ಚಿಕ್ಕೋಡಿ: ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆಯನ್ನು ಪೊಲೀಸರು ಬೇಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಕುಡಚಿ ಪಟ್ಟಣದ ಶಿವಶಕ್ತಿ ಲಾಡ್ಜ್ ಮೇಲೆ ಸಿಇಎನ್ ಪೊಲೀಸರು ನಡೆಸಿದ್ದಾರೆ.
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ಸಿಇಎನ್ ಇನ್ಸ್ಪೆಕ್ಟರ್ ಬಿ.ಆರ್.ಗಡ್ಡೇಕರ್ ನೇತೃತ್ವದಲ್ಲಿ ದಾಳಿ ನಡೆದಿತ್ತು. ಅಂತಾರಾಜ್ಯದಿಂದ ಯುವತಿಯರ ಕರೆಯಿಸಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಖದೀಮರು ಅಂದರ್ ಆಗಿದ್ದಾರೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ಹೊಸದಾಗಿ 11 ಪೊಲೀಸ್ ಠಾಣೆ ಸ್ಥಾಪನೆ: ಸಿಎಂ ಸಿದ್ದರಾಮಯ್ಯ
ಈ ದಾಳಿ ವೇಳೆ ಗುಜರಾತ್ ಮತ್ತು ಪಶ್ಚಿಮ ಬಂಗಾಳ ಮೂಲದ ಇಬ್ಬರು ಯುವತಿಯರನ್ನು ರಕ್ಷಣೆ ಮಾಡಲಾಗಿದೆ. ಪ್ರಕರಣ ಸಂಬಂಧ ಲಾಡ್ಜ್ ಮಾಲೀಕ ಶಿವರಾಜ ಬಸಗುಂಡೆ ಸೇರಿ ಐವರ ವಿರುದ್ಧ ಕೇಸ್ ದಾಖಲಿಸಲಾಗಿದೆ.
ಹೈಟೆಕ್ ವೇಶ್ಯಾವಾಟಿಕೆ ದಂಧೆಯ ಕಿಂಗ್ಪಿನ್, ಲಾಡ್ಜ್ ಮ್ಯಾನೇಜರ್ ಮೈಸೂರು ಜಿಲ್ಲೆ ನಂಜನಗೂಡು ಮೂಲದ ರಮೇಶ್ ರಾವಳಿ, ಶಂಕರ್ ಎಂಬುವರನ್ನ ಪೊಲೀಸರ ವಶಕ್ಕೆ ತೆಗೆದುಕೊಂಡಿದ್ದಾರೆ.
ಇದನ್ನೂ ಓದಿ: ಜೆಡಿಎಸ್ -ಬಿಜೆಪಿ ಮೈತ್ರಿ ವಿಚಾರ ಮುರಿದು ಬಿತ್ತಾ..?
ಬಾಡಿಗೆಗೆ ಪಡೆದು ನಂಜನಗೂಡು ಮೂಲದ ರಮೇಶ್ ರಾವಳಿ ಲಾಡ್ಜ್ ನಡೆಸುತ್ತಿದ್ದ. ಯುವತಿಯರ ಫೋಟೋಗಳನ್ನು ಗ್ರಾಹಕರಿಗೆ ತೋರಿಸಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್.