ಕಡಬ ಆ್ಯಸಿಡ್ ದಾಳಿ: ಸೂಕ್ತ ಕ್ರಮಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ

Minister Lakshmi Hebbalkar: ಘಟನೆ ಕುರಿತು ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದ ಸಚಿವರು, ಇದೊಂದು ಹೀನ ಕೃತ್ಯವಾಗಿದ್ದು, ಈಗಾಗಲೇ ದಾಳಿ ನಡೆಸಿದವನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.

Written by - Bhavishya Shetty | Last Updated : Mar 4, 2024, 06:22 PM IST
    • ಮೂವರು ಕಾಲೇಜು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ
    • ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಘಟನೆ
    • ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಖಂಡನೆ
ಕಡಬ ಆ್ಯಸಿಡ್ ದಾಳಿ: ಸೂಕ್ತ ಕ್ರಮಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ title=
Minister Lakshmi Hebbalkar

ಬೆಳಗಾವಿ: ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಮೂವರು ಕಾಲೇಜು ವಿದ್ಯಾರ್ಥಿನಿಯರ ಮೇಲೆ ನಡೆದ ಆ್ಯಸಿಡ್ ದಾಳಿ ಅತ್ಯಂತ ಕ್ರೂರ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಹೇಳಿದ್ದಾರೆ.

ಇದನ್ನೂ ಓದಿ: ISRO ಮುಖ್ಯಸ್ಥ ಎಸ್ ಸೋಮನಾಥ್’ಗೆ ಕ್ಯಾನ್ಸರ್: Aditya-L1 ಉಡಾವಣೆಯ ದಿನವೇ ಪತ್ತೆಯಾಗಿತ್ತು ಕಾಯಿಲೆ

ಘಟನೆ ಕುರಿತು ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದ ಸಚಿವರು, ಇದೊಂದು ಹೀನ ಕೃತ್ಯವಾಗಿದ್ದು, ಈಗಾಗಲೇ ದಾಳಿ ನಡೆಸಿದವನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಯಾವ ಉದ್ದೇಶದಿಂದ ಮಾಡಲಾಗಿದೆ ಎಂಬುದು ತನಿಖೆಯಿಂದ ಗೊತ್ತಾಗಲಿದೆ. ಪೊಲೀಸರು ಸಮಗ್ರವಾಗಿ ತನಿಖೆ ಮಾಡುತ್ತಿದ್ದಾರೆ. ಈ ಕುರಿತು ಸೂಕ್ತ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.  

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಬೇರೆ ಬೇರೆ ಆಯಾಮದಲ್ಲಿ ತನಿಖೆ ಮಾಡುತ್ತಿದ್ದಾರೆ. ನಾನು ಕೂಡ ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ.  ಗಾಯಾಳು ಹೆಣ್ಣುಮಕ್ಕಳು ಅಪಾಯದಿಂದ ಪಾರಾಗಲಿ ಎಂದು ಪ್ರಾರ್ಥಿಸುತ್ತೇನೆ. ಮಹಿಳೆಯರ ಸುರಕ್ಷತೆ ಮತ್ತು ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ. ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಘಟನೆ ಕುರಿತು ಮಾಹಿತಿ ಪಡೆದಿದ್ದಾರೆ. ರಾಜ್ಯ ಮಹಿಳಾ ಆಯೋಗ ತ್ವರಿತ ಕ್ರಮಕ್ಕೆ ಮುಂದಾಗಿದೆ. ತಪ್ಪಿತಸ್ಥನಿಗೆ ಕಠಿಣ ಶಿಕ್ಷೆ ಆಗಬೇಕು; ಇಂತಹ ಘಟನೆಗಳು ಮರುಕಳಿಸದಂತೆ ಸಾಧ್ಯವಾದಷ್ಟು ಮುನ್ನಚ್ಚರಿಕೆ ವಹಿಸಬೇಕು ಎಂದು ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಧರ್ಮಶಾಲಾದಲ್ಲಿ ಚಳಿಯ ಜೊತೆ ಮಳೆ! ಭಾರತ-ಇಂಗ್ಲೆಂಡ್ ಫೈನಲ್ ಟೆಸ್ಟ್’ಗೆ ಅಡೆತಡೆ…ಹವಾಮಾನ ವರದಿ

ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿನಿ ಮೇಲೆ ಕಾಲೇಜು ಆವರಣದಲ್ಲಿಯೇ ಯುವಕನೊಬ್ಬ ಆ್ಯಸಿಡ್ ಎರಚಿರುವ ಘಟನೆ ನಡೆದಿದೆ. ಈ ವೇಳೆ ವಿದ್ಯಾರ್ಥಿನಿಯ ಪಕ್ಕದಲ್ಲಿದ್ದ ಇತರ ಇಬ್ಬರು ವಿದ್ಯಾರ್ಥಿನಿಯರಿಗೂ ಆ್ಯಸಿಡ್ ತಗುಲಿ ಸಣ್ಣ ಪ್ರಮಾಣದ ಗಾಯಗಳಾಗಿವೆ. ಈಗಾಗಲೇ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News