ನವದೆಹಲಿ: ಪತ್ನಿ ಮತ್ತು ತನ್ನಿಬ್ಬರು ಮಕ್ಕಳನ್ನು ಕೊಂದು ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಆಘಾತಕಾರಿ ಘಟನೆ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ನಡೆದಿದೆ ಎಂದು ANI ಸುದ್ದಿಸಂಸ್ಥೆ ವರದಿ ಮಾಡಿದೆ.
ದೆಹಲಿಯ ಪಿಎಸ್ ಶಹದಾರದ ಜ್ಯೋತಿ ನಗರ ಪ್ರದೇಶದ ಬಳಿ ಈ ಘಟನೆ ನಡೆದಿದೆ. ಸುಶೀಲ್ ಎಂಬ ವ್ಯಕ್ತಿ ಮಂಗಳವಾರ ತನ್ನ ಪತ್ನಿ ಅನುರಾಧಾ, 6 ವರ್ಷದ ಪುತ್ರಿ ಮತ್ತು 13 ವರ್ಷದ ಪುತ್ರನನ್ನು ಚಾಕುವಿನಿಂದ ಇರಿದು ಕೊಂದಿದ್ದಾನೆ.
ಇದನ್ನೂ ಓದಿ: General Elections 2024: 2024 ರ ಚುನಾವಣೆಗೂ ಮುನ್ನ ನಿತಿಶ್ ಕುಮಾರ್ ಗೆ ನೀಡಿದ ಬೆಂಬಲ ಹಿಂಪಡೆಯಲಿದ್ದಾರೆ ಮಾಂಝೀ!
The accused had searched on the internet 'how to tie knot' before killing his family members. At the place of occurrence, 3 bodies were found. FSL teams are inspecting the scene of occurrence: Delhi Police
— ANI (@ANI) May 16, 2023
ಪತಿ ಮತ್ತು ತನ್ನಿಬ್ಬರು ಮಕ್ಕಳನ್ನು ಕೊಂದ ಬಳಿಕ ಸುಶೀಲ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಪುತ್ರನನ್ನು ಜಿಟಿಬಿ ಆಸ್ಪತ್ರೆಗೆ ದಾಖಲಿಸಿದರೂ ಪ್ರಯೋಜನವಾಗಿಲ್ಲ.
ಮೇಲ್ನೋಟಕ್ಕೆ ಕೌಟುಂಬಿಕ ಕಲಹದಿಂದ ಬೇಸತ್ತು ಸುಶೀಲ್ ಹೆಂಡತಿ- ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: PM Modi ಗೂ ಮುನ್ನ ಅಮೆರಿಕಾಗೆ ತೆರಳಲಿದ್ದಾರೆ ರಾಹುಲ್ ಗಾಂಧಿ, 10 ದಿನಗಳ ಕಾಲ ಏನ್ ಮಾಡಲಿದ್ದಾರೆ?
ಮೃತ ಆರೋಪಿ ಸುಶೀಲ್ ತನ್ನ ಕುಟುಂಬ ಸದಸ್ಯರನ್ನು ಕೊಲ್ಲುವ ಮೊದಲು ಅಂತರ್ಜಾಲದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದು ಹೇಗೆಂದು ಹುಡುಕಾಡಿದ್ದಾನೆ. ಘಟನೆ ನಡೆದ ಸ್ಥಳದಲ್ಲಿ 3 ಶವಗಳು ಪತ್ತೆಯಾಗಿವೆ. ಎಫ್ಎಸ್ಎಲ್ ತಂಡಗಳು ಘಟನೆಯ ಸ್ಥಳವನ್ನು ಪರಿಶೀಲಿಸುತ್ತಿವೆ. ನಾವು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದು, ಉನ್ನತಮಟ್ಟದ ತನಿಖೆ ನಡೆಸುತ್ತಿದ್ದೇವೆಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.