Australia: ಸಮುದ್ರದಲ್ಲಿ ಮುಳುಗಿ ನಾಲ್ವರು ಭಾರತೀಯರ ದುರ್ಮರಣ..!

Heart breaking tragedy in Australia: ಬುಧವಾರ ಮಧ್ಯಾಹ್ನ 3.30ಕ್ಕೆ ನ್ಯೂಹೇವನ್ ಬಳಿ ನಾಲ್ವರು ನೀರಿನಲ್ಲಿ ಒದ್ದಾಡುತ್ತಿರುವುದನ್ನು ಕಂಡ ತುರ್ತು ಸೇವಾ ಸಿಬ್ಬಂದಿ ಅವರನ್ನು ರಕ್ಷಿಸಲು ಪ್ರಯತ್ನಿಸಿದರೂ ಪ್ರಯೋಜನವಾಗಿಲ್ಲ. ಆ ನಾಲ್ವರನ್ನು ತೀರಕ್ಕೆ ಕರೆದುಕೊಂಡು ಬರುವಷ್ಟರಲ್ಲಿ ಸಾವನ್ನಪ್ಪಿದ್ದರು ಎಂದು ವರದಿಯಾಗಿದೆ.

Written by - Puttaraj K Alur | Last Updated : Jan 25, 2024, 02:51 PM IST
  • ಆಸ್ಟ್ರೇಲಿಯಾದ ಸಮುದ್ರದಲ್ಲಿ ಮುಳುಗಿ ನಾಲ್ವರು ಭಾರತೀಯರು ಮೃತಪಟ್ಟಿದ್ದಾರೆ
  • ವಿಕ್ಟೋರಿಯಾ ರಾಜ್ಯದ ಫಿಲಿಪ್ ದ್ವೀಪದಲ್ಲಿ ಬುಧವಾರ ಈ ದುರ್ಘಟನೆ ಸಂಭವಿಸಿದೆ
  • ಈಜಲು ಹೋಗಿ ಮೂವರು ಮಹಿಳೆಯರು ಸೇರಿದಂತೆ ನಾಲ್ವರ ದುರ್ಮರಣ
Australia: ಸಮುದ್ರದಲ್ಲಿ ಮುಳುಗಿ ನಾಲ್ವರು ಭಾರತೀಯರ ದುರ್ಮರಣ..! title=
ನಾಲ್ವರು ಭಾರತೀಯರ ದುರ್ಮರಣ!

ನವದೆಹಲಿ: ಸಮುದ್ರದಲ್ಲಿ ಮುಳುಗಿ ನಾಲ್ವರು ಭಾರತೀಯರು ಮೃತಪಟ್ಟಿರುವ ಘಟನೆ ಆಸ್ಟ್ರೇಲಿಯಾದಲ್ಲಿ ನಡೆದಿದೆ. ವಿಕ್ಟೋರಿಯಾ ರಾಜ್ಯದ ಫಿಲಿಪ್ ದ್ವೀಪದಲ್ಲಿ ಬುಧವಾರ ಈ ದುರ್ಘಟನೆ ಸಂಭವಿಸಿದೆ. ಕಳೆದ 20 ವರ್ಷಗಲ್ಲೇ ಇದು ವಿಕ್ಟೋರಿಯಾ ಸಮುದ್ರದಲ್ಲಿ ನಡೆದ ಅತ್ಯಂತ ಭೀಕರ ದುರಂತವಾಗಿದೆ ಅಂತಾ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Visa Free Countries: ವೀಸಾ ಇಲ್ಲದಿದ್ದರೂ ನೀವು ಈ ದೇಶಗಳಿಗೆ ಪ್ರಯಾಣಿಸಬಹುದು

ಬುಧವಾರ ಮಧ್ಯಾಹ್ನ 3.30ಕ್ಕೆ ನ್ಯೂಹೇವನ್ ಬಳಿ ನಾಲ್ವರು ನೀರಿನಲ್ಲಿ ಒದ್ದಾಡುತ್ತಿರುವುದನ್ನು ಕಂಡ ತುರ್ತು ಸೇವಾ ಸಿಬ್ಬಂದಿ ಅವರನ್ನು ರಕ್ಷಿಸಲು ಪ್ರಯತ್ನಿಸಿದರೂ ಪ್ರಯೋಜನವಾಗಿಲ್ಲ. ಆ ನಾಲ್ವರನ್ನು ತೀರಕ್ಕೆ ಕರೆದುಕೊಂಡು ಬರುವಷ್ಟರಲ್ಲಿ ಸಾವನ್ನಪ್ಪಿದ್ದರು ಎಂದು ವರದಿಯಾಗಿದೆ.

ಈ ದುರ್ಘಟನೆಗೆ ಸಂಬಂಧಿಸಿದಂತೆ ಕ್ಯಾನ್‌ಬೆರಾದಲ್ಲಿರುವ ಭಾರತೀಯ ಹೈಕಮಿಷನ್ ಗುರುವಾರ ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದೆ. ʼಆಸ್ಟ್ರೇಲಿಯಾದಲ್ಲಿ ಹೃದಯವಿದ್ರಾವಕ ದುರಂತ ನಡೆದಿದೆ.

ಇದನ್ನೂ ಓದಿ: Earthquake: ಭಾರತದ ನೆರೆಯ ದೇಶದಲ್ಲಿ 7.2 ತೀವ್ರತೆಯ ಭೂಕಂಪ, ದೆಹಲಿ-ಎನ್‌ಸಿಆರ್‌ನಲ್ಲೂ ಕಂಪಿಸಿದ ಭೂಮಿ

ವಿಕ್ಟೋರಿಯಾದ ಫಿಲಿಪ್ ದ್ವೀಪದಲ್ಲಿ ಮುಳುಗಿ ನಾಲ್ವರು ಭಾರತೀಯರು ಪ್ರಾಣ ಕಳೆದುಕೊಂಡಿದ್ದಾರೆ. ಸಂತ್ರಸ್ತ ಕುಟುಂಬಗಳಿಗೆ ಸಂತಾಪ. ಎಲ್ಲಾ ಅಗತ್ಯ ಸಹಾಯಕ್ಕಾಗಿ ಮೃತರ ಸಂಬಂಧಿಕರೊಂದಿಗೆ ನಾವು ಸಂಪರ್ಕದಲ್ಲಿದ್ದೇವೆಂದು ಭಾರತೀಯ ವಿದೇಶಾಂಗ ಸಚಿವಾಲಯ ಮತ್ತು ಸಚಿವ ಜೈಶಂಕರ್‌ ಅವರನ್ನು ಟ್ಯಾಗ್‌ ಮಾಡಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News