ಚಿತ್ರದುರ್ಗ : ಮುರುಘಾ ಶ್ರೀಗಳ ಶಿಷ್ಯ ಆತ್ಮಹತ್ಯೆ ಯತ್ನಿಸಿರುವ ಘಟನೆ ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ನಡೆದಿದೆ. ನಾಯಕನ ಹಟ್ಟಿ ತಿಪ್ಪೇರುದ್ರಸ್ವಾಮಿ ಎಂಬ ಶ್ರೀಗಳ ಶಿಷ್ಯ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಪ್ರಯತ್ನಿಸಿದ್ದಾನೆ. ಅಷ್ಟರಲ್ಲೆ ಪೊಲೀಸರು ಬಂದು ತಿಪ್ಪೇರುದ್ರಸ್ವಾಮಿಯನ್ನು ತಡೆದು ವಶಕ್ಕೆ ಪಡೆದಿದ್ದಾರೆ.
ಮುರುಘಾ ಶ್ರೀಗಳನ್ನು ಚಿತ್ರದುರ್ಗ 2ನೇ ಸೆಷನ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 4 ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಇದನ್ನೂ ಓದಿ : ನ್ಯಾಯಾಲಯಕ್ಕೆ ಹಾಜರಾದ ಮುರುಘಾ ಶ್ರೀ : 4 ದಿನ ಖಾಕಿ ಕಸ್ಟಡಿಗೆ
ಮುರುಘಾ ಶರಣರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಇಂದು ಬೆಳಗ್ಗೆ ಜೈಲಿನಿಂದ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಲಾಗಿತ್ತು. ನಂತರ ಪೊಲೀಸ್ ಸರ್ಪಗಾವಲಿನಲ್ಲಿ ಜಿಲ್ಲಾ ಸೆಷನ್ ನ್ಯಾಯಾಲಯಕ್ಕೆ ಕರೆತರಲಾಗಿತ್ತು. ಇಂದು ವಿಚಾರಣೆ ನಡೆಯಬೇಕಿದ್ದ ಕಾರಣ ಖುದ್ದು ಶ್ರೀಗಳೇ ಹಾಜರಾಗಬೇಕು ಎಂದು ಕೋರ್ಟ್ ಸೂಚನೆ ನೀಡಿತ್ತು. ಈ ಹಿನ್ನೆಲೆ ಶ್ರೀಗಳು ನ್ಯಾಯಾಲಯದ ಮುಂದೆ ಹಾಜರಾಗಿದ್ದರು.
ಇನ್ನು ಶ್ರೀಗಳನ್ನು ವಿಚಾರಣೆ ನಡೆಸಲು 5 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಆದರೆ, ಇದೀಗ 4 ದಿನಗಳ ಕಾಲ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿ ಮುರುಘಾ ಶ್ರೀಗಳನ್ನು ಪೊಲೀಸರು ಹೆಚ್ಚಿನ ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ.
ಇದನ್ನೂ ಓದಿ : Muruga Mutt case: ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಮುರುಘಾ ಶ್ರೀ ಶಿಫ್ಟ್!
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.