Shocking: ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ರಹಸ್ಯ ಕ್ಯಾಮೆರಾ, ಹಲವರ ನಗ್ನ ವಿಡಿಯೋ ಸೆರೆ!

ಆರೋಪಿ ರಹಸ್ಯವಾಗಿ ವಿಡಿಯೋ ಮಾಡುತ್ತಿರುವುದನ್ನು ಗಮನಿಸಿದ ವಿದ್ಯಾರ್ಥಿನಿಯರು ಹೌಹಾರಿದ್ದಾರೆ. ಕೂಡಲೇ ಆತನನ್ನು ಹಿಡಿಯಲು ಪ್ರಯತ್ನಿದ್ದಾರೆ. ಆದರೆ ಕ್ಷಣಾರ್ಧದಲ್ಲಿಯೇ ಆತ ಸ್ಥಳದಿಂದ ಎಸ್ಕೇಪ್‌ ಆಗಿದ್ದ.

Written by - VISHWANATH HARIHARA | Edited by - Puttaraj K Alur | Last Updated : Nov 22, 2022, 07:24 PM IST
  • ವಿದ್ಯಾರ್ಥಿನಿಯರ ಶೌಚಾಲಯಕ್ಕೆ ನುಗ್ಗಿ ನಗ್ನ ವಿಡಿಯೋ ಸೆರೆಹಿಡಿಯುತ್ತಿದ್ದ ಕಾಮುಕನ ಬಂಧನ
  • ಮೊಬೈಲ್ ಕ್ಯಾಮೆರಾದಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಸೆರೆ ಹಿಡಿಯುತ್ತಿದ್ದ ಆರೋಪಿ
  • 1200ಕ್ಕೂ ಹೆಚ್ಚು ವಿಡಿಯೋಗಳನ್ನು ರಹಸ್ಯವಾಗಿ ಸೆರೆಹಿಡಿದಿರುವ ಆರೋಪಿ
Shocking: ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ರಹಸ್ಯ ಕ್ಯಾಮೆರಾ, ಹಲವರ ನಗ್ನ ವಿಡಿಯೋ ಸೆರೆ!    title=
ನಗ್ನ ವಿಡಿಯೋ ಸೆರೆಹಿಡಿಯುತ್ತಿದ್ದ ಕಾಮುಕನ ಬಂಧನ!

ಬೆಂಗಳೂರು: ಕಾಲೇಜಿನ‌ ಮಹಿಳಾ ಶೌಚಾಲಯದ ಒಳನುಗ್ಗಿ ರಹಸ್ಯ ಕ್ಯಾಮೆರಾ ಮೂಲಕ‌ ವಿದ್ಯಾರ್ಥಿನಿಯರ ನಗ್ನ ವಿಡಿಯೋ ಚಿತ್ರೀಕರಿಸುತ್ತಿದ್ದ ಯುವಕನನ್ನು ಗಿರಿನಗರ ಪೊಲೀಸರು ಬಂಧಿಸಿದ್ದಾರೆ. ಶುಭಾಂ ಆಜಾದ್ ಬಂಧಿತ ಆರೋಪಿ. ಈ ಹೊಸಕೆರೆಹಳ್ಳಿಯ ಖಾಸಗಿ ಕಾಲೇಜೊವೊಂದರಲ್ಲಿ ಇಂಜಿನಿಯರಿಂಗ್‌ 5ನೇ ಸೆಮಿಸ್ಟರ್ ವ್ಯಾಸಂಗ ಮಾಡುತ್ತಿದ್ದಾನೆ.

ಸದ್ಯ ಈ ಕೃತ್ಯದ ಬಗ್ಗೆ ತಿಳಿದ ತಕ್ಷಣ ಕಾಲೇಜು ಆಡಳಿತ ಮಂಡಳಿ ನೀಡಿದ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಿಹಾರ ಮೂಲದವನಾದ ಆರೋಪಿ ಕಾಲೇಜಿನ ಮಹಿಳಾ ಶೌಚಾಲಯದಲ್ಲಿ ರಹಸ್ಯವಾಗಿ ಅವಿತುಕೊಳ್ಳುತ್ತಿದ್ದ. ಶೌಚಕ್ಕಾಗಿ ಬರುವ ಮಹಿಳೆ ಹಾಗೂ ಯುವತಿಯರು ಅರೆನಗ್ನ ಸ್ಥಿತಿಯಲ್ಲಿರುವ ಫೋಟೋ ಹಾಗೂ ವಿಡಿಯೋಗಳನ್ನು ರಹಸ್ಯವಾಗಿ ಮೊಬೈಲ್‍ನಲ್ಲಿ ಚಿತ್ರೀಕರಿಸುತ್ತಿದ್ದ. ಇದೇ ರೀತಿ ನ.18ರಂದು ಶೌಚಾಲದಲ್ಲಿರುವಾಗ ಸೀಕ್ರೆಟ್ ಆಗಿ ವಿಡಿಯೋ ಮಾಡಿಕೊಳ್ಳುತ್ತಿದ್ದ.

