ತುಮಕೂರು: ಅಳಿಯ ಮತ್ತು ಮಗಳ ಜಗಳದಲ್ಲಿ ಅತ್ತೆಯೊಬ್ಬಳು ಹತ್ಯೆಯಾಗಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿಯ ಕೊಡಿಗೇನಹಳ್ಳಿಯಲ್ಲಿ ನಡೆದಿದೆ.
ಹತ್ಯೆಯಾದ ಮಹಿಳೆಯನ್ನು ಅಶ್ವಿತ್ ಉನ್ನಿಸಾ (58) ಎಂದು ಗುರುತಿಸಲಾಗಿದೆ. ಹತ್ಯೆಯಾದ ಮಹಿಳೆಯ ಮಗಳು ಹಾಗೂ ಅಳಿಯನ ನಡುವೆ ಜಗಳ ನಡೆಯುತ್ತಿತ್ತು. ಈ ವೇಳೆ ಜಗಳ ಬಿಡಿಸಲು ಯತ್ನಿಸಿದ ಅತ್ತೆಯ ತಲೆಗೆ ಅಳಿಯ ದೊಣ್ಣೆಯಿಂದ ಹೊಡೆದಿದ್ದಾನೆ. ಪರಿಣಾಮ ಆಕೆ ಸಾವನ್ನಪ್ಪಿದ್ದಾಳೆಂದು ವರದಿಯಾಗಿದೆ.
ಇದನ್ನೂ ಓದಿ: ಕುತ್ತಿಗೆಗೆ ಚಾಕು ಇರಿದು ಮಹಿಳೆಯ ಕೊಲೆ: ಆರೋಪಿ ಪರಾರಿ, ಪೊಲೀಸರಿಂದ ಪ್ರಕರಣ ದಾಖಲು
ಹತ್ಯೆಯಾದ ಅಶ್ವಿತ್ ಉನ್ನಿಸಾಳ ಪುತ್ರಿಯನ್ನು ಕೊಡಿಗೇನಹಳ್ಳಿಯ ಸೈಯದ್ ಸುಹೇಲ್ನೊಂದಿಗೆ ಮದುವೆ ಮಾಡಿಕೊಡಲಾಗಿತ್ತು. ಮದುವೆ ಬಳಿಕ ಗಂಡ-ಹೆಂಡತಿ ನಡುವೆ ನಿರಂತರ ಜಗಳಗಳು ನಡೆಯುತ್ತಿದ್ದವಂತೆ. ಜಗಳ ವಿಕೋಪಕ್ಕೆ ತಿರುಗಿದ ಹಿನ್ನೆಲೆ ತವರು ಮನೆಯಲ್ಲಿದ್ದ ತಾಯಿಯನ್ನು ಫೋನ್ ಮಾಡಿ ಮಗಳು ಗಂಡನ ಮನೆಗೆ ಕರೆಸಿಕೊಂಡಿದ್ದಾಳೆ.
ಈ ವೇಳೆ ಜಗಳ ಬಿಡಿಸಲು ಮುಂದಾದ ಅತ್ತೆಯ ತಲೆಗೆ ಅಳಿಯ ಸುಹೇಲ್ ದೊಣ್ಣೆಯಿಂದ ಹೊಡೆದಿದ್ದಾನೆ. ಪರಿಣಾಮ ತೀವ್ರ ರಕ್ತಸ್ರಾವದಿಂದ ಒದ್ದಾಡುತ್ತಿದ್ದ ಅಶ್ವಿತ್ ಉನ್ನಿಸಾಳನ್ನು ಮಧುಗಿರಿಯ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ.
ಇದನ್ನೂ ಓದಿ: Road Accident: ನೈಸ್ ರಸ್ತೆಯಲ್ಲಿ ನಿಯಂತ್ರಣ ತಪ್ಪಿ ಲಾರಿ ಪಲ್ಟಿ
ಈ ಸಂಬಂಧ ಕೊಡಿಗೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.