Lovers Death: ನೈಸ್ ರಸ್ತೆ ಬಳಿಯ ಕೆರೆಯಲ್ಲಿ ನಾಪತ್ತೆಯಾಗಿದ್ದ ಪ್ರೇಮಿಗಳ ಶವ ಪತ್ತೆ!

Lovers Suicide case: ಸಾವಿಗೂ ಮುನ್ನ ಯುವತಿ ಅಂಜನಾ ತನ್ನ ಮೊಬೈಲ್‌ನಲ್ಲಿ ವಿಡಿಯೋ ಮಾಡಿದ್ದಾಳೆ. ಅದರಲ್ಲಿ ʼನಮ್ಮ ಸಾವಿಗೆ ಯಾರೂ ಕಾರಣ ಅಲ್ಲ. ನಾವಿಬ್ಬರು ಒಟ್ಟಿಗೆ ಬದುಕಲು ಆಗಲ್ಲ. ಹೀಗಾಗಿ ಸಾಯ್ತಿದ್ದೇವೆ ಎಂದು ಹೇಳಿದ್ದಾರೆ. ​

Written by - Puttaraj K Alur | Last Updated : Jul 3, 2024, 10:20 PM IST
  • ಜುಲೈ 1ರಿಂದ ನಾಪತ್ತೆಯಾಗಿದ್ದ ಪ್ರೇಮಿಗಳ ಶವ ನೈಸ್‌ ರಸ್ತೆ ಬಳಿಯ ಕೆರೆಯಲ್ಲಿ ಪತ್ತೆ
  • ಪ್ರೀತಿಗೆ ಪೋಷಕರ ವಿರೋಧದ ಹಿನ್ನೆಲೆ ಕೆರೆಗೆ ಹಾರಿ ಯುವ ಪ್ರೇಮಿಗಳು ಆತ್ಮಹತ್ಯೆ
  • ಅಂಜನಾಪುರದ ತುಳಸಿಪುರ ಕೆರೆಯಲ್ಲಿ ಪತ್ತೆಯಾದ ಯುವ ಪ್ರೇಮಿಗಳ ಮೃತದೇಹಗಳು
Lovers Death: ನೈಸ್ ರಸ್ತೆ ಬಳಿಯ ಕೆರೆಯಲ್ಲಿ ನಾಪತ್ತೆಯಾಗಿದ್ದ ಪ್ರೇಮಿಗಳ ಶವ ಪತ್ತೆ! title=
ಯುವ ಪ್ರೇಮಿಗಳ ಆತ್ಮಹತ್ಯೆ!

Lovers Suicide case: ಜುಲೈ 1ರಿಂದ ನಾಪತ್ತೆಯಾಗಿದ್ದ ಪ್ರೇಮಿಗಳ ಶವ ಬೆಂಗಳೂರಿನ ನೈಸ್‌ ರಸ್ತೆ ಬಳಿಯ ಕೆರೆಯಲ್ಲಿ ಪತ್ತೆಯಾಗಿವೆ. ಪ್ರೀತಿಗೆ ಪೋಷಕರ ವಿರೋಧದ ಹಿನ್ನೆಲೆ ಕೆರೆಗೆ ಹಾರಿ ಯುವ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ವರದಿಯಾಗಿದೆ. 

