Shocking News: ಒಂದೇ ಕುಟುಂಬದ 9 ಜನರು ಶವವಾಗಿ ಪತ್ತೆ..!

ಮಹಾರಾಷ್ಟ್ರ ರಾಜಧಾನಿ ಮುಂಬೈನಿಂದ 350 ಕಿ.ಮೀ ದೂರದಲ್ಲಿರುವ ಸಾಂಗ್ಲಿ ಜಿಲ್ಲೆಯ ಮಹೈಸಾಲ್‌ನಲ್ಲಿ ಎರಡು ಮನೆಗಳಲ್ಲಿ ಒಂದೇ ಕುಟುಂಬದ 9 ಜನರ ಮೃತದೇಹಗಳು ಪತ್ತೆಯಾಗಿವೆ.

Written by - Puttaraj K Alur | Last Updated : Jun 20, 2022, 08:09 PM IST
  • ಒಂದೇ ಕುಟುಂಬದ 9 ಮಂದಿ ಶವವಾಗಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ
  • ಎರಡು ಮನೆಯಲ್ಲಿ ಅಣ್ಣ-ತಮ್ಮಂದಿರ ಕುಟುಂಬದ 9 ಮಂದಿ ಸಾವನ್ನಪ್ಪಿದ್ದು, ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ
  • ಮುಂಬೈನಿಂದ 350 ಕಿ.ಮೀ ದೂರದಲ್ಲಿರುವ ಸಾಂಗ್ಲಿ ಜಿಲ್ಲೆಯ ಮಹೈಸಾಲ್‌ನಲ್ಲಿ ಘಟನೆ ನಡೆದಿದೆ
Shocking News: ಒಂದೇ ಕುಟುಂಬದ 9 ಜನರು ಶವವಾಗಿ ಪತ್ತೆ..! title=
9 ಮಂದಿ ಶವವಾಗಿ ಪತ್ತೆ

ಸಾಂಗ್ಲಿ(ಮಹಾರಾಷ್ಟ್ರ): ಒಂದೇ ಕುಟುಂಬದ 9 ಮಂದಿ ಶವವಾಗಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿನಡೆದಿದೆ. 2 ಮನೆಯಲ್ಲಿ ಅಣ್ಣ-ತಮ್ಮಂದಿರ ಕುಟುಂಬದ 9 ಮಂದಿ ಸಾವನ್ನಪ್ಪಿದ್ದು, ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.

ಮಹಾರಾಷ್ಟ್ರ ರಾಜಧಾನಿ ಮುಂಬೈನಿಂದ 350 ಕಿ.ಮೀ ದೂರದಲ್ಲಿರುವ ಸಾಂಗ್ಲಿ ಜಿಲ್ಲೆಯ ಮಹೈಸಾಲ್‌ನಲ್ಲಿ ಎರಡು ಮನೆಗಳಲ್ಲಿ ಒಂದೇ ಕುಟುಂಬದ 9 ಜನರ ಮೃತದೇಹಗಳು ಪತ್ತೆಯಾಗಿವೆ. ಈ 2 ಮನೆಗಳ ನಡುವೆ 1.5 ಕಿ.ಮೀ ಅಂತರವಿದೆ. ಇಬ್ಬರು ಸಹೋದರರು ವಿವಿಧ ವ್ಯಕ್ತಿಗಳಿಂದ ಹೆಚ್ಚು ಸಾಲ ಪಡೆದಿದ್ದಾರೆ ಎಂದು ಪ್ರಾಥಮಿಕ ತನಿಖೆ ಪ್ರಕಾರ ತಿಳಿದುಬಂದಿದೆ. ‘ಒಂದೇ ಕುಟುಂಬಕ್ಕೆ ಸೇರಿದ 9 ಶವಗಳು 2 ಮನೆಗಳಲ್ಲಿ ಪತ್ತೆಯಾಗಿವೆ. 3 ಶವಗಳು ಒಂದೇ ಸ್ಥಳದಲ್ಲಿ ಕಂಡುಬಂದರೆ, ಇನ್ನುಳಿದ 6 ಶವಗಳು ಮನೆಯ ಬೇರೆ ಬೇರೆ ಸ್ಥಳಗಳಲ್ಲಿ ಪತ್ತೆಯಾಗಿದೆ’ ಎಂದು ಸಾಂಗ್ಲಿ ಪೊಲೀಸ್ ವರಿಷ್ಠಾಧಿಕಾರಿ ದೀಕ್ಷಿತ್ ಗೆಡಮ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Viral Video: ಸುರಂಗ ಮಾರ್ಗದಲ್ಲಿ ಬಿದ್ದಿದ್ದ ಕಸ ತೆಗೆದ ಪ್ರಧಾನಿ ಮೋದಿ

