ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಖಾಸಗಿ ಶಾಲೆಗಳಿಗೆ ಶುಕ್ರವಾರ ಬೆಳ್ಳಂಬೆಳಗ್ಗೆಯೇ ಬಾಂಬ್ ಬೆದರಿಕೆ ಕರೆ ಬಂದಿದೆ. 15ಕ್ಕೂ ಹೆಚ್ಚು ಶಾಲೆಗಳಿಗೆ ಇ-ಮೇಲ್ ಮೂಲಕ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿದ್ದಾರೆ.
ಬಸವೇಶ್ವರ ನಗರದ ನ್ಯಾಪಲ್, ಕಾರ್ಮೆಲ್, ವಿದ್ಯಾಶಿಲ್ಪ, ಮಹದೇವಪುರದ ಗೋಪಾಲನ್ ಇಂಟರ್‍ನ್ಯಾಷನಲ್ ಶಾಲೆ, ವರ್ತೂರು ಠಾಣಾ ವ್ಯಾಪ್ತಿಯ ಡೆಲ್ಲಿ ಪಬ್ಲಿಕ್ ಸ್ಕೂಲ್, ಮಾರತ್ತಹಳ್ಳಿ ಠಾಣಾ ವ್ಯಾಪ್ತಿಯ ನ್ಯೂ ಅಕಾಡೆಮಿ ಸ್ಕೂಲ್, ಹೆಣ್ಣೂರು ಠಾಣಾ ವ್ಯಾಪ್ತಿಯ ಸೇಂಟ್ ವಿನ್ಸೆಂಟ್ ಪೌಲ್ ಶಾಲೆ, ಗೋವಿಂದಪುರ ಠಾಣಾ ವ್ಯಾಪ್ತಿಯ ಇಂಡಿಯನ್ ಪಬ್ಲಿಕ್ ಸ್ಕೂಲ್ ಸೇರಿದಂತೆ ಹಲವಾರು ಶಾಲೆಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಿದ್ದಾರೆ.
ಇದನ್ನೂ ಓದಿ: "ಎರಡು ದಿನಗಳಲ್ಲಿ ವರದಿ ತಗೊಂಡು ಕ್ರಮ ತೆಗೆದುಕೊಳ್ಳುತ್ತೇವೆ"
ಈ ಆಘಾತಕಾರಿ ವಿಷಯ ತಿಳಿದ ಕೂಡಲೇ ಬೆಂಗಳೂರಿನ ವಿವಿಧ ಶಾಲೆಗೆ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ಭೇಟಿ ನೀಡಿದ್ದು, ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಮಕ್ಕಳನ್ನು ಶಾಲೆಯಿಂದ ಮನೆಗೆ ವಾಪಸ್ ಕಳುಹಿಸಿದ್ದಾರೆ. ಪೋಷಕರು ಸಹ ಶಾಲೆಯತ್ತ ದೌಡಾಯಿಸಿದ್ದಾರೆ.
ಬಾಂಬ್ ಬೆದರಿಕೆ ಬಂದ ಹಿನ್ನೆಲೆ ವಿದ್ಯಾರ್ಥಿಗಳು, ಪೋಷಕರು ಮತ್ತು ಶಾಲೆಯ ಸಿಬ್ಬಂದಿಗಳಲ್ಲಿ ಭಾರೀ ಆತಂಕ ವ್ಯಕ್ತವಾಗಿದೆ. ಕಳೆದ ವರ್ಷ ಬೆಂಗಳೂರಿನ 30ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿತ್ತು. ಇದೀಗ ಅದೇ ರೀತಿಯ ಘಟನೆ ಮರುಕಳಿಸಿದೆ.
ಇದನ್ನೂ ಓದಿ: 8 ನೇ ದಿನಕ್ಕೆ ಕಾಲಿಟ್ಟ ಅತಿಥಿ ಉಪನ್ಯಾಸಕರ ಧರಣಿ ಸತ್ಯಾಗ್ರಹ
ಈ ಬಗ್ಗೆ ಮಾತನಾಡಿರುವ ರಾಜಾಜಿನಗರ ಶಾಸಕ ಸುರೇಶ್ ಕುಮಾರ್, ‘ವಿದ್ಯಾಶಿಲ್ಪ ಶಾಲೆಗೆ ಬಾಂಬ್ ಬೆದರಿಕೆಯ ಇ-ಮೇಲ್ ಬಂದಿದೆ. ಉಳಿದಂತೆ ಎಲ್ಲಾ ಶಾಲೆಗೂ ಬೆದರಿಕೆ ಮೇಲೆ ಫಾರ್ವರ್ಡ್ ಆಗಿದೆ. ಯಾರು ಗಾಬರಿ ಬೀಳುವ ಅಗತ್ಯವಿಲ್ಲ. ಪೊಲೀಸರು ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದಾರೆ’ ಎಂದು ಹೇಳಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://youtu.be/--phA9ji8NM
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.