ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ..!

Udupi Family Murder: ಹಸೀನಾ (46), ಅಫ್ನಾನ್ (23), ಅಯ್ನಾಝ್ (21) ಮತ್ತು ಆಸೀಮ್ (12) ಮೃತ ದುರ್ದೈವಿಗಳು. ಹಂತಕರು ಚೂರಿಯಿಂದ ಚುಚ್ಚಿ ಕೊಲೆ ಮಾಡಿ ಪರಾರಿ ಆಗಿದ್ದಾರೆ ಎನ್ನಲಾಗಿದೆ. ಈ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಮಲ್ಪೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Written by - Puttaraj K Alur | Last Updated : Nov 12, 2023, 02:32 PM IST
  • ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ..!
  • ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ನೇಜಾರಿನಲ್ಲಿ ಘಟನೆ
  • ಮೂವರು ಮಕ್ಕಳು ಮತ್ತು ತಾಯಿಯನ್ನು ಹತ್ಯೆ ಮಾಡಲಾಗಿದೆ
ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ..!  title=
ನಾಲ್ವರ ಬರ್ಬರ ಹತ್ಯೆ..!

ಉಡುಪಿ: ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರನ್ನು ಹತ್ಯೆ ಮಾಡಲಾಗಿದೆ. ತೃಪ್ತಿ ನಗರದಲ್ಲಿ ಈ ಕೃತ್ಯ ನಡೆದಿದ್ದು, ಮೂವರು ಮಕ್ಕಳು ಮತ್ತು ತಾಯಿಯನ್ನು ಹತ್ಯೆ ಮಾಡಲಾಗಿದೆ.

ಹತ್ಯೆಯಾದವರನ್ನು ತಾಯಿ ಹಸೀನಾ ಹಾಗೂ ಮಕ್ಕಳಾದ ಅಫ್ನಾನ್, ಅಯ್ನಾಝ್ ಮತ್ತು ಅಸೀಮ್ ಎಂದು ಗುರುತಿಸಲಾಗಿದೆ. ಮನೆಯೊಳಗಿದ್ದ ಮತ್ತೋರ್ವ ವ್ಯಕ್ತಿ ಕೂಡ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇದನ್ನೂ ಓದಿ: ನವೆಂಬರ್ 15ಕ್ಕೆ ಬಿ.ವೈ.ವಿಜಯೇಂದ್ರ ಅಧಿಕಾರ ಸ್ವೀಕಾರ

ಹಸೀನಾ (46), ಅಫ್ನಾನ್ (23), ಅಯ್ನಾಝ್ (21) ಮತ್ತು ಆಸೀಮ್ (12) ಮೃತ ದುರ್ದೈವಿಗಳು. ಹಂತಕರು ಚೂರಿಯಿಂದ ಚುಚ್ಚಿ ಕೊಲೆ ಮಾಡಿ ಪರಾರಿ ಆಗಿದ್ದಾರೆ ಎನ್ನಲಾಗಿದೆ. ಈ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಮಲ್ಪೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಪರಿಚಿತ ವ್ಯಕ್ತಿಯೊಬ್ಬ ಬಿಳಿ ಬಣ್ಣದ ಶರ್ಟ್ ಹಾಗೂ ಬಿಳಿ ಬಣ್ಣದ ಮಾಸ್ಕ್ ಧರಿಸಿ ಬಂದು ಕೃತ್ಯ ನಡೆಸಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಮಲ್ಪೆ ಪೊಲೀಸರು ಸ್ಥಳೀಯ ಸಿಸಿಟಿವಿ ದೃಶ್ಯಾವಳಿಗಳ ಸಹಿತ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಇದನ್ನೂ ಓದಿ: ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ: ಮುಂದಿನ ಮುಖ್ಯಮಂತ್ರಿ ವಿಜಯೇಂದ್ರ ಎಂದು ಘೋಷಣೆ

ದುಷ್ಕರ್ಮಿಗಳು ಏಕಾಏಕಿ ಮನೆಗೆ ನುಗ್ಗಿ ಮೊದಲು ಮನೆ ಯಜಮಾನಿಗೆ ಚೂರಿಯಿಂದ ಇರಿದಿದ್ದಾನೆ. ಬಳಿಕ ಮಕ್ಕಳಾದ ಅಫ್ನಾನ್, ಅಯ್ನಾಝ್‌ಗೆ ಚಾಕುವಿನಿಂದ ಇರಿದಿದ್ದಾರೆ. ಸದ್ದು ಕೇಳಿ ಆಟವಾಡುತ್ತಿದ್ದ ಆಸಿಮ್ ಒಳ ಬರುತ್ತಿದ್ದಂತೆ ಆತನನ್ನು ಸಹ ಕೊಂದಿದ್ದಾರೆ. ಇವರ ಚೀರಾಟ ಕೇಳಿ ಹೊರಗಡೆ ಬಂದ ಪಕ್ಕದ ಮನೆ ಯುವತಿಯನ್ನು ಬೆದರಿಸಿ ದುಷ್ಕರ್ಮಿಗಳು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News