Karnataka Crime news: ಬೆಂಗಳೂರು: ರಾತ್ರಿ ಓಡಾಡಬಾರದು ಎಂದು ಹೇಳಿದ್ದಕ್ಕೆ ನೈಟ್ ಸೆಕ್ಯೂರಿಟಿ ಗಾರ್ಡ್ ಗೆ ಪುಡಿ ರೌಡಿಯೊಬ್ಬ ಮುಖಕ್ಕೆ ಚಾಕು ಇರಿದು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಸೋಮವಾರ ಮಧ್ಯರಾತ್ರಿ 2.30ರ ಸುಮಾರಿಗೆ ನಡೆದಿದೆ.
ಇದನ್ನೂ ಓದಿ: Cat Video: ಮೀನು, ಮಾಂಸ ಯಾರಿಗ್ಬೇಕು.. ಕರಂ ಕುರುಂ ಅಂತ ಕಲ್ಲಂಗಡಿ ತಿನ್ನುವ ಬೆಕ್ಕು! ಸಖತ್ ಫನ್ನಿ ವಿಡಿಯೋ ಇದು
ಆರ್.ಟಿ.ನಗರದ ಎಂಎಲ್ಎ ಲೇಔಟ್ ನಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರ ನಿವಾಸದ ಕೂಗಳತೆ ದೂರದಲ್ಲಿಯೇ ಈ ಘಟನೆ ನಡೆದಿದ್ದು ಅಪರಿಚಿತ ಆರೋಪಿಯ ಕೃತ್ಯಕ್ಕೆ ಸೆಕ್ಯೂರಿಟಿ ಗಾರ್ಡ್ ಅಲ್ಬರ್ಟ್ ಮುಖಕ್ಕೆ ಗಂಭೀರವಾಗಿ ಗಾಯವಾಗಿದೆ.
ಎಂ ಎಲ್ ಎ ಲೇಔಟ್ 1ನೇ ಮುಖ್ಯರಸ್ತೆಯಲ್ಲಿ ಆಲ್ಬರ್ಟ್ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡಿಕೊಂಡಿದ್ದರು. ಎಂದಿನಂತೆ ಭಾನುವಾರ ರಾತ್ರಿ ಕರ್ತವ್ಯದಲ್ಲಿದ್ದಾಗ ಮಧ್ಯರಾತ್ರಿ 2:30ರ ಸುಮಾರಿಗೆ ಬಂದಿದ್ದ ಆರೋಪಿ ಆಲ್ಬರ್ಟ್ ಕುಳಿತಿದ್ದ ಕುರ್ಚಿಯ ಹಿಂದೆ ಬಂದು ನಿಂತುಕೊಂಡಿದ್ದಾನೆ. ಈ ವೇಳೆ ಆಲ್ಬರ್ಟ್ ಆರೋಪಿಗೆ “ಯಾರಪ್ಪ ನೀನು, ರಾತ್ರಿ ವೇಳೆ ಇಲ್ಲೆಲ್ಲಾ ಓಡಾಡಬಾರದು ಕ್ಯಾಮೆರಾಗಳಿವೆ” ಎಂದು ಹೇಳಿದ್ದಾರೆ. ಅಷ್ಟಕ್ಕೆ ಸಿಟ್ಟಿಗೆದ್ದ ಆರೋಪಿ ಅವಾಚ್ಯ ಶಬ್ದಗಳಿಂದ ನಿಂದಿಸಿ ತನ್ನ ಬಳಿಯಿದ್ದ ಚಾಕುವಿನಿಂದ ಆಲ್ಬರ್ಟ್ ರ ಎಡಗೆನ್ನೆ ಕೊಯ್ದು ಸ್ಥಳದಿಂದ ಪರಾರಿಯಾಗಿದ್ದಾನೆ.
ಘಟನೆ ನಂತರ ಸಾರ್ವಜನಿಕರೊಬ್ಬರ ಸಹಾಯದಿಂದ ಸ್ಥಳೀಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿರುವ ಆಲ್ಬರ್ಟ್ ಈ ಸಂಬಂಧ ಆರ್.ಟಿ.ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸೆಕ್ಯೂರಿಟಿ ಗಾರ್ಡ್ ಮೇಲೆ ಆರೋಪಿ ಹಲ್ಲೆ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇನ್ನೂ ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಪುಡಿ ರೌಡಿಗಳ ಅಟ್ಟಹಾಸ ಜೋರಾಗಿದೆ.
ಜೂನ್ 14ರ ರಾತ್ರಿ ರಾಮಮೂರ್ತಿ ನಗರದ ವಿಜಿನಾಪುರದಲ್ಲಿ ರಾತ್ರಿ ಕೆಲಸ ಮುಗಿಸಿ ವಾಪಾಸಾಗುತ್ತಿದ್ದವರನ್ನ ಅಡ್ಡಗಟ್ಟಿ ನಮ್ಮ ಏರಿಯಾದಲ್ಲಿ ಯಾಕೆ ಓಡಾಡುತ್ತಿದ್ದೀರಾ ಎಂದು ಇರದರಾಜ್ ಎಂಬಾತನನ್ನು ಕೊಲೆ ಕೂಡ ಮಾಡಿದ್ದಾರೆ. ಘಟನೆಯಲ್ಲಿ ವಿಜಯ್ ಎಂಬಾತ ಪ್ರಾಣಾಪಾಯದಿಂದ ಪಾರಾಗಿದ್ದ. ಇನ್ನಾದ್ರೂ ನಗರ ಪೊಲೀಸರು ಪುಡಿರೌಡಿಗಳಿಗೆ ಬಿಸಿ ಮುಟ್ಟಿಸುವ ಕೆಲಸ ಮಾಡಬೇಕಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