ಮದ್ಯ ವ್ಯಸನಿ ಮಗನ ಕಾಟ: ಬೆಂಕಿಯಿಟ್ಟ ಕೊಂದ ತಾಯಿ

ಪ್ರತಿ ದಿನ ಕುಡಿದು ಬಂದು ಮನೆಯವರ ಮೇಲೆ ಹಲ್ಲೆ ಮಾಡುತ್ತಿದ್ದ ಚಾಂದ್ ಪಾಷಾನ ಉಪಟಳದಿಂದ ಬೇಸತ್ತಿದ್ದ ಆತನ ಪತ್ನಿ ಸಹ ಬಿಟ್ಟು ಹೋಗಿದ್ದಳು. ಹೀಗಾಗಿ ಪಾಷಾ ತನ್ನ ತಾಯಿ ಜೊತೆ ವಾಸವಾಗಿದ್ದ.   

Written by - VISHWANATH HARIHARA | Edited by - Yashaswini V | Last Updated : Jul 18, 2023, 03:25 PM IST
  • ಪ್ರತಿನಿತ್ಯ ಕುಡಿದು ಹಲ್ಲೆ ಮಾಡುತ್ತಿದ್ದ ಮೃತ ಚಾಂದ್ ಪಾಷ(40)
  • ಘಟನೆ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು
  • ಸೂಫಿಯಾ ಚಾಂದ್ ಪಾಷ ಎಂಬ ತಾಯಿಯಿಂದ ನಡೆದ ಕೃತ್ಯ
ಮದ್ಯ ವ್ಯಸನಿ ಮಗನ ಕಾಟ: ಬೆಂಕಿಯಿಟ್ಟ ಕೊಂದ ತಾಯಿ title=

ಬೆಂಗಳೂರು : ಮದ್ಯಪಾನಕ್ಕೆ ದಾಸನಾಗಿದ್ದ ಮಗನನ್ನ ತಾಯಿಯೇ ಪೆಟ್ರೋಲ್ ಎರಚಿ ಸುಟ್ಟು ಹಾಕಿರುವ ಘಟನೆ ನಿನ್ನೆ ಸಂಜೆ ಸೋಲದೇವನಹಳ್ಳಿ‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚಾಂದ್ ಪಾಷಾ (40) ಕೊಲೆಯಾದ ವ್ಯಕ್ತಿ. ಕೊಲೆ ಆರೋಪದ ಮೇಲೆ ತಾಯಿ‌ ಸೋಫಿಯಾ ಚಾಂದ್ ಪಾಷಾಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರತಿ ದಿನ ಕುಡಿದು ಬಂದು ಮನೆಯವರ ಮೇಲೆ ಹಲ್ಲೆ ಮಾಡುತ್ತಿದ್ದ ಚಾಂದ್ ಪಾಷಾನ ಉಪಟಳದಿಂದ ಬೇಸತ್ತಿದ್ದ ಆತನ ಪತ್ನಿ ಸಹ ಬಿಟ್ಟು ಹೋಗಿದ್ದಳು. ಹೀಗಾಗಿ ಪಾಷಾ ತನ್ನ ತಾಯಿ ಜೊತೆ ವಾಸವಾಗಿದ್ದ. 

ಇದನ್ನೂ ಓದಿ- ಭೀಮನ ಅಮಾವಾಸ್ಯೆ ದಿನವೇ ದೇವಸ್ಥಾನದಲ್ಲಿ ಪತ್ನಿ ಎದುರೇ ಪತಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಸೋಮವಾರ ಕುಡಿದು ಬಂದು ತಾಯಿ ಜೊತೆ ಗಲಾಟೆ ಮಾಡಿದ್ದನು. ಬಳಿಕ ಸಂಜೆ 4:45ರ ಸುಮಾರಿಗೆ ಮತ್ತೆ ಕಂಠಪೂರ್ತಿ ಕುಡಿದು ಬಂದು ಮನೆಯ ಹೊರಗಡೆ ಕುಳಿತಿದ್ದ. ಸಿಟ್ಟಿಗೆದ್ದ ಆತನ ತಾಯಿ ಅವನ ಮೇಲೆ ಪೆಟ್ರೋಲ್ ಎರಚಿ ಬೆಂಕಿ ಹಚ್ಚುವುದಾಗಿ ಹೆದರಿಸಲು ಯತ್ನಿಸಿದ್ದಾಳೆ. ಈ ವೇಳೆ ಮಾತಿಗೆ ಮಾತು ಬೆಳೆದಾಗ ಬೆಂಕಿ ಹಚ್ಚಿದ್ದಾಳೆ. ಪರಿಣಾಮ ಚಾಂದ್ ಪಾಷಾ ಸ್ಥಳದಲ್ಲೇ ಸುಟ್ಟು ಮೃತಪಟ್ಟಿದ್ದಾನೆ.

ಇದನ್ನೂ ಓದಿ- ಯುವಕನ ಬೆತ್ತಲೆ ಪ್ರಕರಣ: ರಾಷ್ಟ್ರ ನಾಯಕರಿಗೆ ಪತ್ರ ಬರೆದ ಹುಬ್ಬಳ್ಳಿ ಜನ

ಸದ್ಯ ಘಟನೆ ಸಂಬಂಧ ಸೋಲದೇವನಹಳ್ಳಿ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದ್ದು, ಆರೋಪಿ ತಾಯಿ ಸೋಫಿಯಾಳನ್ನ ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸಲಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News