ಮೊಬೈಲ್ ಪತ್ತೆಯಲ್ಲಿ ರಾಜ್ಯದಲ್ಲೇ ಮುಂಚೂಣಿಯಲ್ಲಿದೆ ಈ ಜಿಲ್ಲೆ

Property Returan Parade: ಜಿಲ್ಲಾ ಪ್ಯಾಪ್ತಿಯಲ್ಲಿ ಕಳ್ಳತನವಾಗಿದ್ದ ಮೊಬೈಲ್, ಮುಂಡರಗಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕಳ್ಳತನವಾಗಿದ್ದ ಮೂರು ಟ್ರ್ಯಾಕ್ಟರ್ ಟ್ರೇಲರ್, ರೋಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನವಾಗಿದ್ದ 10 ಬೈಕ್ ಗಳು, ಗ್ರಾಮಾಂತರ ಪೊಲೀಸ್ ಠಾಣೆ ಬ್ಯಾಪ್ತಿಯಲ್ಲಿ ಕಳ್ಳತನವಾಗಿದ್ದ ಚಿನ್ನದ ಮಾಂಗಲ್ಯ, ಬೆಳ್ಳೆ ಮೂರ್ತಿಯನ್ನ ಮಾಲಿಕರಿಗೆ ಹಿಂತಿರುಗಸಲಾಯಿತು.

Written by - Yashaswini V | Last Updated : Jan 24, 2024, 01:53 PM IST
  • ತಂತ್ರಾಂಶ ಬಳಸಿಕೊಂಡು ಕಳ್ಳತನವಾದ ಮೊಬೈಲ್ ಗಳ ಪತ್ತೆ

    ಮೊಬೈಲ್ ಪತ್ತೆಯಲ್ಲಿ ಮುಂಚೂಣಿಯಲ್ಲಿ ಗದಗ ಜಿಲ್ಲೆ
ಮೊಬೈಲ್ ಪತ್ತೆಯಲ್ಲಿ ರಾಜ್ಯದಲ್ಲೇ ಮುಂಚೂಣಿಯಲ್ಲಿದೆ ಈ ಜಿಲ್ಲೆ  title=

Crime News: ಸೆಂಟ್ರಲ್ ಇಕ್ಯುಪ್ಮೆಂಟ್ ಐಡೆಂಟಿಟಿ ರಿಜಿಸ್ಟರ್ ಪೋರ್ಟಲ್ ಮೂಲಕ ಪತ್ತೆ ಹಚ್ಚಿದ್ದ 35 ಲಕ್ಷ ರೂಪಾಯಿ ಮೌಲ್ಯದ 210 ಮೊಬೈಲ್ ಸೇರಿದಂತೆ ಗದಗ ಜಿಲ್ಲೆಯ ವ್ಯಾಪ್ತಿಯಲ್ಲಿ ಕಳ್ಳತನವಾಗಿದ್ದ  ವಿವಿಧ ವಸ್ತುಗಳನ್ನ ಮೂಲ ವಾರಸುದಾರರಿಗೆ ಹಿಂತಿರುಗಿಸಲಾಗಿದೆ.  

ಗದಗ ಎಸ್ ಪಿ ಕಚೇರಿ ಆವರಣದಲ್ಲಿ ಆಯೋಜನೆಗೊಂಡಿದ್ದ ಸ್ವತ್ತು ಮರಳಿಸುವ ಕಾರ್ಯಕ್ರಮದಲ್ಲಿ ಎಡಿಜಿಪಿ ಎಸ್ ಮುರುಗನ್ ಅವರ ಸಮ್ಮುಖದಲ್ಲಿ ಮೂಲ ಮಾಲೀಕರಿಗೆ ಕಾಲುವಾಗಿದ್ದ ವಸ್ತುಗಳನ್ನು ಹಸ್ತಾಂತರಿಸಲಾಯಿತು. 

ಇದನ್ನೂ ಓದಿ- Udupi: ಬಾವಿಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ, ಹೃದಯಾಘಾತದಿಂದ ವಿದ್ಯಾರ್ಥಿ ಸಾವು!

ಜಿಲ್ಲಾ ಪ್ಯಾಪ್ತಿಯಲ್ಲಿ ಕಳ್ಳತನವಾಗಿದ್ದ ಮೊಬೈಲ್, ಮುಂಡರಗಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕಳ್ಳತನವಾಗಿದ್ದ ಮೂರು ಟ್ರ್ಯಾಕ್ಟರ್ ಟ್ರೇಲರ್, ರೋಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನವಾಗಿದ್ದ 10 ಬೈಕ್ ಗಳು, ಗ್ರಾಮಾಂತರ ಪೊಲೀಸ್ ಠಾಣೆ ಬ್ಯಾಪ್ತಿಯಲ್ಲಿ ಕಳ್ಳತನವಾಗಿದ್ದ ಚಿನ್ನದ ಮಾಂಗಲ್ಯ, ಬೆಳ್ಳೆ ಮೂರ್ತಿಯನ್ನ ಮಾಲಿಕರಿಗೆ ಹಿಂತಿರುಗಸಲಾಯಿತು. ಒಟ್ಟು 45 ಲಕ್ಷ ರೂಪಾಯಿ ಮೌಲ್ಯದ ವಿವಿಧ ವಸ್ತುಗಳನ್ನ ಮರಳಿಸಲಾಯಿತು. ಸ್ವತ್ತು ಹಿಂತಿರುಗಿಸುವ ಕಾರ್ಯಕ್ರಮದಲ್ಲಿ ಉತ್ತರ ವಲಯ ಐಜಿಪಿ ವಿಕಾಸ್ ಕುಮಾರ್, ಎಸ್ ಪಿ ಬಿಎಸ್ ನೇಮಗೌಡ, ಎಎಸ್ ಪಿ ಎಂಬಿ ಸಂಕದ್ ಉಪಸ್ಥಿತರಿದ್ದರು.

ಇದನ್ನೂ ಓದಿ- West Bengal: ರೀಲ್ಸ್ ಮಾಡುವಾಗ ರೈಲು ಡಿಕ್ಕಿ ಹೊಡೆದು ಮೂವರು ಯುವಕರು ಸಾವು!

ಈ ವೇಳೆ ಮಾತನಾಡಿದ ಎಡಿಜಿಪಿ ಮುರುಗನ್ ಸಿಇಐಆರ್ ತಂತ್ರಾಂಶ ಬಳಸಿಕೊಂಡು ಕಳ್ಳತನವಾದ ಮೊಬೈಲ್ ಗಳನ್ನು ಪತ್ತೆಹಚ್ಚಿ, ಅವುಗಳನ್ನು ಮರಳಿಸುವಲ್ಲಿ ಗದಗ ಜಿಲ್ಲೆ ರಾಜ್ಯದಲ್ಲಿಯೇ ಎರಡನೆ ಸ್ಥಾನದಲ್ಲಿದೆ ಎಂದು ಪ್ರಶಂಸಿಸಿದರು. 

ಸಮಾರಂಭದಲ್ಲಿ ಬೆಳಗಾವಿ ಐಜಿಪಿ  ವಿಕಾಸಕುಮಾರ್, ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ಹೆಚ್ಚುವರಿ ಎಸ್ಪಿ ಎಂ.ಬಿ. ಸಂಕದ ಹಾಗೂ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=xFI-KJNrEP8

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News