Gang Rape: ಬೆಂಗಳೂರಿನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ!

Bengaluru Gang Rape Case: ಡ್ರಾಪ್ ಮಾಡುವ ನೆಪದಲ್ಲಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಆರೋಪದ ಮೇರೆಗೆ ಇಬ್ಬರನ್ನು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಬಂಧಿಸಿದ್ದಾರೆ.

Written by - Puttaraj K Alur | Last Updated : Nov 29, 2022, 04:57 PM IST
  • ಬೆಂಗಳೂರಿನಲ್ಲಿ ಕೇರಳದ ಯುವತಿ ಮೇಲೆ ಗ್ಯಾಂಗ್ ರೇಪ್
  • ರ‍್ಯಾಪಿಡೋ ಬೈಕ್ ಸವಾರ ಮತ್ತವನ ಸ್ನೇಹಿತನಿಂದ ಸಾಮೂಹಿಕ ಅತ್ಯಾಚಾರ
  • ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ
Gang Rape: ಬೆಂಗಳೂರಿನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ! title=
ಬೆಂಗಳೂರಿನಲ್ಲಿ ಗ್ಯಾಂಗ್ ರೇಪ್!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರವಾಗಿದೆ. ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದಿರುವ ಈ ಗ್ಯಾಂಗ್ ರೇಪ್ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಆರೋಪದ ಮೇರೆಗೆ ಇಬ್ಬರನ್ನು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಬಂಧಿಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ನಗರದ ಬಳಿ ಗುರುವಾರ ಈ ಘಟನೆ ನಡೆದಿದೆ. ಪೊಲೀಸ್ ಮೂಲಗಳ ಪ್ರಕಾರ ಕೇರಳ ಮೂಲದ ಯುವತಿ ಮೇಲೆ ಇಬ್ಬರು ಯುವಕರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆಂದು ತಿಳಿದುಬಂದಿದೆ.

ಇದನ್ನೂ ಓದಿ: Voter ID Scam : ಚಿಲುಮೆ ಸಂಸ್ಥೆ ಕೇಸ್ : ಮತ್ತೋರ್ವ ಆರೋಪಿ ಬಂಧಿಸಿದ ಪೊಲೀಸರು

ಘಟನೆಯ ವಿವರ

ಬಿಟಿಎಂ ಲೇಔಟ್ ನ ಸಂಸ್ಥೆಯೊಂದರಲ್ಲಿ ಫ್ರೀಲ್ಯಾನ್ಸರ್ ಆಗಿ ಕೆಲಸ ಮಾಡುತ್ತಿದ್ದ ಸಂತ್ರಸ್ಥ ಯುವತಿ  ಶುಕ್ರವಾರ ರ‍್ಯಾಪಿಡೋ ಬೈಕ್ ಬುಕ್ ಮಾಡಿದ್ದಳು. ಬಿಟಿಎಂ ಲೇಔಟ್‍ನಿಂದ ನೀಲಾದ್ರಿ ನಗರಕ್ಕೆ ರ‍್ಯಾಪಿಡೋ ಬೈಕ್ ಬುಕ್ ಮಾಡಿದ್ದಳಂತೆ. ಬೈಕ್‌ ಪಿಕ್‌ಅಪ್ ವೇಳೆ ಯುವತಿ ಮದ್ಯಪಾನ ಮಾಡಿದ್ದಳಂತೆ. ನೀಲಾದ್ರಿ ನಗರ ತಲುಪುವ ಹೊತ್ತಿಗೆ ಆಕೆ ಅರೆಪ್ರಜ್ಞಾವಸ್ಥೆ ಸ್ಥಿತಿ ತಲುಪಿದ್ದಾಳೆ. ಯುವತಿ ಕಂಟಪೂರ್ತಿ ಕುಡಿದು ಟೈಟ್ ಆಗಿರುವ ವಿಷಯ ರ‍್ಯಾಪಿಡೋ ಬೈಕ್ ಸವಾರನಿಗೆ ಗೊತ್ತಾಗಿದೆ. ಕೂಡಲೇ ಆತ ಯುವತಿಯನ್ನು ಡ್ರಾಪ್‌ಪಾಯಿಂಟ್‍ಗೆ ಇಳಿಸದೆ ತಮ್ಮ ರೂಂಗೆ ಕರೆದೊಯ್ದಿದ್ದಾನೆ. ಈ ವೇಳೆ ರ‍್ಯಾಪಿಡೋ ಬೈಕ್ ಸವಾರ ಮತ್ತು ಆತನ ಸ್ನೇಹಿತ ಸೇರಿಕೊಂಡು ರೇಪ್ ಮಾಡಿದ್ದಾರೆ. ಪ್ರಜ್ಞೆ ಬಂದ ಬಳಿಕ ಆರೋಪಿಗಳು ಯಾರಿಗೂ ಹೇಳದಂತೆ ಬೆದರಿಕೆ ಹಾಕಿ ಯುವತಿಯನ್ನು ಬಿಟ್ಟು ಕಳುಹಿಸಿದ್ದಾರೆ.  

ಘಟನೆ ಬಳಿಕ ಸಂತ್ರಸ್ತ ಯುವತಿ ಎಲೆಕ್ಟ್ರಾನಿಕ್ ಸಿಟಿ ಪೊಲೀಸರಿಗೆ ದೂರು ನೀಡಿದ್ದಾಳೆ. ಈ ದೂರು ಆಧರಿಸಿ ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಅಖ್ತರ್ ಮತ್ತು ಶಹಬುದ್ದೀನ್ ಎಂದು ಗುರುತಿಸಲಾಗಿದೆ. ಈ ಬಗ್ಗೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಪ್ರೇಯಸಿ ಜೊತೆ ಐಷಾರಾಮಿ ಜೀವನ ನಡೆಸೋಕೆ ಎಟಿಎಂ ದೋಚಿದ್ದ ಸೆಕ್ಯೂರಿಟಿ ಗಾರ್ಡ್ ಬಂಧನ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News