Bengaluru : ಹೆಂಡತಿ ಜೊತೆ ಕಿರಿಕ್ : ಎಣ್ಣೆ ಏಟಲ್ಲಿ ರಸ್ತೆ ಬದಿಯಲ್ಲಿ ವ್ಯಕ್ತಿ ಸುಸೈಡ್

ಪ್ರತಿದಿನ ಕುಡಿದು ಬಂದು ಹೆಂಡತಿ ಜೊತೆ ಕಿರಿಕ್ ಮಾಡುತ್ತಿದ್ದ ವ್ಯಕ್ತಿಯೊಬ್ಬ ಜನನಿಬಿಡ ಪ್ರದೇಶದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ‌. 

Written by - VISHWANATH HARIHARA | Last Updated : Feb 27, 2023, 01:01 PM IST
  • ತಿದಿನ ಕುಡಿದು ಬಂದು ಹೆಂಡತಿ ಜೊತೆ ಕಿರಿಕ್
  • ಜನನಿಬಿಡ ಪ್ರದೇಶದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ
  • ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿ
Bengaluru : ಹೆಂಡತಿ ಜೊತೆ ಕಿರಿಕ್ : ಎಣ್ಣೆ ಏಟಲ್ಲಿ ರಸ್ತೆ ಬದಿಯಲ್ಲಿ ವ್ಯಕ್ತಿ ಸುಸೈಡ್ title=

ಬೆಂಗಳೂರು : ಪ್ರತಿದಿನ ಕುಡಿದು ಬಂದು ಹೆಂಡತಿ ಜೊತೆ ಕಿರಿಕ್ ಮಾಡುತ್ತಿದ್ದ ವ್ಯಕ್ತಿಯೊಬ್ಬ ಜನನಿಬಿಡ ಪ್ರದೇಶದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ‌. 

ಚನ್ನಪಟ್ಟಣ ಮೂಲದ ಮಾದೇವ(40) ಮೃತ ವ್ಯಕ್ತಿಯಾಗಿದ್ದಾನೆ. ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು ಸ್ಥಳೀಯರು ಶವ ನೋಡಿ ಬೆಚ್ಚಿಬಿದ್ದು ಪೊಲೀಸರಿಗೆ ಮಾಹಿತಿ‌ ನೀಡಿದ್ದರು. ಮೃತ ಮಾದೇವ ಪ್ರತಿದಿನ ಕುಡಿದು ಹೆಂಡತಿ ಜೊತೆ ಜಗಳವಾಡಿ ಹಿಂಸೆ ನೀಡುತ್ತಿದ್ದ. ಈತನ ವರ್ತನೆಯಿಂದ ನೊಂದಿದ್ದ ಪತ್ನಿ ಅನೇಕ ಬಾರಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಳು. ಪೊಲೀಸರು ಹೆಂಡತಿ ಜೊತೆ ಕಿರಿಕ್ ಮಾಡಬೇಡ ಎಂದು ವಾರ್ನ್ ಮಾಡಿ ಕಳುಹಿಸಿದ್ದರು.

ಇದನ್ನೂ ಓದಿ : Crime News: ಪ್ರೇಮ ವೈಫಲ್ಯ ಹಿನ್ನೆಲೆ ವಿಷ ಸೇವಿಸಿ ಯುವಕ ಆತ್ಮಹತ್ಯೆ ಯತ್ನ!

ಈಗಾಗಲೇ ಮೂರು ಮದುವೆಯಾಗಿದ್ದ ಮಾದೇವ ಬುದ್ದಿ ಕಲಿಯದೆ,ನಿನ್ನೆ ಬೆಳಗ್ಗೆ ಹೆಂಡತಿ ಜೊತೆ ಜಗಳವಾಡಿ 150 ರೂ. ಪಡೆದು ಕಂಠಪೂರ್ತಿ ಕುಡಿದು ಬಂದು ಮತ್ತೆ ಗಲಾಟೆ ಶುರುಮಾಡಿದ್ದ. ಈ ವಿಷಯವನ್ನು ಮಾದೇವನ ಪತ್ನಿ ಪೊಲೀಸರಿಗೆ ತಿಳಿಸಿದ್ದಳು. 

ಸ್ಥಳಕ್ಕೆ ಬಂದ ಪೊಲೀಸರು ಮನೆಗೆ ಬಂದು ಬುದ್ದಿ ಹೇಳಿದ್ದರಿಂದ ಮನನೊಂದ ಮಾದೇವ ಪಾಪರೆಡ್ಡಿಪಾಳ್ಯ ಸರ್ಕಲ್ ಬಳಿ ಬಂದು ಮರಕ್ಕೆ ನೇಣು ಬಿಗಿದುಕೊಂಡಿದ್ದಾನೆ‌. ಸದ್ಯ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿರುವ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

ಇದನ್ನೂ ಓದಿ : Crime News: ಮನೆ ಕಳ್ಳತನ ಮಾಡಿ ಎಸ್ಕೇಪ್ ಅಗಿದ್ದ ಖದೀಮ ಗಿರವಿ ಅಂಗಡಿಯಲ್ಲಿ ಸಿಕ್ಕಿಬಿದ್ದ!

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News