Job Fraud Alert: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚನೆ!

Job Fraud Alert: ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ವಂಚಿಸಿರುವ ಘಟನೆ ನಡೆದಿದೆ. ಈ ಬಗ್ಗೆ ರಾಜಸ್ಥಾನದ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Written by - Puttaraj K Alur | Last Updated : Mar 11, 2024, 08:42 PM IST
  • ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ವಂಚನೆ
  • ಕೆಲಸದ ಆಸೆ ತೋರಿಸಿ ಬರೋಬ್ಬರಿ 5.81 ಲಕ್ಷ ರೂ. ಮೋಸ ಮಾಡಿರುವ ವಂಚಕ
  • ರಾಜಸ್ಥಾನದ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು, ಪೊಲೀಸರಿಂದ ತನಿಖೆ
Job Fraud Alert: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚನೆ! title=
ಲಕ್ಷಾಂತರ ರೂ. ವಂಚನೆ

Job Fraud Alert: ಮೋಸ ಹೋಗುವವರು ಇರುವವರೆಗೂ ಮೋಸ ಮಾಡುವವರು ಸಹ ಇದ್ದೇ ಇರುತ್ತಾರೆ. ಮೋಸ ಹೋಗುವುದು ಹಾಗೂ ಮೋಸ ಮಾಡುವುದು ಎರಡೂ ತಪ್ಪೇ. ಆದರೆ ಕೆಲವರು ಮೋಸ ಮಾಡುವುದನ್ನೇ ತಮ್ಮ ಹೊಟ್ಟೆಪಾಡು ಮಾಡಿಕೊಂಡಿರುತ್ತಾರೆ. ಇವರು ಪ್ರತಿದಿನ ಒಬ್ಬರಲ್ಲ ಒಬ್ಬರಿಗೆ ಟೋಪಿ ಹಾಕುವುದನ್ನೇ ಕಾಯಕ ಮಾಡಿಕೊಂಡಿರುತ್ತಾರೆ. ಇಂದು ಸೈಬರ್‌ ಅಪರಾಧಗಳು ಜಾಸ್ತಿಯಾಗುತ್ತಿವೆ. ಆನ್‌ಲೈನ್‌ ಮೂಲಕವೇ ವಂಚಕರು ಅಮಾಯಕರ ಖಾತೆಗಳಿಗೆ ಕನ್ನ ಹಾಕುತ್ತಾರೆ. ಒಂದೇ ಒಂದು ಕ್ಲಿಕ್‌ ಮೂಲಕ ಲಕ್ಷ ಲಕ್ಷ ಹಣವನ್ನು ಲಪಟಾಯಿಸುತ್ತಾರೆ. ಅದೇ ರೀತಿ ಉದ್ಯೋಗದ ಹೆಸರಿನಲ್ಲಿಯೂ ಇಂದು ಹಲವಾರು ವಂಚನೆ ಪ್ರಕರಣಗಳು ಬೆಳಕಿಗೆ ಬರುತ್ತಿವೆ. 

ಉದ್ಯೋಗದ ಹೆಸರಿನಲ್ಲಿ ಪ್ರತಿದಿನ ಅನೇಕರು ವಂಚನೆಗೆ ಬಲಿಯಾಗುತ್ತಿದ್ದಾರೆ. ಈ ಬಗ್ಗೆ ಸರ್ಕಾರ ಮತ್ತು ಪೊಲೀಸರು ಎಷ್ಟೇ ಎಚ್ಚರಿಕೆ ನೀಡಿದರೂ ಪ್ರಯೋಜನವಾಗುತ್ತಿಲ್ಲ. ಉದ್ಯೋಗದ ಆಸೆ ಬಿದ್ದು ಲಕ್ಷ ಲಕ್ಷ ಹಣವನ್ನೂ ಕಳೆದುಕೊಳ್ಳುವವರ ಸಂಖ್ಯೆ ಹೆಚ್ಚಾಗುತ್ತಿದೆ. ಅತ್ತ ಉದ್ಯೋಗವೂ ಇಲ್ಲ, ಇತ್ತ ಹಣವೂ ಇಲ್ಲ ಎನ್ನುವಂತೆ ಮೋಸ ಹೋಗಿ ನಿರಾಸೆ ಅನುಭವಿಸಿ ಪೊಲೀಸ್‌ ಠಾಣೆ ಮೆಟ್ಟಿಲೇರಿ ನ್ಯಾಯಕ್ಕಾಗಿ ಖಾಕಿ ಮೊರೆ ಹೋಗುತ್ತಿದ್ದಾರೆ. ಅದೇ ರೀತಿಯ ವಂಚನೆಯ ಪ್ರಕರಣವೊಂದು ಬೆಳಕಿಗೆ ಬಂದಿದೆ. 

