Shocking: ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ 7 ಮಂದಿ ಆತ್ಮಹತ್ಯೆ!

Family Suicide Case: ಆತ್ಮಹತ್ಯೆಗೆ ಶರಣಾಗಿರುವ ಮನೀಶ್ ಸೋಲಂಕಿಯವರೊಂದಿಗೆ 25 ಬಡಗಿಗಳು ಮತ್ತು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಎಂದಿನಂತೆ ಕಾರ್ಮಿಕರು ಶನಿವಾರ ಬೆಳಗ್ಗೆ ಕೆಲಸಕ್ಕೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ​

Written by - Puttaraj K Alur | Last Updated : Oct 28, 2023, 06:54 PM IST
  • ಮೂವರು ಮಕ್ಕಳು ಸೇರಿ ಒಂದೇ ಕಟುಂಬದ 7 ಮಂದಿ ಆತ್ಮಹತ್ಯೆ
  • ಗುಜರಾತ್‍ನ ಸೂರತ್‍ನಲ್ಲಿ ನಡೆದಿರುವ ಆಘಾತಕಾರಿ ಘಟನೆ
  • ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಪೀಠೋಪಕರಣ ಉದ್ಯಮಿ ಆತ್ಮಹತ್ಯೆ ಶಂಕೆ
Shocking: ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ 7 ಮಂದಿ ಆತ್ಮಹತ್ಯೆ! title=
ಒಂದೇ ಕುಟುಂಬದ 7 ಮಂದಿ ಆತ್ಮಹತ್ಯೆ!

ಸೂರತ್: ಮೂವರು ಮಕ್ಕಳು ಸೇರಿದಂತೆ ಒಂದೇ ಕಟುಂಬದ 7 ಮಂದಿ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಗುಜರಾತ್‍ನ ಸೂರತ್‍ನಲ್ಲಿ ನಡೆದಿದೆ. ಪಾಲನ್ಪುರ್ ಜಕತ್ನಾಕಾದಲ್ಲಿ ಶನಿವಾರ ಈ ಘಟನೆ ಬೆಳಕಿಗೆ ಬಂದಿದೆ. ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದ ಪೀಠೋಪಕರಣ ಉದ್ಯಮಿಯ ಕುಟುಂಬವು ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡಿದೆ ಎಂದು ವರದಿಯಾಗಿದೆ. ಘಟನೆ ಬಳಿಕ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ.

ಆತ್ಮಹತ್ಯೆ ಮಾಡಿಕೊಂಡಿರುವ ಉದ್ಯಮಿಯನ್ನು ಮನೀಶ್ ಸೋಲಂಕಿ ಎಂದು ಗುರುತಿಸಲಾಗಿದೆ. ಪತ್ನಿ ರೀಟಾ, ತಂದೆ ಕಾನು, ತಾಯಿ ಶೋಭಾ ಮತ್ತು ಮೂವರು ಮಕ್ಕಳಾದ ದಿಶಾ, ಕಾವ್ಯಾ ಮತ್ತು ಕುಶಾಲ್ ಆತ್ಮಹತ್ಯೆ ಮಾಡಿಕೊಂಡವರು. ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡಿರುವ ಅದಾಜನ್ ಪ್ರದೇಶದ ಸಿದ್ದೇಶ್ವರ್ ಅಪಾರ್ಟ್ಮೆಂಟ್‍ಗೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.  

ಇದನ್ನೂ ಓದಿ: ಗರ್ಭಿಣಿ ನಾಯಿಯನ್ನು ಅತ್ಯಾಚಾರ ಮಾಡಿ, 3ನೇ ಮಹಡಿಯ ಬಾಲ್ಕನಿಯಿಂದ ಎಸೆದ ಕಾಮುಕ..! ಥೂ.. ರಾಕ್ಷಸ

ಆತ್ಮಹತ್ಯೆಗೆ ಶರಣಾಗಿರುವ ಮನೀಶ್ ಸೋಲಂಕಿಯವರೊಂದಿಗೆ 25 ಬಡಗಿಗಳು ಮತ್ತು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಎಂದಿನಂತೆ ಕಾರ್ಮಿಕರು ಶನಿವಾರ ಬೆಳಗ್ಗೆ ಕೆಲಸಕ್ಕೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಫೋನ್ ಕರೆಗೆ ಉದ್ಯಮಿಯಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆ ಮನೆಗೆ ಹೋಗಿ ನೋಡಲಾಯಿತು. ಈ ವೇಳೆ ಮನೆಯ ಬಾಗಿಲು ಒಳಗಿನಿಂದಲೇ ಲಾಕ್ ಆಗಿತ್ತು. ಸ್ಥಳೀಯ ನಿವಾಸಿಗಳು ಮನೆಯ ಹಿಂಭಾಗದ ಕಿಟಕಿಯನ್ನು ಒಡೆದು ನೋಡಿದಾಗ ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.  

ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಮನೆಯಲ್ಲಿದ್ದ ಡೆತ್‍ನೋಟ್ ವಶಪಡಿಸಿಕೊಂಡಿದ್ದಾರೆ. ಈ ಡೆತ್‍ನೋಟ್‍ನಲ್ಲಿ ಉದ್ಯಮಿ ತಾವು ಎದುರಿಸುತ್ತಿದ್ದ ಆರ್ಥಿಕ ಸಂಕಷ್ಟದ ಬಗ್ಗೆ ಉಲ್ಲೇಖಿಸಿದ್ದಾರಂತೆ. ಸಾಮೂಹಿಕ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದು, ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: ಸ್ಪಾಂಜ್ ಬಾಂಬ್: ಹಮಾಸ್ ಉಗ್ರರ ಸುರಂಗಗಳ ವಿರುದ್ಧ ಇಸ್ರೇಲ್ ರಹಸ್ಯ ಅಸ್ತ್ರ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News