ಸಾರಿಗೆ ಬಸ್​ ಗುದ್ದಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರ ದುರ್ಮರಣ!

Gadag Crime News: ಕಲ್ಲಾಪೂರದ ಬಸವೇಶ್ವರ ದೇವಸ್ಥಾನಕ್ಕೆ ಕುಟುಂಬವು ಹೊರಟಿತ್ತು. ಕೊಣ್ಣೂರು ಬಳಿಕ ಎರಡು ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಆಘಾತಕ್ಕೆ ಕಾರಿನಲ್ಲಿದ್ದವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ.

Written by - Puttaraj K Alur | Last Updated : Aug 18, 2024, 01:10 PM IST
  • ಸಾರಿಗೆ ಬಸ್​ ಹಾಗೂ ಕಾರಿನ ನಡುವೆ ಭೀಕರ ಅಪಘಾತ
  • ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರ ದುರ್ಮರಣ
  • ನರಗುಂದ ತಾಲೂಕು ಕೊಣ್ಣೂರ ಗ್ರಾಮದ ಹೊರವಲಯದಲ್ಲಿ ಘಟನೆ
ಸಾರಿಗೆ ಬಸ್​ ಗುದ್ದಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರ ದುರ್ಮರಣ! title=
ನಾಲ್ವರ ದುರ್ಮರಣ!

Gadag Crime News: ಸಾರಿಗೆ ಬಸ್​ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗದಗ ಜಿಲ್ಲೆಯ ನರಗುಂದ ತಾಲೂಕು ಕೊಣ್ಣೂರ ಗ್ರಾಮದ ಹೊರವಲಯದಲ್ಲಿ ಈ ದುರ್ಘಟನೆ ನಡೆದಿದೆ.

ಹಾವೇರಿ ಮೂಲದ ರುದ್ರಪ್ಪ ಅಂಗಡಿ (55), ಪತ್ನಿ ರಾಜೇಶ್ವರಿ (45), ಮಗಳು ಐಶ್ವರ್ಯ (16) ಮತ್ತು ಮಗ ವಿಜಯ (12) ಮೃತಪಟ್ಟವರಾಗಿದ್ದಾರೆ. ಬಸ್​​ ಇಳಕಲ್​ನಿಂದ ಹುಬ್ಬಳ್ಳಿಗೆ ಹೊರಟ್ಟಿತ್ತು. ಕಾರು ಹಾವೇರಿಯಿಂದ ಕಲ್ಲಾಪೂರ ಕಡೆಗೆ ಸಾಗುತ್ತಿತ್ತು.

ಇದನ್ನೂ ಓದಿ: ಬಿಜೆಪಿ ಏಜೆಂಟರಂತೆ ವರ್ತಿಸುತ್ತಿರುವ ರಾಜ್ಯಪಾಲರನ್ನು ವಜಾಗೊಳಿಸಬೇಕು: ಎಚ್‌.ಸಿ.ಮಹದೇವಪ್ಪ

ಕಲ್ಲಾಪೂರದ ಬಸವೇಶ್ವರ ದೇವಸ್ಥಾನಕ್ಕೆ ಕುಟುಂಬವು ಹೊರಟಿತ್ತು. ಕೊಣ್ಣೂರು ಬಳಿಕ ಎರಡು ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಆಘಾತಕ್ಕೆ ಕಾರಿನಲ್ಲಿದ್ದವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ.

ಅಪಘಾತದ ರಭಸಕ್ಕೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ದೇಹಗಳು ಛಿದ್ರಗೊಂಡಿವೆ. ಮೃತಪಟ್ಟವರೆಲ್ಲರೂ ದೇವಸ್ಥಾನಕ್ಕೆ ಹೊರಟಿದ್ದರು. ನೇರವಾದ ರಸ್ತೆಯಲ್ಲಿ ಎರಡೂ ವಾಹನಗಳು ಪರಸ್ಪರ ಅಪ್ಪಳಿಸಿದ್ದು, ಸಣ್ಣ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

ಇದನ್ನೂ ಓದಿ: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News