ಇದನ್ನೂ ಓದಿ: CAA: ಮೋದಿ ಸರ್ಕಾರದಿಂದ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ: ‘ಲೋಕ’ ಚುನಾವಣೆಗೂ ಮುನ್ನ ಬ್ರಹ್ಮಾಸ್ತ್ರ

ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ವಂಚಿಸಿರುವ ಘಟನೆ ನಡೆದಿದೆ. ಈ ಬಗ್ಗೆ ರಾಜಸ್ಥಾನದ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಕಡ ಗ್ರಾಮದ ಅಮಿತ್(23) ಎಂಬವರಿಗೆ ಸೂರಜ್ ಶೇಖರ್ ಎಂಬಾತ ಪರಿಚಯವಾಗಿದ್ದ. ಅಮಿತ್‌ಗೆ ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿದ್ದ ಸೂರಜ್‌ ಶೇಖರ್‌ ಹಂತ ಹಂತವಾಗಿ ಆನ್‌ಲೈನ್ ಮೂಲಕ ಒಟ್ಟು 5,81,300 ರೂ. ಹಣವನ್ನು ತನ್ನ ಬ್ಯಾಂಕ್ ಖಾತೆಗೆ ವರ್ಗಾಯಿಸಿಕೊಂಡಿದ್ದಾನೆ.

ನಿನಗೆ ವಿದೇಶದಲ್ಲಿ ಕೈತುಂಬಾ ಸಂಬಳ ನೀಡುವ ಕೆಲಸ ಕೊಡಿಸುವುದಾಗಿ ಅಮಿತ್‌ಗೆ ಸೂರಜ್‌ ಶೇಖರ್‌ ನಂಬಿಸಿದ್ದ. ಈತನ ಬಣ್ಣದ ಮಾತಿಗೆ ಮರುಳಾಗಿದ್ದ ಅಮಿತ್‌ ಕೆಲಸ ಸಿಗುವ ಭರವಸೆಯಲ್ಲಿ ಆತನ ಖಾತೆಗೆ ಹಂತ ಹಂತವಾಗಿ ಲಕ್ಷ ಲಕ್ಷ ಹಣವನ್ನು ಕಳುಹಿಸಿದ್ದಾನೆ. ಆದರೆ ವಂಚಕ ಸೂರಜ್ ಕೆಲಸವನ್ನು ಕೊಡಿಸದೇ ಹಣವನ್ನು ವಾಪಾಸು ನೀಡದೆ‌ ಅಮಿತ್‌ಗೆ ಮೋಸ ಮಾಡಿದ್ದಾನೆ. ತಾನು ವಂಚನೆಗೆ ಒಳಗಾಗಿರುವ ಬಗ್ಗೆ ಅಮಿತ್‌ ಕೋಟ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: Lok Sabha Elections 2024: NDA 400 ಅಂಕ ತಲುಪುವುದು ಕಷ್ಟಸಾಧ್ಯ, ಪ್ರತಿಪಕ್ಷಗಳಿಗೆ ಎಷ್ಟು ಸ್ಥಾನ? ಇಲ್ಲಿದೆ ಶಾಕಿಂಗ್ ಸಮೀಕ್ಷೆ!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News