ಚೀನಾ ಲೋನ್ ಆ್ಯಪ್‌ನವರ ಕಿರುಕುಳ: ಎಂಜಿನಿಯರಿಂಗ್‌ ವಿದ್ಯಾರ್ಥಿ ಆತ್ಮಹತ್ಯೆ!

ಯಲಹಂಕದ ನಿಟ್ಟೆ ಮೀನಾಕ್ಷಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ಓದುತ್ತಿದ್ದ 22 ವರ್ಷದ ತೇಜಸ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಈತ ಜಾಲಹಳ್ಳಿಯಲ್ಲಿರುವ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Written by - Puttaraj K Alur | Last Updated : Jul 13, 2023, 07:08 PM IST
  • ಚೀನಾ ಆ್ಯಪ್‌ ಮೂಲಕ ಸಾಲ ಪಡೆದಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು
  • ಯಲಹಂಕದ ನಿಟ್ಟೆ ಮೀನಾಕ್ಷಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ಓದುತ್ತಿದ್ದ 22 ವರ್ಷದ ತೇಜಸ್
  • 6ನೇ ಸೆಮಿಸ್ಟರ್ ಓದುತ್ತಿದ್ದ ತೇಜಸ್ ಮೆಕಾನಿಕಲ್ ಎಂಜಿನಿಯರಿಂಗ್ ವಿಭಾಗದಲ್ಲಿ ಕಾಲೇಜಿಗೆ ಟಾಪರ್ ಆಗಿದ್ದ
ಚೀನಾ ಲೋನ್ ಆ್ಯಪ್‌ನವರ ಕಿರುಕುಳ: ಎಂಜಿನಿಯರಿಂಗ್‌ ವಿದ್ಯಾರ್ಥಿ ಆತ್ಮಹತ್ಯೆ! title=
ಎಂಜಿನಿಯರಿಂಗ್‌ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

ಬೆಂಗಳೂರು: ಚೀನಾ ಆ್ಯಪ್‌ ಮೂಲಕ ಸಾಲ ಪಡೆದಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಎಚ್‍ಎಂಟಿ ಬಡಾವಣೆಯಲ್ಲಿ ನಡೆದಿದೆ.

ಯಲಹಂಕದ ನಿಟ್ಟೆ ಮೀನಾಕ್ಷಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ಓದುತ್ತಿದ್ದ 22 ವರ್ಷದ ತೇಜಸ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಈತ ಜಾಲಹಳ್ಳಿಯಲ್ಲಿರುವ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇದನ್ನೂ ಓದಿ: ಬಿಜೆಪಿ ಅವಧಿಯಲ್ಲಿ ಕರ್ನಾಟಕವನ್ನು ಆಳಿದ್ದು ಕೇಶವಕೃಪ: ಕಾಂಗ್ರೆಸ್ ಆರೋಪ