ಇದನ್ನೂ ಓದಿ: Viral Video: ಲಾರಿ ಡಿಕ್ಕಿ- ಬೈಕ್ ಸವಾರ ಸ್ಥಳದಲ್ಲೇ ಸಾವು, ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಆರೋಪಿ ರಹಸ್ಯವಾಗಿ ವಿಡಿಯೋ ಮಾಡುತ್ತಿರುವುದನ್ನು ಗಮನಿಸಿದ ವಿದ್ಯಾರ್ಥಿನಿಯರು ಹೌಹಾರಿದ್ದಾರೆ. ಕೂಡಲೇ ಆತನನ್ನು ಹಿಡಿಯಲು ಪ್ರಯತ್ನಿದ್ದಾರೆ. ಆದರೆ ಕ್ಷಣಾರ್ಧದಲ್ಲಿಯೇ ಆತ ಸ್ಥಳದಿಂದ ಎಸ್ಕೇಪ್‌ ಆಗಿದ್ದಾನೆ. ಈ ವಿಷಯವನ್ನು ಕಾಲೇಜು ಅಡಳಿತ ಮಂಡಳಿಗೆ ವಿದ್ಯಾರ್ಥಿನಿಯರು ತಿಳಿಸಿದ್ದಾರೆ.  ಈ ಸಂಬಂಧ ಆಡಳಿತ ಮಂಡಳಿ ಮಹಿಳಾ ಶೌಚಾಲಯದ ಬಳಿ ಅಳವಡಿಸಿದ್ದ ಸಿಸಿ ಕ್ಯಾಮರ ಪರಿಶೀಲಿಸಿದಾಗ ಈತನ ಕೃತ್ಯ ಬಯಲಾಗಿದೆ.

ಈ ಹಿಂದೆಯೂ ಈ ಆರೋಫಿ ಇಂತಹದೇ ಕೃತ್ಯ ಮಾಡಿದ್ದ ಎನ್ನಲಾಗಿದ್ದು, ಕ್ಷಮಾಪಣಾ ಪತ್ರ ಬರೆದಿದ್ದರಿಂದ ಈತನಿಗೆ ವಾರ್ನ್‌ ಮಾಡಿ ಬಿಡಲಾಗಿತ್ತು. ಸದ್ಯ ಮತ್ತದೇ ಪ್ರವೃತ್ತಿ ಮುಂದುವರೆಸಿರುವುದು ಗೊತ್ತಾಗಿ ‌ವಿದ್ಯಾರ್ಥಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಗಿರಿನಗರ ಪೊಲೀಸ್‌ ಠಾಣೆಗೆ ಕಾಲೇಜು ಆಡಳಿತ ಮಂಡಳಿ ದೂರು ನೀಡಿದೆ. ಸದ್ಯ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಪಂಪ್ ವೆಲ್ ಫ್ಲೈ ಓವರ್ ಬಳಿ ಬ್ಲಾಸ್ಟ್ ಗೆ ಸಂಚು ರೂಪಿಸಿದ್ದ ಶಾರಿಕ್ .!

ಬಂಧಿತ ಆರೋಪಿ ಸುಮಾರು 1200ಕ್ಕೂ ಹೆಚ್ಚು ವಿಡಿಯೊಗಳನ್ನು ರಹಸ್ಯವಾಗಿ ಸೆರೆಹಿಡಿದಿರುವುದು ಗೊತ್ತಾಗಿದೆ. ಆರೋಪಿಯ ಬಳಿಯಿದ್ದ ಮೊಬೈಲ್‌, ಲ್ಯಾಪ್‌ಟ್ಯಾಪ್‌  ಮತ್ತು ಐಪಾಡ್‌ ಸೀಜ್‌ ಮಾಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News