Crime News: ಬ್ಯಾನ್ ಆಗಿರುವ ಇ-ಸಿಗರೇಟ್‌ಗಳ ಸಂಗ್ರಹಿಸಿ ಮಾರಾಟ: ಕೇರಳದ ಆರೋಪಿ ಬಂಧನ

E-cigarettes Seller Arrest: ಆರೋಪಿ ಶೋಯೆಬ್ ಕೆಲ ಕಾಲ ದುಬೈನಲ್ಲಿದ್ದು ಭಾರತಕ್ಕೆ ಮರಳಿ ಬೆಂಗಳೂರಿಗೆ ಬಂದು ಸುದ್ದಗುಂಟೆಪಾಳ್ಯದ ಸಹೋದರನ ಮನೆಯಲ್ಲಿ ವಾಸವಿದ್ದ. 

Written by - VISHWANATH HARIHARA | Last Updated : Jan 30, 2024, 01:42 PM IST
  • ಕೇಂದ್ರ ಸರ್ಕಾರ ನಿಷೇಧಿಸಿರುವ ಎಲೆಕ್ಟ್ರಾನಿಕ್ ಸಿಗರೇಟ್‌
  • ಎಲೆಕ್ಟ್ರಾನಿಕ್ ಸಿಗರೇಟುಗಳನ್ನ ಮನೆಯಲ್ಲಿ ಸಂಗ್ರಹಿಸಿ ಮಾರಾಟ
  • ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಪೊಲೀಸರಿಂದ ಆರೋಪಿ ಅರೆಸ್ಟ್‌
Crime News: ಬ್ಯಾನ್ ಆಗಿರುವ ಇ-ಸಿಗರೇಟ್‌ಗಳ ಸಂಗ್ರಹಿಸಿ ಮಾರಾಟ: ಕೇರಳದ ಆರೋಪಿ ಬಂಧನ  title=

ಬೆಂಗಳೂರು : ಕೇಂದ್ರ ಸರ್ಕಾರ ನಿಷೇಧಿಸಿರುವ ಎಲೆಕ್ಟ್ರಾನಿಕ್ ಸಿಗರೇಟುಗಳನ್ನ ಮನೆಯಲ್ಲಿ ಸಂಗ್ರಹಿಸಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನ ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದ ಪೊಲೀಸರು ಬಂಧಿಸಿದ್ದಾರೆ.

ಕೇರಳ ಮೂಲದ ಶೋಯೆಬ್ ಬಂಧಿತ ಆರೋಪಿ‌ಯಾಗಿದ್ದು, ಈತನಿಂದ 3 ಕೋಟಿ ರೂಪಾಯಿ ಮೌಲ್ಯದ ಇ-ಸಿಗರೇಟುಗಳನ್ನ ಸೀಜ್ ಮಾಡಲಾಗಿದೆ. ಆರೋಪಿ ಶೋಯೆಬ್ ಕೆಲ ಕಾಲ ದುಬೈನಲ್ಲಿದ್ದು ಭಾರತಕ್ಕೆ ಮರಳಿ ಬೆಂಗಳೂರಿಗೆ ಬಂದು ಸುದ್ದಗುಂಟೆಪಾಳ್ಯದ ಸಹೋದರನ ಮನೆಯಲ್ಲಿ ವಾಸವಿದ್ದ. 

ಇದನ್ನೂ ಓದಿ: Karnataka Weather: ರಾಜ್ಯದೆಲ್ಲೆಡೆ ಚಳಿಯ ಜೊತೆಗೆ ಹೆಚ್ಚಾಗಲಿದೆ ಉಷ್ಣಾಂಶ! 

ದುಬೈಯಿಂದ ದೆಹಲಿ, ದೆಹಲಿಯಿಂದ ಬೆಂಗಳೂರಿಗೆ ಕೊರಿಯರ್ ಮೂಲಕ‌ ಇ-ಸಿಗರೇಟ್ ತರಿಸಿಕೊಳ್ಳುತ್ತಿದ್ದ. ಸಿಗರೇಟ್ ಗಳನ್ನು ಆರೋಪಿ ಮನೆಯಲ್ಲಿಯೇ ಸಂಗ್ರಹಿಸಿಟ್ಟುಕೊಂಡು ಗಿರಾಕಿಗಳಿಗೆ ಸರಬರಾಜು ಮಾಡುತ್ತಿದ್ದ. ಆರೋಪಿಯ ಕುರಿತು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದ ಸಿಸಿಬಿಯ ಮಾದಕ ದ್ರವ್ಯ ನಿಗ್ರಹದಳದ ಅಧಿಕಾರಿಗಳು ಶೋಯೆಬ್ ನನ್ನು ಬಂಧಿಸಿದ್ದಾರೆ.

ಬಂಧಿತನಿಂದ ಬರೋಬ್ಬರಿ 3 ಕೋಟಿ ಮೌಲ್ಯದ 6 ಸಾವಿರ ಇ-ಸಿಗರೇಟುಗಳನ್ನ ವಶಕ್ಕೆ ಪಡೆಯಲಾಗಿದ್ದು ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈತನ ಹಿಂದೆ ಯಾರಿದ್ದಾರೆ ಎಂಬುದರ ಬಗ್ಗೆಯೂ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಇದನ್ನೂ ಓದಿ: ನಾನೂ ಒಬ್ಬ ಹಿಂದೂ, ಎಲ್ಲಾ ಧರ್ಮಗಳ ಜನರನ್ನೂ ಪ್ರೀತಿಸುತ್ತೇನೆ.: ಮುಖ್ಯಮಂತ್ರಿ ಸಿದ್ದರಾಮಯ್ಯ 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News