ಮೃತರನ್ನು ಅಕ್ಕತೈ ವ್ಯಾನ್ಮೋರ್ (72), ಪೋಪಟ್ ಯಲ್ಲಪ್ಪ ವಾನ್ಮೋರೆ (52), ಮಾಣಿಕ್ ಯಲ್ಲಪ್ಪ ವ್ಯಾನ್ಮೋರೆ (49), ಸಂಗೀತಾ ಪೋಪಟ್ ವಾನ್ಮೋರೆ (48), ರೇಖಾ ಮಾಣಿಕ್ ವ್ಯಾನ್ಮೋರೆ (45), ಅರ್ಚನಾ ಪೋಪಟ್ ವಾನ್ಮೋರೆ (30), ಶುಭಂ ಪೋಪಟ್ ವಾನ್ಮೋರೆ (28), ಅನಿತಾ ಮಾಣಿಕ್ ವ್ಯಾನ್ಮೋರ್ (28) ಮತ್ತು ಆದಿತ್ಯ ಮಾಣಿಕ್ ವ್ಯಾನ್ (15) ಎಂದು ಗುರುತಿಸಲಾಗಿದೆ. ಮಾಣಿಕ್ ಮತ್ತು ಪೋಪಟ್ ಯಲ್ಲಪಾ ವಾನ್ಮೋರ್ ಇಬ್ಬರು ಸಹೋದರರಾಗಿದ್ದಾರೆಂದು ತಿಳಿದು ಬಂದಿದೆ.

ಮಾಣಿಕ್ ಮನೆಯಲ್ಲಿ ಆತನ ತಾಯಿ, ಪತ್ನಿ ಹಾಗೂ ಇಬ್ಬರು ಮಕ್ಕಳ ಶವ ಪತ್ತೆಯಾದರೆ, ಪೋಪಟ್ ಮನೆಯಲ್ಲಿ ಅವರ ಪತ್ನಿ ಮತ್ತು ಇಬ್ಬರು ಮಕ್ಕಳ ಶವಗಳು ಪತ್ತೆಯಾಗಿವೆ. ಇದು ಸಾಮೂಹಿಕ ಆತ್ಮಹತ್ಯೆಯೇ ಅಥವಾ ಕೊಲೆಯೇ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಪೋಪಟ್ ವ್ಯಾನ್ಮೋರ್ ಶಿಕ್ಷಕರಾಗಿದ್ದರೆ, ಮಾಣಿಕ್ ವ್ಯಾನ್ಮೋರ್ ಪಶುವೈದ್ಯರಾಗಿ ಕೆಲಸ ಮಾಡುತ್ತಿದ್ದರೆಂದು ತಿಳಿದುಬಂದಿದೆ.

ಇದನ್ನೂ ಓದಿ: UP Board: ಜೈಲಿನಿಂದ ಪರೀಕ್ಷೆ ಬರೆದಿದ್ದ ಕಿಡ್ನಾಪ್ & ಕೊಲೆ ಆರೋಪಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣ!

ಮೃತರು ಕ್ರಿಮಿನಾಶಕ ಸೇವಿಸಿ ಸಾವನ್ನಪ್ಪಿದ್ದಾರೆಂದು ಮೇಲ್ನೋಟಕ್ಕೆ ತಿಳಿದುಬಂದಿದೆ. ಸದ್ಯ ಇದು ಆತ್ಮಹತ್ಯೆಯ ಪ್ರಕರಣವೆಂದು ಶಂಕಿಸಲಾಗಿದೆ. ಆದರೆ, ಮರಣೋತ್ತರ ಪರೀಕ್ಷೆಯ ನಂತರ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂದು ಇನ್ಸ್‌ಪೆಕ್ಟರ್ ಜನರಲ್ (ಕೊಲ್ಹಾಪುರ ವ್ಯಾಪ್ತಿ) ಮನೋಜ್ ಕುಮಾರ್ ಲೋಹಿಯಾ ಹೇಳಿದ್ದಾರೆ.

ಗ್ರಾಮದ ಬಾಲಕಿಯೊಬ್ಬಳು ಎಂದಿನಂತೆ ಮಾಣಿಕ್‌ ವ್ಯಾನ್‌ಮೋರ್‌ ಅವರ ಮನೆಗೆ ಹಾಲು ಹಾಕಲು ಹೋದಾಗ ಈ ಘಟನೆ ಬೆಳಕಿಗೆ ಬಂದಿದೆ. ಇದೊಂದು ಗಂಭೀರ ಘಟನೆಯಾಗಿರುವುದರಿಂದ ಎಲ್ಲ ಕೋನಗಳಿಂದ ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದು, ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News