ಬೆಂಗಳೂರು : ಫೇಕ್ ಡಾಕ್ಯುಮೆಂಟ್ ಕ್ರಿಯೆಟ್ ಮಾಡಿ ಬ್ಯಾಂಕ್ ಗಳಿಗೆ ನೀಡಿ ಕೋಟಿ ಕೋಟಿ ಸಾಲ ಮಾಡಿ ಐಷಾರಾಮಿ ಜೀವನ ನಡೆಸುತ್ತಿದ್ದ ಖದೀಮನನ್ನು ಪೊಲೀಸರು ಬಂಧಿಸಿದ್ದಾರೆ.
ಕೃಷ್ಣಕುಮಾರ ಬಂಧಿತ ಆರೋಪಿ. ಅಮಾಯಕರ ಆಸ್ತಿಪತ್ರಗಳನ್ನು ದುರುಪಯೋಗಪಡಿಸಿಕೊಂಡು ನಕಲಿ ದಾಖಲೆ ಸೃಷ್ಟಿಸುತ್ತಿದ್ದ ಈತನ ಮೇಲೆ ಬೆಂಗಳೂರಿನ ವಿವಿಧ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದವು. ಪ್ರತಿಸಲ ಬ್ಯಾಂಕ್‌ಗೆ ಉಂಡೇನಾಮ ಹಾಕುತ್ತಿದ್ದ ಇವನು ಎಸ್ಕೇಪ್ ಆಗುತ್ತಿದ್ದ. ಸದ್ಯ ಬರೋಬ್ಬರಿ 10 ವರ್ಷಗಳ ಬಳಿಕ ಶೇಷಾದ್ರಿಪುರ ಪೊಲೀಸರು ಆಸಾಮಿಯನ್ನು ಲಾಕ್ ಮಾಡಿದ್ದಾರೆ.
ಇದನ್ನೂ ಓದಿ: ಕಾಂಗ್ರೆಸ್ ಗ್ಯಾರಂಟಿ ಯೋಜನೆ, ಭ್ರಷ್ಟಾಚಾರದಿಂದ ಕರ್ನಾಟಕ ದಿವಾಳಿಯಾಗಲಿದೆ: ಬಿಜೆಪಿ
ನಕಲಿ ದಾಖಲೆ ಸೃಷ್ಟಿಸಿ ಸುಮಾರು 15 ಕೋಟಿಗೂ ಹೆಚ್ಚು ಲೋನ್ ಪಡೆದು ವಂಚನೆ ಮಾಡಿರುವ ಈತನಿಗೆ ಖಾಲಿ ಸೈಟ್, ಆಸ್ತಿ ಮಾರಾಟ ಮಾಡುವವರ ಇವನ ಟಾರ್ಗೆಟ್ ಆಗಿದ್ದರು. ಆಸ್ತಿ ಖರೀದಿಸುತ್ತೇನೆಂದು ಮಾಲೀಕರಿಂದ ಆಸ್ತಿಯ ದಾಖಲೆ ಪಡೆಯುತ್ತಿದ್ದ ಈತ ಬಳಿಕ ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕ್‌ಗಳಲ್ಲಿ ಕೋಟಿ ಕೋಟಿ ಲೋನ್ ಪಡೆಯುತ್ತಿದ್ದ.
2018ರಲ್ಲೂ ಇಂಥದೇ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಈತನಿಗಾಗಿ ಪೊಲೀಸರು ಹುಡುಕಾಟ ಮುಂದುವರೆಸಿದ್ದರು. ತಾನು ಪ್ರತಿಷ್ಠಿತ ಕಂಪನಿಯಲ್ಲಿ ಕೆಲಸ ಮಾಡುತ್ತಿರುವುದಾಗಿ ಹೇಳಿ ಪರಿಚಯಿಸಿಕೊಂಡು ಅವರಿಂದ ಆಸ್ತಿಯ ಝರಾಕ್ಸ್ ಪ್ರತಿಗಳನ್ನು ಪಡೆದು ಅದಕ್ಕೆ ಸಂಬಂಧಿಸಿದಂತೆ ನಕಲಿ ದಾಖಲೆ ಸೃಷ್ಟಿ ಮಾಡುತ್ತಿದ್ದ. ಸದ್ಯ ಬ್ಯಾಂಕ್ ಗಳಿಗೆ ಮೋಸ ಮಾಡಿದ್ದ ಈತ ಪೊಲೀಸರ ಅತಿಥಿಯಾಗಿದ್ದಾನೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.