ಬೆಳಗಾವಿ : ಕಾಂಗ್ರೆಸ್ ಕಾರ್ಯಕರ್ತೆ ನವ್ಯಶ್ರೀ ರಾವ್ ನಗರದ ಎಪಿಎಂಸಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾರೆ. ನವ್ಯಶ್ರೀ ರಾವ್ ವಿರುದ್ಧ ಸುಳ್ಳು ಅತ್ಯಾಚಾರ ಕೇಸ್ ದಾಖಲಿಸುವುದಾಗಿ ಬೆದರಿಕೆ, ಸುಲಿಗೆ ಆರೋಪದಡಿ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ರಾಜಕುಮಾರ ಟಾಕಳೆ ದೂರು ನೀಡಿದ್ದಾರೆ.
ಅಲ್ಲದೆ, ಚನ್ನಪಟ್ಟಣದ ನವ್ಯಶ್ರೀ ಅಶ್ಲೀಲ ವಿಡಿಯೋ ವೈರಲ್ ಆಗಿತ್ತು. ಅಶ್ಲೀಲ ವಿಡಿಯೋ ವೈರಲ್ ಬೆನ್ನಲ್ಲೇ ರಾಜಕುಮಾರ ಟಾಕಳೆ ಜುಲೈ 18ರಂದು ಬೆಳಗಾವಿ ಎಪಿಎಂಸಿ ಠಾಣೆಯಲ್ಲಿ ನವ್ಯಶ್ರೀ ವಿರುದ್ಧ ದೂರು ನೀಡಿದ್ದರು. ನವ್ಯಶ್ರೀ ವಿರುದ್ಧ ಐಪಿಸಿ ಸೆಕ್ಷನ್ 1860(U/s 384, 448, 504, 506, 34)ರಡಿ ಕೇಸ್ ದಾಖಲಾಗಿತ್ತು.
ಇದನ್ನೂ ಓದಿ : Navyashree R Rao : ಹೊಸ ಬಾಂಬ್ ಸಿಡಿಸಿದ್ದ ಕಾಂಗ್ರೆಸ್ ಯುವ ಕಾರ್ಯಕರ್ತೆ ನವ್ಯಶ್ರೀ ರಾವ್..!
ನಂತರ ನವ್ಯಶ್ರೀ ಜುಲೈ 23ರಂದು ರಾಜಕುಮಾರ ಟಾಕಳೆ ವಿರುದ್ಧ ಪ್ರತಿದೂರು ನೀಡಿದ್ದರು. ಇಂದು ನವ್ಯಶ್ರೀ ತನ್ನ ದೂರಿನ ಬಗ್ಗೆ ಅಗತ್ಯ ಮಾಹಿತಿ ನೀಡಲು ಠಾಣೆಗೆ ಆಗಮಿಸಿದ್ದಾರೆ. ಎಪಿಎಂಸಿ ಠಾಣೆ ಪೊಲೀಸರುನವ್ಯಶ್ರೀಯನ್ನ ವಿಚಾರಣೆಗೆ ಒಳಪಡಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.