Murder Case: ವ್ಯಕ್ತಿಯನ್ನು ಕೊಂದು ಗೋಣಿ ಚೀಲದಲ್ಲಿ ತುಂಬಿ ಕೃಷ್ಣಾ ನದಿಗೆ ಹಾಕಿದ ಹಂತಕರು!

Murder Case: ಮೃತ ವ್ಯಕ್ತಿಯ ತಲೆ ಮತ್ತು ಮುಖದ ಮೇಲೆ‌ ಗಾಯದ ಗುರುತುಗಳು ಇರುವುದು ಗೊತ್ತಾಗಿದೆ. ಅಪರಿಚಿದ ದುಷ್ಕರ್ಮಿಗಳು ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿ ಬಳಿಕ ಮೂಟೆಯಲ್ಲಿ ಕಟ್ಟಿ ನದಿಗೆ ಬಿಸಾಕಿ ಹೋಗಿದ್ದಾರೆ.

Written by - Puttaraj K Alur | Last Updated : Oct 7, 2023, 08:24 PM IST
  • ಕಟ್ಟಿದ ಗೋಣಿ ಚೀಲದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ
  • ಜಮಖಂಡಿ ತಾಲೂಕಿನ ಜಂಬಗಿ ಬಿ.ಕೆ.ಗ್ರಾಮದಲ್ಲಿ ಘಟನೆ
  • ಕೃಷ್ಣಾ ನದಿಯ ಸೇತುವೆಯ ಬಳಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಶವ
Murder Case: ವ್ಯಕ್ತಿಯನ್ನು ಕೊಂದು ಗೋಣಿ ಚೀಲದಲ್ಲಿ ತುಂಬಿ ಕೃಷ್ಣಾ ನದಿಗೆ ಹಾಕಿದ ಹಂತಕರು! title=
ಕೃಷ್ಣಾ ನದಿಯಲ್ಲಿ ವ್ಯಕ್ತಿಯ ಶವ ಪತ್ತೆ!

ಬಾಗಲಕೋಟೆ: ವ್ಯಕ್ತಿಯನ್ನು ಕೊಂದಿರುವ ದುಷ್ಕರ್ಮಿಗಳು ಬಳಿಕ ಗೋಣಿ ಚೀಲವೊಂದರಲ್ಲಿ ತುಂಬಿ ಕೃಷ್ಣಾ ನದಿಗೆ ಎಸೆದಿರುವ ಘಟನೆ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಜಂಬಗಿ ಬಿ.ಕೆ.ಗ್ರಾಮದ ಸಮೀಪದ ಕೃಷ್ಣಾ ನದಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ.  

ಕೃಷ್ಣಾ ನದಿಯಲ್ಲಿ ರಕ್ತದ ಕಲೆಯ ಮೂಟೆಯೊಂದು ತೇಲಾಡುತ್ತಿತ್ತು. ಇದನ್ನೂ ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ನದಿಯಿಂದ ಮೂಟೆಯನ್ನು ಹೊರತೆಗೆದು ನೋಡಿದಾಗ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.

ಇದನ್ನೂ ಓದಿ: ಮಾನಸಿಕ ಕಿರುಕುಳಕ್ಕೆ ಮನನೊಂದು ಮೈಸೂರು ವಿವಿಯ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ

ಮೃತ ವ್ಯಕ್ತಿಯ ತಲೆ ಮತ್ತು ಮುಖದ ಮೇಲೆ‌ ಗಾಯದ ಗುರುತುಗಳು ಇರುವುದು ಗೊತ್ತಾಗಿದೆ. ಅಪರಿಚಿದ ದುಷ್ಕರ್ಮಿಗಳು ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿ ಬಳಿಕ ಮೂಟೆಯಲ್ಲಿ ಕಟ್ಟಿ ನದಿಗೆ ಬಿಸಾಕಿ ಹೋಗಿದ್ದಾರೆ.

ಕೊಲೆಯಾಗಿರುವ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಅಂದಾಜು 30-35 ವರ್ಷದ ವಯೋಮಾನದ ವ್ಯಕ್ತಿಯನ್ನು ಕೊಲೆ ಮಾಡಿ ನದಿಗೆ ಎಸೆದಿರುವ ಶಂಕೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಎಸ್ಪಿ ಅಮರನಾಥ ರೆಡ್ಡಿ ಹಾಗೂ ಡಿವೈಎಸ್ಪಿ ಶಾಂತವೀರ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಸಾವಳಗಿ ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಇದನ್ನೂ ಓದಿ: ಕೌಟುಂಬಿಕ ಕಲಹ ಪತ್ನಿ, ಇಬ್ಬರು ಮಕ್ಕಳ ಶವ ಪತ್ತೆ: ಪತಿ ಕೊಂದಿರುವ ಶಂಕೆ

ಈ ಬಗ್ಗೆ ಸಾವಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ. ಶವದ ಕುರಿತು ಮಾಹಿತಿ ಇದ್ದವರು ಸಾವಳಗಿ ಠಾಣೆ ಸಂಪರ್ಕಿಸಲು ಪೊಲೀಸರು ಮನವಿ ಮಾಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News