6ನೇ ಸೆಮಿಸ್ಟರ್ ಓದುತ್ತಿದ್ದ ತೇಜಸ್ ಮೆಕಾನಿಕಲ್ ಎಂಜಿನಿಯರಿಂಗ್ ವಿಭಾಗದಲ್ಲಿ ಕಾಲೇಜಿಗೆ ಟಾಪರ್ ಆಗಿದ್ದ. ತನ್ನ ಸ್ನೇಹಿತನಿಗಾಗಿ ಚೀನಾ ಆ್ಯಪ್‍ಗಳ ಮೂಲಕ ಸಾಲ ಪಡೆದಿದ್ದ. ಆದರೆ ಕಳೆದೊಂದು ವರ್ಷದಿಂದ ತೇಜಸ್ ಸ್ನೇಹಿತ ಸಾಲದ ಇಎಂಐ ಕಟ್ಟಿರಲಿಲ್ಲ. ಸಾಲ ನೀಡಿದವರು ವಿಪರಿತ ಕಿರುಕುಳ ನೀಡುತ್ತಿದ್ದರಂತೆ. ಹೀಗಾಗಿ ಡೆತ್‍ನೋಟ್ ಬರೆದಿಟ್ಟು ತೇಜಸ್ ಮಂಗಳವಾರ ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಪೊಲೀಸ್ ದೂರಿನ ಪ್ರಕಾರ, ತೇಜಸ್ slice ಮತ್ತು Kissht ಚೈನೀಸ್ ಅಪ್ಲಿಕೇಶನ್‌ನಿಂದ ಸಾಲವನ್ನು ಪಡೆದುಕೊಂಡಿದ್ದ. ಆದರೆ ಮರುಪಾವತಿ ಮಾಡಿರಲಿಲ್ಲ. ಈ ಸಾಲವನ್ನು ಮರುಪಾವತಿಸಲು ವಿಫಲವಾದರೆ ಆತನ ಮೊಬೈಲ್ ಫೋನ್‌ನಲ್ಲಿರುವ intimate ಫೋಟೋಗಳನ್ನು ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಿ ಏಜೆಂಟ್‌ಗಳು ಬ್ಲ್ಯಾಕ್‌ಮೇಲ್‌ ಮಾಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಅಪ್ಲಿಕೇಶನ್ ಹಾಕದಿದ್ರೆ ಸೆಪ್ಟೆಂಬರ್ ತಿಂಗಳ ಕರೆಂಟ್‌ ಫ್ರೀ ಇಲ್ಲ

ನಂತರ ಘಟನೆಯ ಸಂಪೂರ್ಣ ಮಾಹಿತಿ ತಿಳಿದ ವಿದ್ಯಾರ್ಥಿಯ ತಂದೆ ಗೋಪಿನಾಥ್ ಅವರು ದೂರಿನ ಪ್ರಕಾರ ಮಗ ಮಾಡಿರುವ ಸಾಲದ ಮೊತ್ತವನ್ನು ಕಂತುಗಳಲ್ಲಿ ಮರುಪಾವತಿಸುವುದಾಗಿ ಒಪ್ಪಿಕೊಂಡಿದ್ದರು. ಆದರೆ ಸಾಲದ ಏಜೆಂಟರು ತೇಜಸ್ ಮನೆಗೆ ಭೇಟಿ ನೀಡಿ ಬೆದರಿಕೆ ಹಾಕಿದ್ದರು. ಮಂಗಳವಾರ ಸಂಜೆ ಸಹ ಆ್ಯಪ್ ಏಜೆಂಟರು ತೇಜಸ್‌ಗೆ ಹಲವಾರು ಬಾರಿ ಕರೆ ಮಾಡಿದ್ದರು. ಹೀಗಾಗಿ ತೇಜಸ್ ದುಡುಕಿನ ನಿರ್ಧಾರ ತೆಗೆದುಕೊಂಡಿದ್ದಾನೆ ಎನ್ನಲಾಗಿದೆ.

ಡೆತ್‍ನೋಟ್ ಬರೆದಿದ್ದ ತೇಜಸ್: ಆತ್ಮಹತ್ಯೆಗೂ ಮುನ್ನ ಡೆತ್‍ನೋಟ್ ಬರೆದಿರುವ ತೇಜಸ್, ಅಪ್ಪ-ಅಮ್ಮ ನನ್ನನ್ನು ಕ್ಷಮಿಸಿ. ನಾನು ಮಾಡಿರುವ ತಪ್ಪಿಗೆ ಬೇರೆ ದಾರಿಯೇ ಇಲ್ಲದಂತಾಗಿದೆ. ಮಾಡಿರುವ ಸಾಲವನ್ನು ತೀರಿಸಲು ಸಾಧ್ಯವಿಲ್ಲ. ಹೀಗಾಗಿ ಇದುವೇ ನನ್ನ ಕೊನೆಯ ತೀರ್ಮಾನ’ ಎಂದು ಬರೆದು ಸೂಸೈಡ್ ಮಾಡಿಕೊಂಡಿದ್ದಾನೆ. ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ತೇಜಸ್‍ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಜಾಲಹಳ್ಳಿ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News