ಮಾಲ್‌ನಲ್ಲಿ ಮಹಿಳೆರ ಜೊತೆ ಅನುಚಿತ ವರ್ತನೆ ತೋರಿದ್ದ ಆರೋಪಿ ಪತ್ತೆ..! ʼಶಿಕ್ಷಕʼರಂತೆ ಇವರು

LuLu mall video : ಬೆಂಗಳೂರಿನ ಪ್ರತಿಷ್ಠಿತ ಲುಲು ಮಾಲ್‌ನಲ್ಲಿ ಮಹಿಳೆಯರ ಜೊತೆ ವ್ಯಕ್ತಿಯೊಬ್ಬ ಅನುಚಿತ ವರ್ತನೆ ತೋರಿದ್ದ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗಿತ್ತು. ವಿಡಿಯೋ ದೃಶ್ಯ ಆಧರಿಸಿ ಪೊಲೀಸರು ಆರೋಪಿಯ ಗುರುತು ಪತ್ತೆ ಹಚ್ಚಿದ್ದಾರೆ. 

Written by - Krishna N K | Last Updated : Nov 1, 2023, 03:57 PM IST
  • ಲುಲು ಮಾಲ್‌ನಲ್ಲಿ ಮಹಿಳೆಯರ ಜೊತೆ ಅನುಚಿತ ವರ್ತನೆ ತೋರಿದ್ದ ವ್ಯಕ್ತಿ.
  • ಈ ಕುರಿತು ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು.
  • ವಿಡಿಯೋ ದೃಶ್ಯ ಆಧರಿಸಿ ಪೊಲೀಸರು ಆರೋಪಿಯ ಗುರುತು ಪತ್ತೆ ಹಚ್ಚಿದ್ದಾರೆ.
ಮಾಲ್‌ನಲ್ಲಿ ಮಹಿಳೆರ ಜೊತೆ ಅನುಚಿತ ವರ್ತನೆ ತೋರಿದ್ದ ಆರೋಪಿ ಪತ್ತೆ..! ʼಶಿಕ್ಷಕʼರಂತೆ ಇವರು title=

ಬೆಂಗಳೂರು : ಲುಲು ಮಾಲ್‌ನಲ್ಲಿ ಮಹಿಳೆಯರ ಜೊತೆ ಅನುಚಿತ ವರ್ತನೆ ತೋರಿದ್ದ ಆರೋಪಿ ಕೊನೆಗೂ ಪತ್ತೆಯಾಗಿದ್ದಾನೆ. ಕಳೆದ ಕೆಲವು ದಿನಗಳ ಹಿಂದೆ ಈ ಪ್ರಕರಣಕ್ಕೆ ಸಂಬಂಧಿಸಿ ವಿಡಿಯೋ ಒಂದು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು. 

ಹೌದು.. ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನ ಪ್ರತಿಷ್ಠಿತ ಲುಲು ಮಾಲ್‌ನಲ್ಲಿ ಮಹಿಳೆಯರ ಜೊತೆ ವ್ಯಕ್ತಿಯೊಬ್ಬ ಅನುಚಿತ ವರ್ತನೆ ತೋರಿದ್ದ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗಿತ್ತು. ಅಲ್ಲದೆ, ನೆಟ್ಟಿಗರು ವ್ಯಕ್ತಿಯ ಕೃತ್ಯಕ್ಕೆ ಖಂಡನೆ ವ್ಯಕ್ತಪಡಿಸಿದಿ ಬಂಧಿಸುವಂತೆ ಒತ್ತಾಯಿಸಿದ್ದರು.

ಇದನ್ನೂ ಓದಿ:ಡಿಸೆಂಬರ್ ನಲ್ಲಿ ಬೆಳಗಾವಿ ಚಳಿಗಾಲ ವಿಧಾನಸಭಾ ಅಧಿವೇಶನ, ಅಗತ್ಯ ಸಿದ್ಧತೆಗೆ ಸೂಚನೆ

ಅಲ್ಲದೆ, ಲುಲು ಮಾಲ್ ನಲ್ಲಿ ಮಹಿಳೆಯರ ಜೊತೆ ಅನುಚಿತ ವರ್ತನೆ ಪ್ರಕರಣಕ್ಕೆ ಸಂಬಂಧಿಸಿ, ವಿಡಿಯೋ ದೃಶ್ಯ ಆಧರಿಸಿ ಪೊಲೀಸರು ಆರೋಪಿಯ ಗುರುತು ಪತ್ತೆ ಹಚ್ಚಿದ್ದಾರೆ. ಬಸವೇಶ್ವರನಗರ ನಿವಾಸಿ ಅಶ್ವಥ್ ನಾರಾಯಣ್ (60) ಆರೋಪಿ ಎಂದು ಗುರುತಿಸಲಾಗಿದೆ.

ಈತ ಮೂರು ದಿನಗಳ ಹಿಂದೆ ಲುಲು ಮಾಲ್‌ನಲ್ಲಿ ಯವತಿಯರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ ಈ ವೇಳೆ ಯಶವಂತ್ ಎಂಬ ಯುವಕ ವಿಡಿಯೋ ಚಿತ್ರೀಕರಿಸಿ ಬಳಿಕ ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದ. ಅಲ್ಲದೆ, ಲುಲು ಮಾಲ್‌ ಮ್ಯಾಜೇಜರ್‌ ಸಹ ಕೇಸ್‌ ದಾಖಲಿಸಿದ್ದರು.

ಇದನ್ನೂ ಓದಿ:ನವೆಂಬರ್ 10 ರವರೆಗೆ ಕಾದು ನೋಡಿ ಬಿಜೆಪಿಯಲ್ಲಿ ಏನಾಗುತ್ತೆ ಅಂತ - ಜಮೀರ್ ಅಹಮದ್ 

ಸದ್ಯ ವಿಡಿಯೋ ಆಧರಿಸಿ ಪೊಲೀಸರು ಆರೋಪಿಯ ಗುರುತು ಪತ್ತೆಹಚ್ಚಿದ್ದಾರೆ. ಆರೋಪಿ ಪ್ರತಿಷ್ಠಿತ ಮಠಕ್ಕೆ ಸೇರಿದ ಶಾಲೆಯಲ್ಲಿ ಮುಖ್ಯ ಶಿಕ್ಷಕನಾಗಿ ಕೆಲಸ ನಿರ್ವಹಿಸಿ ಸಧ್ಯ ನಿವೃತ್ತನಾಗಿದ್ದಾನೆ. ಕಳೆದ ಎಂಟು ತಿಂಗಳ ಹಿಂದೆ ಅಶ್ವಥ್ ನಾರಾಯಣ್ ನಿವೃತ್ತ ಹೊಂದಿದ್ದ. ಸದ್ಯ ಅಶ್ವಥ್ ಮನೆಗೆ ಬೀಗ ಹಾಕಿಕೊಂಡು ಪರಾರಿಯಾಗಿದ್ದು, ಆರೋಪಿ ಪತ್ತೆಗೆ ಮಾಗಡಿ ರೋಡ್ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News