Shocking news: ಆನ್‍ಲೈನ್ ಉದ್ಯೋಗ ವಂಚನೆ; ಮಕ್ಕಳೊಂದಿಗೆ ದಂಪತಿ ಆತ್ಮಹತ್ಯೆ!

ಸಾಲಬಾಧೆಯಿಂದ ಹೊರಬರಲಾರದೆ ತಮ್ಮ 3 ಮತ್ತು 8 ವರ್ಷದ ಮಕ್ಕಳಿಗೆ ವಿಷ ಉಣಿಸಿ ಬಳಿಕ ದಂಪತಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

Written by - Puttaraj K Alur | Last Updated : Jul 14, 2023, 06:02 PM IST
  • ಆನ್‍ಲೈನ್ ಉದ್ಯೋಗ ವಂಚನೆ ಜಾಲಕ್ಕೆ ಸಿಲುಕಿ ಇಬ್ಬರು ಮಕ್ಕಳೊಂದಿಗೆ ದಂಪತಿ ಆತ್ಮಹತ್ಯೆ
  • ಮಧ್ಯಪ್ರದೇಶದ ರಾಜಧಾನಿ ಭೋಪಾಲ್‍ನಲ್ಲಿ ನಡೆದಿರುವ ಹೃದಯವಿದ್ರಾವಕ ಘಟನೆ
  • ಇಬ್ಬರು ಮಕ್ಕಳಿಗೆ ವಿಷ ಉಣಿಸಿ ಬಳಿಕ ನೇಣುಬಿಗಿದುಕೊಂಡು ದಂಪತಿ ಆತ್ಮಹತ್ಯೆ
Shocking news: ಆನ್‍ಲೈನ್ ಉದ್ಯೋಗ ವಂಚನೆ; ಮಕ್ಕಳೊಂದಿಗೆ ದಂಪತಿ ಆತ್ಮಹತ್ಯೆ! title=
ಇಬ್ಬರು ಮಕ್ಕಳೊಂದಿಗೆ ದಂಪತಿ ಆತ್ಮಹತ್ಯೆ!

ಭೋಪಾಲ್: ಆನ್‍ಲೈನ್ ಉದ್ಯೋಗ ವಂಚನೆಯ ಜಾಲಕ್ಕೆ ಸಿಲುಕು ಇಬ್ಬರು ಮಕ್ಕಳೊಂದಿಗೆ ದಂಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಧ್ಯಪ್ರದೇಶದ ರಾಜಧಾನಿ ಭೋಪಾಲ್‍ನಲ್ಲಿ ಈ ಹೃದಯವಿದ್ರಾವಕ ಘಟನೆ ನಡೆದಿದೆ.

ಸಾಲಬಾಧೆಯಿಂದ ಹೊರಬರಲಾರದೆ ತಮ್ಮ 3 ಮತ್ತು 8 ವರ್ಷದ ಮಕ್ಕಳಿಗೆ ವಿಷ ಉಣಿಸಿ ಬಳಿಕ ದಂಪತಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಮನೀಶ್ ಸಿಸೋಡಿಯಾ ಜಾಮೀನು ಅರ್ಜಿ: ಇಡಿ, ಸಿಬಿಐ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್

ಭೋಪಾಲ್ ನಗರದ ನೀಲ್ಬದ್ ಪ್ರದೇಶದ ತಮ್ಮ ನಿವಾಸದಲ್ಲಿ ಒಂದೇ ಕುಟುಂಬ ನಾಲ್ವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರಿಗೆ ಸೂಸೈಡ್ ನೋಟ್ ಪತ್ತೆಯಾಗಿದೆ.

ಖಾಸಗಿ ವಿಮಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ದಂಪತಿ ಇಬ್ಬರ ಮಕ್ಕಳೊಂದಿಗೆ ಸಂತೋಷದಿಂದ ಬಾಳುತ್ತಿದ್ದರು. ಆದರೆ ಮನೆಯ ಯಜಮಾನ ಆನ್‍ಲೈನ್ ಉದ್ಯೋಗಾವಕಾಶವನ್ನು ನಂಬಿ ಸಾಕಷ್ಟು ಹಣ ಕಳೆದುಕೊಂಡಿದ್ದ. ಕೊನೆಗೆ ಸಾಲ ಮಾಡಿ ಅದನ್ನು ತೀರಿಸಲಾಗದೆ ಪರದಾಡಿದ್ದಾರೆ. ಬಳಿಕ ಆತ್ಮಹತ್ಯೆಯ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ಸ್ಥಳದಲ್ಲಿ ದೊರೆತ ಸೂಸೈಡ್ ನೋಟ್‍ ಆಧಾರಿಸಿ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಮತ್ತೊಂದು ಚಿರತೆ ಸಾವು , 4 ತಿಂಗಳಲ್ಲಿ 8 ನೇ ಸಾವು

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News