ಸಿಲಿಕಾನ್ ಸಿಟಿಯಲ್ಲಿ ಕಾಮುಕರ ಅಟ್ಟಹಾಸ: ಯುವತಿ ಮೇಲೆ ನಾಲ್ವರಿಂದ ಗ್ಯಾಂಗ್ ರೇಪ್

ಚಲಿಸುತ್ತಿದ್ದ ಕಾರಿನಲ್ಲಿ ಯುವತಿ ಮೇಲೆ ಸಾಮೂಹಿಕ ಆತ್ಯಾಚಾರವೆಸಗಿದ ಆರೋಪದಡಿ ಸತೀಶ್, ವಿಜಯ್, ಶ್ರೀಧರ್ ಹಾಗೂ ಕಿರಣ್ ಎಂಬುವವರನ್ನು  ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. 

Written by - VISHWANATH HARIHARA | Edited by - Yashaswini V | Last Updated : Mar 31, 2023, 10:21 AM IST
  • ನಗರದ ಹೃದಯ ಭಾಗದಲ್ಲೊಂದು ಅಮಾನವೀಯ ಘಟನೆ
  • ಕಾರಿನಲ್ಲೇ ಯುವತಿ ಮೇಲರಗಿದ ನಾಲ್ವರು ಯುವಕರು
  • ಯುವತಿ ಮೇಲೆ ಕಾರಿನಲ್ಲೇ ನಾಲ್ವರು ಕಾಮುಕರಿಂದ ಅತ್ಯಾಚಾರ
ಸಿಲಿಕಾನ್ ಸಿಟಿಯಲ್ಲಿ ಕಾಮುಕರ ಅಟ್ಟಹಾಸ: ಯುವತಿ ಮೇಲೆ ನಾಲ್ವರಿಂದ ಗ್ಯಾಂಗ್ ರೇಪ್ title=

ಬೆಂಗಳೂರು: ಪಾರ್ಕ್ ನಲ್ಲಿ ಸ್ನೇಹಿತನೊಂದಿಗೆ ಕುಳಿತಿದ್ದ ಯುವತಿಯನ್ನ ಕಾರಿನಲ್ಲಿ ಎಳೆದೊಯ್ದು ಆಕೆಯ ಮೇಲೆ ಆತ್ಯಾಚಾರವೆಸಗಿದ ನಾಲ್ವರು ಆರೋಪಿಗಳನ್ನ ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ.

ಚಲಿಸುತ್ತಿದ್ದ ಕಾರಿನಲ್ಲಿ ಯುವತಿ ಮೇಲೆ ಸಾಮೂಹಿಕ ಆತ್ಯಾಚಾರವೆಸಗಿದ ಆರೋಪದಡಿ ಸತೀಶ್, ವಿಜಯ್, ಶ್ರೀಧರ್ ಹಾಗೂ ಕಿರಣ್ ಎಂಬುವವರನ್ನು  ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಕಳೆದ ಮಾರ್ಚ್ 25ರಂದು ಈ ಅಮಾನವೀಯ ಘಟನೆ ನಡೆದಿದೆ. 

ಇದನ್ನೂ ಓದಿ- Surya Mukundaraj : 'ಡಿಕೆ ರವಿ ಲವ್ ಕೇಸ್ ಬೆಳಕಿಗೆ ಬರಲಿಲ್ಲ, ರೋಹಿಣಿ ವಿರುದ್ಧ ದೂರು ದಾಖಲಾಗಲಿಲ್ಲ'

ಕೋರಮಂಗಲದ ನ್ಯಾಷನಲ್ ಗೇಮ್ಸ್ ಪಾರ್ಕ್ ನಲ್ಲಿ ರಾತ್ರಿ 10 ಗಂಟೆ ಸುಮಾರಿಗೆ ಯುವತಿ ಹಾಗೂ ಆಕೆಯ ಸ್ನೇಹಿತ  ಕುಳಿತುಕೊಂಡಿದ್ದರು. ಅಲ್ಲಿಗೆ ಬಂದ ನಾಲ್ವರು ಯುವಕರ ಗುಂಪು ಯುವತಿ ಜೊತೆಗಿದ್ದ ಸ್ನೇಹಿತನನ್ನ ಬೆದರಿಸಿ ಕಳಿಸಿದ್ದಾರೆ. ನಂತರ ಯುವತಿ ಜೊತೆ ಜಗಳ ತೆಗೆದು ಕೆಎ 01 ಎಂಬಿ 6169 ನಂಬರ್ 800 ಕಾರಿನಲ್ಲಿ ಕ
ಅಪಹರಿಸಿದ್ದಾರೆ. 

ಇದನ್ನೂ ಓದಿ- ಗಂಡನ ಜೊತೆ ಅಕ್ರಮವಾಗಿ ನೆಲೆಸಿದ್ದ ಪಾಕ್ ಯುವತಿ ಗಡಿಪಾರು : ಪಾಕ್'ಗೆ ಹೋಗಲ್ಲ ಎಂದು ಹೈಡ್ರಾಮ!

ದೊಮ್ಮಲೂರು, ಇಂದಿರಾನಗರ, ಆನೇಕಲ್, ನೈಸ್ ರಸ್ತೆ ಸೇರಿದಂತೆ ಹಲವೆಡೆ ಸುತ್ತಾಡಿಸಿ ಚಲಿಸುತ್ತಿದ್ದ ಕಾರಿನಲ್ಲಿ ಸಾಮೂಹಿಕ ಆತ್ಯಾಚಾರವೆಸಗಿದ್ದಾರೆ‌. ರಾತ್ರಿ ಪೂರ್ತಿ ಸುತ್ತಾಡಿಸಿ ನಂತರ ಬೆಳಗಿನ ಜಾವ 4 ಗಂಟೆಗೆ ಯುವತಿ ಮನೆ ರಸ್ತೆಯಲ್ಲಿ ಆಕೆಯನ್ನು ಬಿಟ್ಟು ಹೋಗಿದ್ದಾರೆ. ಸಂತ್ರಸ್ಥೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮಾರ್ಚ್ 26 ರಂದು ನೀಡಿದ ದೂರು ಮೇರೆಗೆ ನಾಲ್ವರು ಆರೋಪಿಗಳನ್ನ ಬಂಧಿಸಲಾಗಿದ್ದು ಇವರ ಪೂರ್ವಾಪರ ಮಾಹಿತಿಗಳನ್ನು ಪೊಲೀಸರು ಕಲೆಹಾಕಿ ತನಿಖೆ ಮುಂದುವರೆಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News