ಬೆಂಗಳೂರು : ಮತಗಟ್ಟೆ ಅಧಿಕಾರಿ ಸೋಗಿನಲ್ಲಿ ಮತದಾರರ ವೈಯಕ್ತಿಕ ಮಾಹಿತಿ ಸಂಗ್ರಹಿಸುತ್ತಿರುವ ಆರೋಪ ಸಂಬಂಧ ಪ್ರಕರಣ ದಾಖಲಾಗಿದೆ. ಈ ಹಿನ್ನೆಲೆ ಹಲಸೂರು ಗೇಟ್ ಪೊಲೀಸರು ಮಲ್ಲೇಶ್ವರದಲ್ಲಿರುವ ಚಿಲುಮೆ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ದಿ ಸಂಸ್ಥೆ ಮೇಲೆ ನಗರ ಕೇಂದ್ರ ವಿಭಾಗದ ಪೊಲೀಸರು ದಾಳಿ ಮಾಡಿದ್ದಾರೆ.
ಮತಗಟ್ಟೆ ಅಧಿಕಾರಿ ಸೋಗಿನಲ್ಲಿ ಮತದಾರರಿಂದ ವೈಯಕ್ತಿಕ ಮಾಹಿತಿ ಸಂಗ್ರಹ ಆರೋಪ ಹಿನ್ನೆಲೆ ಕಾಂಗ್ರೆಸ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಚಿಲುಮೆ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸಂಸ್ಥೆಯ ನಿರ್ದೇಶರಾಗಿರುವ ಕೃಷ್ಣಪ್ಪ ರವಿಕುಮಾರ್ ಗಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಹ್ಯೂಮನ್ ರೈಟ್ಸ್ ಆಫೀಸರ್ ಹೆಸರಿನಲ್ಲಿ ಹಣ ವಸೂಲಿ: ಆರೋಪಿಗಳ ಬಂಧನ
ಸಂಸ್ಥೆಯ ಬ್ಯೂಸಿನೆಸ್ ಹೆಡ್ ಸುಧಾಕರ್, ಕೇಸ್ ವರ್ಕರ್ ರಕ್ಷಿತ್, ನಕಲಿ ಮತಗಟ್ಟೆ ಅಧಿಕಾರಿಗಳಾಗಿದ್ದ ರೇಣುಕಾ ಪ್ರಸಾದ್ ಹಾಗೂ ಧರ್ಮೇಶ್ ಎಂಬುವರನ್ನು ವಶಕ್ಕೆ ಪಡೆದುಕೊಂಡು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.
ಮತ್ತೊಂದೆಡೆ ಕಬ್ಬನ್ ಪಾರ್ಕ್ ಎಸಿಪಿ ನಾರಾಯಣಸ್ವಾಮಿ ನೇತೃತ್ವದ ತಂಡ ಚಿಲುಮೆ ಕಚೇರಿ ಮೇಲೆ ದಾಳಿ ನಡೆಸಿ ಕಡತಗಳ ಪರಿಶೀಲನೆ ನಡೆಸುತ್ತಿದೆ. ಮತದಾರರಿಂದ ವೈಯಕ್ತಿಕ ಮಾಹಿತಿ ಸಂಗ್ರಹಣೆ ಎಂದಿನಿಂದ ಮಾಡಲಾಗಿದೆ. ಈವರೆಗೂ ಎಷ್ಟು ಮಂದಿಯ ಮಾಹಿತಿ ಪಡೆದುಕೊಳ್ಳಲಾಗಿದೆ ಎಂಬುದು ಸೇರಿದಂತೆ ತನಿಖೆ ಬೇಕಾದ ಮಾಹಿತಿಗಳನ್ನು ಬಗ್ಗೆ ಪೊಲೀಸರು ಕಲೆಹಾಕುತ್ತಿದ್ದಾರೆ. ಪ್ರಮುಖ ಆರೋಪಿಗಳನ್ನು ಕೇಂದ್ರ ವಿಭಾಗ ಡಿಸಿಪಿ ಶ್ರೀನಿವಾಸ್ ಗೌಡ ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ : ಪಿಎಸ್ಐ ನೇಮಕಾತಿ ಹಗರಣ ಪ್ರಕರಣ: 11 ಜನ ಆರೋಪಿಗಳಿಗೆ ಜಾಮೀನು ಮಂಜೂರು
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.