ಸತ್ತೇ ಹೋಗಿದ್ದಾನೆ ಎಂದು ಬಿಂಬಿಸಿ ತಲೆಮರೆಸಿಕೊಂಡಿದ್ದ ರೌಡಿ ಅರೆಸ್ಟ್..!

Bengaluru Crime News : ಕಾಡುಬೀಸನಹಳ್ಳಿಯಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿ ಮಲ್ಲಿಕಾರ್ಜುನ ಅಲಿಯಾಸ್ ಮಲ್ಲಿಯನ್ನು ಸಿಸಿಬಿ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. 

Written by - Chetana Devarmani | Last Updated : Nov 21, 2023, 08:32 AM IST
  • ರೌಡಿ ಶೀಟರ್ ಮಲ್ಲಿಕಾರ್ಜುನ್ ಬಂಧನ
  • ಸಿಸಿಬಿ ಪೊಲೀಸರ ಬಲೆಗೆ ಬಿದ್ದ ಮಲ್ಲಿ
  • ಸಾವಿನ ನಾಟಕವಾಡಿದ್ದ ರೌಡಿ ಶೀಟರ್‌
ಸತ್ತೇ ಹೋಗಿದ್ದಾನೆ ಎಂದು ಬಿಂಬಿಸಿ ತಲೆಮರೆಸಿಕೊಂಡಿದ್ದ ರೌಡಿ ಅರೆಸ್ಟ್..! title=

ಬೆಂಗಳೂರು : ಸಿಸಿಬಿ ಪೊಲೀಸರು ಚಾಲಾಕಿ ಖದೀಮನೊಬ್ಬನನ್ನು ಖೆಡ್ಡಾಗೆ ಕೆಡವಿದ್ದಾರೆ. ಸಾವಿನ ನಾಟಕವಾಡಿ ತಲೆಮರೆಸಿಕೊಂಡಿದ್ದ ಈತ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. 

ಕಾಡುಬೀಸನಹಳ್ಳಿಯಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿ ಮಲ್ಲಿಕಾರ್ಜುನ ಅಲಿಯಾಸ್ ಮಲ್ಲಿಯನ್ನು ಸಿಸಿಬಿ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ರೌಡಿ ಶೀಟರ್ ಮಲ್ಲಿಕಾರ್ಜುನ ಅಲಿಯಾಸ್ ಮಲ್ಲಿ ಸಾವಿನ ನಾಟಕವಾಡಿ ಪೊಲೀಸರನ್ನೇ ಯಾಮಾರಿಸಿದ್ದ. 

ಇದನ್ನೂ ಓದಿ : Hubballi: ಸ್ವಚ್ಚತೆಯಲ್ಲಿ ನೈಋತ್ಯ ರೈಲ್ವೆ ವಲಯಕ್ಕೆ ಮೊದಲ ಸ್ಥಾನ

ರಾಜನುಕುಂಟೆಯಲ್ಲಿ ಒಂದು ಕೊಲೆ ಕೇಸ್ ನಲ್ಲಿ ಸಹ ಮಲ್ಲಿ ಆರೋಪಿಯಾಗಿದ್ದ. ಎರಡು ವರ್ಷಗಳಿಂದ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಓಡಾಡುತ್ತಿದ್ದ. ಮನೆ ಬಳಿ ಪೊಲೀಸರು ಹೋಗಿ ವಿಚಾರಿಸಿದಾಗ ಸತ್ತೇ ಹೋಗಿದ್ದಾನೆ ಎಂದು ಆತನ ಕುಟುಂಬದವರು ಹೇಳಿದ್ದರು.

ಮಲ್ಲಿಯ ಗೆಳೆಯರು, ಅವರ ಪರಿಚಿತರನ್ನ ಕೇಳಿದರೂ ಆತ ಸತ್ತಿದ್ದಾನೆ ಎಂದೇ ತಿಳಿಸುತ್ತಿದ್ದರು. ಇಷ್ಟೇ ಅಲ್ಲ ಸತ್ತೋದ ಅನ್ನೋದಕ್ಕೆ ಬೇಕಾದ ರೆಕಾರ್ಡ್ಸ್ ಸಹ ಮಾಡಿಟ್ಟಕೊಂಡಿದ್ದರು. ಸಿಸಿಬಿ ಪೊಲೀಸರಿಗೆ ಇದು ಸುಳ್ಳಿರಬಹುದೆಂಬ ಅನುಮಾನ ಬಂದಿತ್ತು.

ಮಲ್ಲಿ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕಿದ್ದ ಸಿಸಿಬಿ, ಊರೂರು ಸುತ್ತುತ್ತಾ ತಲೆಮರೆಸಿಕೊಂಡಿದ್ದ ಮಲ್ಲಿ ಯನ್ನು ಕೊನೆಗೂ ಬಂಧಿಸಿದ್ದಾರೆ. 

ಇದನ್ನೂ ಓದಿ : ಸುಳ್ಳುಸುದ್ದಿ, ಸಾಮಾಜಿಕ ಜಾಲತಾಣಗಳ ಮೇಲೆ ನಿಗಾವಹಿಸಲು ಗೃಹಸಚಿವ ಪರಮೇಶ್ವರ್ ಸೂಚನೆ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News