ಕಾಲೇಜು ವಿದ್ಯಾರ್ಥಿನಿ ಅಂಜನಾ (20) ಮತ್ತು ಶ್ರೀಕಾಂತ್ (24) ಸಾವನ್ನಪ್ಪಿರುವ ದುರ್ದೈವಿಗಳು. ಇವರಿಬ್ಬರ ಶವಗಳು ಅಂಜನಾಪುರದ ತುಳಸಿಪುರ ಕೆರೆಯಲ್ಲಿ ಪತ್ತೆಯಾಗಿವೆ. ಬಿಬಿಎ ವಿದ್ಯಾರ್ಥಿಯಾಗಿದ್ದ ಅಂಜನಾ ತಲಘಟ್ಟಪುರ ಸಮೀಪದ ಅಂಜನಾಪುರದ ನಿವಾಸಿ. ಬಿಕಾಂ ವ್ಯಾಸಂಗ ಮಾಡುತ್ತಿದ್ದ ಶ್ರೀಕಾಂತ್‌ ಕೋಣನಕುಂಟೆ ನಿವಾಸಿ. ನಾಪತ್ತೆ ಹಿನ್ನೆಲೆ ಇಬ್ಬರ ಪೋಷಕರು ಕೋಣನಕುಂಟೆ ಮತ್ತು ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಇದನ್ನೂ ಓದಿ: ಮುಡಾದಲ್ಲಿ ಸೈಟ್‌ ಅಕ್ರಮ ಆರೋಪ ವಿಚಾರ: ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ಕಳೆದ ಕೆಲವು ವರ್ಷಗಳಿಂದ ಇವರಿಬ್ಬರು ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಇವರಲ್ಲಿ ಶ್ರೀಕಾಂತ್‌ ವಿವಾಹಿತನಾಗಿದ್ದ, ಆದರೆ ಅಂಜನಾಳನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಹೀಗಾಗಿ ಇವರಿಬ್ಬರ ಪ್ರೀತಿಗೆ ವಿದ್ಯಾರ್ಥಿನಿಯ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ಇವರಿಬ್ಬರೂ ಜುಲೈ 1ರಂದು ನಾಪತ್ತೆಯಾಗಿದ್ದರು. ಇಬ್ಬರೂ ಕೈಗೆ ಹಗ್ಗವನ್ನು ಕಟ್ಟಿಕೊಂಡು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಘಟನೆ ಬಗ್ಗೆ ಮಾಹಿತಿ ನೀಡಿರುವ ದಕ್ಷಿಣ ವಿಭಾಗ ಡಿಸಿಪಿ ಲೋಕೆಶ್ ಜಗಲಾಸರ್, ʼಕುಟುಂಬಸ್ಥರ ದೂರಿನ ಮೇರೆಗೆ ಎರಡು ಪ್ರತ್ಯೇಕ ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದೇವೆ. ಇಬ್ಬರೂ ಸ್ನೇಹಿತರಾಗಿದ್ದು, ಒಟ್ಟಿಗೆ ಓಡಾಡುತ್ತಿದ್ದರು. ಇಬ್ಬರಲ್ಲಿ ಶ್ರೀಕಾಂತ್‌ಗೆ ಮದುವೆಯಾಗಿದೆ. ಮದುವೆಯಾದ ಕಾರಣ ಒಟ್ಟಿಗೆ ಇರಲು ಆಗಲ್ಲವೆನ್ನುವ ದುಃಖ ಇತ್ತು. ಹೀಗಾಗಿ ಇಬ್ಬರೂ ಒಟ್ಟಿಗೆ ಕೆರೆಗೆ ಬಿದ್ದು ಸಾವನ್ನಪ್ಪಿದ್ದಾರೆ. ಈ ಬಗ್ಗೆ ತನಿಖೆ ಮುಂದುವರೆದಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಹುಲ್ ಗಾಂಧಿಗೆ ತಿರುಗೇಟು ನೀಡಿದ ಪ್ರಧಾನಿ ನರೇಂದ್ರ ಮೋದಿ

ಸಾವಿಗೂ ಮುನ್ನ ಯುವತಿ ಅಂಜನಾ ತನ್ನ ಮೊಬೈಲ್‌ನಲ್ಲಿ ವಿಡಿಯೋ ಮಾಡಿದ್ದಾಳೆ. ಅದರಲ್ಲಿ ʼನಮ್ಮ ಸಾವಿಗೆ ಯಾರೂ ಕಾರಣ ಅಲ್ಲ. ನಾವಿಬ್ಬರು ಒಟ್ಟಿಗೆ ಬದುಕಲು ಆಗಲ್ಲ. ಹೀಗಾಗಿ ಸಾಯ್ತಿದ್ದೇವೆ ಎಂದು ಹೇಳಿದ್ದಾರೆ. ಅದನ್ನು ಆಟೋದಲ್ಲೇ ಬಿಟ್ಟು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೊದಲು ಶ್ರೀಕಾಂತ್ ಮೃತದೇಹ ಕೆರೆಯಲ್ಲಿ ಪತ್ತೆಯಾಗಿತ್ತು. ಆತನ ಮೃತದೇಹವನ್ನು ಮೇಲೆತ್ತುವಾಗ ಅಂಜನಾಳ ಮೃತದೇಹ ಸಹ ಹೊರಗೆ ಬಂದಿದೆ. ಇಬ್ಬರು ಕೈಗೆ ಹಗ್ಗ ಕಟ್ಟಿಕೊಂಡಿದ್ದರಿಂದ ಒಟ್ಟಿಗೆ ಮೃತದೇಹಗಳು ಸಿಕ್ಕಿವೆ ಅಂತಾ ಲೋಕೇಶ್ ಜಗಲಾಸರ್‌ ಹೇಳಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News