳೆದ ಕೆಲವು ತಿಂಗಳಿನಿಂದ ಹಣ-ಆಸ್ತಿ ಹಾಗೂ ಬುಲೆಟ್ ಬೈಕ್‍ಗಾಗಿ ತವರಿನಿಂದ ಹಣ ತರುವಂತೆ ಪತ್ನಿಗೆ ಪೀಡಿಸುತ್ತಿದ್ದ ಅಂತಾ ಸಯ್ಯದ್ ವಿರುದ್ಧ ಮೃತಳ ಸಂಬಂಧಿಕರು ಆರೋಪಿಸಿದ್ದಾರೆ.

ಇದನ್ನೂ ಓದಿ: ಕಲೆಕ್ಷನ್ ಕೊಡಿ, ನಿಗಮ-ಮಂಡಳಿ ಅಧಿಕಾರ ಪಡಿ: ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ!

ಈಗಾಗಲೇ 3 ಬಾರಿ ನ್ಯಾಯ ಪಂಚಾಯ್ತಿ ಮಾಡಿದರೂ ಪ್ರಯೋಜನವಾಗಿಲ್ಲ. ತವರಿನಿಂದ ಹಣ ತರುವಂತೆ ಪತ್ನಿಗೆ ಸಯ್ಯದ್ ಪೀಡಿಸುತ್ತಿದ್ದನಂತೆ. ಪತಿ-ಪತ್ನಿಯ ನಡುವೆ ಇದೇ ವಿಚಾರವಾಗಿ ಜಗಳವಾಗಿದ್ದು, ಬಳಿಕ ಆಕೆಯ ಕತ್ತುಹಿಸುಕಿ ಹತ್ಯೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಪತಿಯೇ ನಾಟಕವಾಡುತ್ತಿದ್ದಾನೆ ಅಂತಾ ಸಂಬಂಧಿಕರು ಹೇಳಿಕೊಂಡಿದ್ದಾರೆ.

ಇನ್ನೂ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಸಯ್ಯದ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ಸಂಬಂಧ ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Tumakuru: ನಿಶ್ಚಿತಾರ್ಥದ ಉಂಗುರ ಕಳೆದು ಹೋಗಿದ್ದಕ್ಕೆ ವಿಷ ಸೇವಿಸಿ ಯುವಕ ಆತ್ಮಹತ್ಯೆ!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News