Laxman Savadi Car Accident : ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಕಾರು ಅಪಘಾತ..! 

ಅದೃಷ್ಟವಶಾತ್ ಕಾರಿನಲ್ಲಿದ್ದ ವಿಧಾನಪರಿಷತ್ ಸದಸ್ಯ ಲಕ್ಷ್ಮಣ ಸವದಿ ಪ್ರಾಣಾಪಾಯದಿಂದ‌ ಪಾರಾಗಿದ್ದಾರೆ.

Written by - Zee Kannada News Desk | Last Updated : Aug 31, 2022, 03:53 PM IST
  • ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಹಾರೋಗೇರಿ ಪಟ್ಟಣ
  • ಮಾಜಿ ಡಿಸಿಎಂ ಲಕ್ಷ್ಮಣ್ ಸವದಿಯುವರು ಕಾರು ಅಪಘಾತ
  • ವಿಧಾನಪರಿಷತ್ ಸದಸ್ಯ ಲಕ್ಷ್ಮಣ ಸವದಿ ಪ್ರಾಣಾಪಾಯದಿಂದ‌ ಪಾರು
Laxman Savadi Car Accident : ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಕಾರು ಅಪಘಾತ..!  title=

ಚಿಕ್ಕೋಡಿ : ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಹಾರೋಗೇರಿ ಪಟ್ಟಣದಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿಯುವರು ಕಾರು ಅಪಘಾತವಾಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ವಿಧಾನಪರಿಷತ್ ಸದಸ್ಯ ಲಕ್ಷ್ಮಣ ಸವದಿ ಪ್ರಾಣಾಪಾಯದಿಂದ‌ ಪಾರಾಗಿದ್ದಾರೆ.

ರಾಯಬಾಗ ತಾಲೂಕಿನ ಹಾರೆಗೇರಿ ಪಟ್ಟಣದ ಹೊರವಲಯದಲ್ಲಿ  ಚಾಲಕನ ನಿಯಂತ್ರಣ ತಪ್ಪಿ ಸವದಿ ತೆರಳುತ್ತಿದ್ದ ಕಾರು ಪಲ್ಟಿಯಾಗಿದೆ.ಈ ವೇಳೆ ರಸ್ತೆ ಬದಿಗೆ ಬಿದ್ದಿದ್ದು ಅದೃಷ್ಟವಶಾತ್ ಲಕ್ಷ್ಮಣ್ ಸವದಿ ಪ್ರಾಣಾಪಾಯದಿಂದ‌ ಪಾರಾಗಿದ್ದಾರೆ. ಕಾರಿನಲ್ಲಿ ಸವದಿ ಸೇರಿ ನಾಲ್ಕು ಜನರು ಪ್ರಯಾಣ ಮಾಡುತ್ತಿದ್ದರು. ಅಥಣಿಯಿಂದ ಬೆಳಗಾವಿಗೆ ಬರುವಾಗ ಕಾರು ಅಪಘಾತವಾಗಿದೆ‌. ಈ ವೇಳೆ ಸ್ಥಳೀಯರ ಸಹಾಯದಿಂದ ಕಾರನ್ನು ಮೇಲಕ್ಕೆ ಎತ್ತಲಾಗಿದೆ. ಕಾರಿನಲ್ಲಿ ಸಿಲುಕಿದ್ದ ಲಕ್ಷ್ಮಣ ಸವದಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಹಾರೋಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ : ಗಣೇಶ ಚತುರ್ಥಿ ಹಿನ್ನೆಲೆ ಚಾಮರಾಜಪೇಟೆ ಈದ್ಗಾ ಮೈದಾನದ ಸುತ್ತ ಖಾಕಿ ಸರ್ಪಗಾವಲು

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News