Money Laundering Case: ಬಾಗಲಕೋಟೆ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯಲ್ಲಿನ ಅಕ್ರಮ ಹಣ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಐಡಿಬಿಐ ಬ್ಯಾಂಕ್ ಉದ್ಯೋಗಿಯನ್ನ ಬಾಗಲಕೋಟೆ ಪೊಲೀಸರು ಬಂಧಿಸಿದ್ದಾರೆ
ಐಡಿಬಿಐ ಬ್ಯಾಂಕ್'ನ (IDBI Bank) ಸೆಲ್ಸ್ ಸೂಪರ್ವೈಸರ್ ಸೂರಜ್ ಸಾಗರ'ನನ್ನ ಬಂಧಿಸಿ ಪೊಲೀಸರು ಆತನನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಬಾಗಲಕೋಟೆ ಜಿಲ್ಲ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥರೆಡ್ಡಿ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ- ಸ್ವಿಮ್ಮಿಂಗ್ ಪೂಲ್ ಗೆ ಚಿನ್ನಾಭರಣ ಧರಿಸಿ ಹೋಗುವ ಮುನ್ನ ಎಚ್ಚರ: ನಿಮ್ಮ ಚಿನ್ನಾಭರಣ ಕಳ್ಳತನವಾಗಬಹುದು..!
ಅಕ್ರಮ ಹಣ ವರ್ಗಾವಣೆ (Illegal Money Transfer):
ಪ್ರವಾಸೋದ್ಯಮ ಇಲಾಖೆಗೆ ಸಂಬಂಧಿಸಿದ ಎರಡು ಕೋಟಿ ನಲವತ್ತ್ಮೂರು ಲಕ್ಷ ರೂಪಾಯಿಗಳನ್ನ ಐಡಿಬಿಐ ಬ್ಯಾಂಕ್'ನ ಮೂರು ಖಾತೆಗಳ ಮೂಲಕ ಅಕ್ರಮವಾಗಿ ಹಣ ವರ್ಗಾವಣೆ ಮಾಡಲಾಗಿತ್ತು.
ಪ್ರವಾಸೋದ್ಯಮ ಇಲಾಖೆಯ (Department of Tourism) ಡಿಸಿ ಹಾಗೂ ಪ್ರವಾಸೋದ್ಯಮ ಸಮೀತಿಯ ಅಧ್ಯಕ್ಷರಿಗೆ ಗೊತ್ತಿಲ್ಲದಂತೆ ಅಕ್ರಮನಹಣ ವರ್ಗಾವಣೆ ನಡೆದಿತ್ತು ಎನ್ನಲಾಗಿದೆ.
ಇದನ್ನೂ ಓದಿ- ಕಲಘಟಗಿ ಠಾಣೆ ಪೊಲೀಸರ ಭರ್ಜರಿ ಕಾರ್ಯಾಚರಣೆ: 32 ಲಕ್ಷ ರೂ. ಮೌಲ್ಯದ ಅಕ್ರಮ ಸಾರಾಯಿ ಜಪ್ತಿ, ನಾಲ್ವರ ಬಂಧನ
ಜುಲೈ 2ರಂದು ಇಲಾಖೆಯ ಡಿಡಿಯನ್ನು ಗಮನಿಸಿದ ಗೋಪಾಲ್ ಹಿತ್ತಲಮನಿ ಪ್ರವಾಸೋದ್ಯಮ ಇಲಾಖೆಯಲ್ಲಿನ ಅಕ್ರಮ ಹಣ ವರ್ಗಾವಣೆ ವಿಚಾರವಾಗಿ ಜುಲೈ 11 ರಂದು ಸಿಇಎನ್ ಪೊಲೀಸ್ ಠಾಣೆಯಲ್ಲಿ ಬ್ಯಾಂಕ್ ಮ್ಯಾನೇಜರ್, ಸಿಬ್ಬಂದಿ ವಿರುದ್ಧ ದೂರು ದಾಖಲಿಸಿದ್ದರು. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನ ಚುರುಕುಗೊಳಿಸಿದ್ದು ವಿಚಾರಣೆ ಮುಂದುವರೆದಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.