Lover murder: ಯುವತಿಯ ಕತ್ತಿಗೆ ಚಾಕು ಇರಿದು ಕೊಲೆಗೈದ ಯುವಕ! ಕಾರಣವೇನು ಗೊತ್ತಾ?

Lover Murder Case: ರಕ್ತದ ಮಡುವಿನಲ್ಲಿ ಬಿದ್ದು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಯುವತಿಯನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾಳೆ.

Written by - Puttaraj K Alur | Last Updated : Aug 25, 2023, 12:01 PM IST
  • ಪ್ರೀತಿಸಿದ ಯುವತಿಯ ಕತ್ತಿಗೆ ಚಾಕುವಿನಿಂದ ಇರಿದು ಕೊಲೆಗೈದ ಪಾಗಲ್ ಪ್ರೇಮಿ
  • ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ನಗರದ ಮಹಿಳಾ ಪೊಲೀಸ್ ಠಾಣೆಯ ಬಳಿ ಘಟನೆ
  • ಹಾಡಹಗಲೇ ಯುವತಿಗೆ ಚಾಕುವಿನಿಂದ ಇರಿದು ಎಸ್ಕೇಪ್ ಆಗಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು
Lover murder: ಯುವತಿಯ ಕತ್ತಿಗೆ ಚಾಕು ಇರಿದು ಕೊಲೆಗೈದ ಯುವಕ! ಕಾರಣವೇನು ಗೊತ್ತಾ?   title=
ಯುವತಿಗೆ ಚಾಕು ಇರಿದು ಕೊಲೆ!

ಮಂಗಳೂರು(ದಕ್ಷಿಣ ಕನ್ನಡ): ಭಗ್ನ ಪ್ರೇಮಿಯೊಬ್ಬ ತಾನು ಪ್ರೀತಿಸಿದ ಯುವತಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದ ಮಹಿಳಾ ಪೊಲೀಸ್ ಠಾಣೆಯ ಬಳಿ ನಡೆದಿದೆ.

ಬಂಟ್ವಾಳ ತಾಲೂಕಿನ ವಿಟ್ಲ ಭಾಗದ ಅಳಿಕೆ ನಿವಾಸಿ ಗೌರಿ(18) ಕೊಲೆಯಾದ ಯುವತಿ. ಆರೋಪಿ ಪದ್ಮರಾಜ್‍ನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಪದ್ಮರಾಜ್ ಯುವತಿಯ ಕತ್ತಿಗೆ ಚಾಕುವಿನಿಂದ ಇರಿದು ಎಸ್ಕೇಪ್ ಆಗಿದ್ದ. ರಕ್ತದ ಮಡುವಿನಲ್ಲಿ ಬಿದ್ದು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಯುವತಿಯನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾಳೆ.

ಇದನ್ನೂ ಓದಿ: ಕೈ ಸೇರದ ವೃದ್ಧಾಪ್ಯ ವೇತನ, ಅನ್ನಭಾಗ್ಯದ ಹಣ: ವೃದ್ದೆಯಿಂದ ಡಿಸಿಗೆ ದೂರು

ಈ ಬಗ್ಗೆ ಮಾಹಿತಿ ನೀಡಿರುವ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರಿಷ್ಯಂತ್‌ ಸಿ.ಬಿ, ‘ಗುರುವಾರ ಮಧ್ಯಾಹ್ನ ನಗರದ ಮಹಿಳಾ ಪೊಲೀಸ್ ಠಾಣೆಯ ಬಳಿ ಪದ್ಮರಾಜ್‍ ಎಂಬಾತ ಯುವತಿಯ ಕುತ್ತಿಗೆ ಭಾಗಕ್ಕೆ ಚಾಕುವಿನಿಂದ ಇರಿದು ಕೊಲೆಗೈಯಲು ಯತ್ನಿಸಿದ್ದಾನೆ. ಗಾಯಗೊಂಡು ಯುವತಿ ಬಿದ್ದ ಬಳಿಕ ಆತ ಸ್ಥಳದಿಂದ ಪರಾರಿಯಾಗಿದ್ದ. ಯುವತಿ ಚಿಕಿತ್ಸೆ ಫಲಕಾರಿಯಾದೆ ಸಾವನ್ನಪ್ಪಿದ್ದು, ಆರೋಪಿಯನ್ನು ಈಗಾಗಲೇ ಬಂಧಿಸಲಾಗಿದೆʼ ಎಂದು ಹೇಳಿದ್ದಾರೆ.

ಬೈಕ್‌ನಲ್ಲಿ ಬಂದಿದ್ದ ಆರೋಪಿ ಪದ್ಮರಾಜ್ ಪುತ್ತೂರಿನ ಬಸ್ ನಿಲ್ದಾಣದ ಬಳಿ ಮೃತ ಯುವತಿ ಗೌರಿ ಜೊತೆಗೆ ಗಲಾಟೆ ಮಾಡಿದ್ದಾನೆ. ಬಳಿಕ ಪುತ್ತೂರು ಮಹಿಳಾ ಠಾಣೆ ಬಳಿ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಈ ವೇಳೆ ಯುವತಿ ಗೌರಿ ಪೊಲೀಸ್ ಠಾಣೆಗೆ ದೂರು ನೀಡುವುದಾಗಿ ಹೇಳಿದ್ದಾಳೆ. ಇದರಿಂದ ಕುಪಿತನಾದ ಯುವಕ ಆಕೆಯ ಕತ್ತಿಗೆಗೆ ಚಾಕು ಇರಿದು ಎಸ್ಕೇಪ್ ಆಗಿದ್ದ. ಬಳಿಕ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೃತ ಯುವತಿ ಮತ್ತು ಆರೋಪಿ ಪದ್ಮರಾಜ್ ಪ್ರೀತಿಸುತ್ತಿದ್ದರು ಎನ್ನಲಾಗಿದೆ.

ಇದನ್ನೂ ಓದಿ: "ಸಾಮಾಜಿಕ ಸ್ವಾಸ್ಥ್ಯ ಕಾಪಾಡಲು, ಅಪರಾಧ ಮುಕ್ತ ಸಮಾಜ ರೂಪಿಸಲು ಸಹಕರಿಸಿ"

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News