ನವದೆಹಲಿ: ಮಲಯಾಳಂನ ಖ್ಯಾತ ನಟ ಎನ್.ಡಿ.ಪ್ರಸಾದ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಕೊಚ್ಚಿಯ ಕಲಮಸ್ಸೆರಿಯಲ್ಲಿರುವ ತಮ್ಮ ನಿವಾಸದ ಮುಂಭಾಗದ ಮರದಲ್ಲಿ ಅವರ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಾಲಿವುಡ್ ಖ್ಯಾತ ನಟ ನಿವೀನ್ ಪೌಳಿ ನಟನೆಯ ‘ಆಕ್ಷನ್ ಹೀರೋ ಬಿಜು’ ಸಿನಿಮಾದಲ್ಲಿ ವಿಲನ್ ಆಗಿ ಮಿಂಚಿದ್ದ ಎನ್.ಡಿ.ಪ್ರಸಾದ್‍ಗೆ 43 ವರ್ಷ ವಯಸ್ಸಾಗಿತ್ತು. ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿರುವ ಪ್ರಸಾದ್ ಕುಟುಂಬ ಕಲಹದಿಂದ ಬೇಸತ್ತಿದ್ದರು ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ: ಶಾರುಖ್ ಖಾನ್ ಜೊತೆಗಿನ ಲೈಂಗಿಕ ಸಂಬಂಧದ ವದಂತಿಯ ಬಗ್ಗೆ ಕರಣ್ ಜೋಹರ್ ಹೇಳಿದ್ದೇನು?
ಹಲವಾರು ಮಲಯಾಳಂ ಸಿನಿಮಾಗಳಲ್ಲಿ ಸಣ್ಣಪುಟ್ಟ ಪಾತ್ರಗಳಲ್ಲಿ ನಟಿಸಿರುವ ಪ್ರಸಾದ್ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮನೆಗೆ ಬಂದ ಮಕ್ಕಳು ತಂದೆ ನೇಣುಬಿಗಿದ ಸ್ಥಿತಿಯಲ್ಲಿರುವುದನ್ನು ಕಂಡು ನೆರೆಹೊರೆಯವರಿಗೆ ತಿಳಿಸಿದ್ದಾರೆ. ಬಳಿಕ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಾಥಮಿಕ ತನಿಖೆ ಕೈಗೊಂಡಿದ್ದಾರೆ.
ಖಳನಟನಾಗಿ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದ ಪ್ರಸಾದ್ ಹಲವು ವರ್ಷಗಳಿಂದ ಪತ್ನಿಯಿಂದ ದೂರವಾಗಿ ಪ್ರತ್ಯೇಕ ಮನೆಯಲ್ಲಿ ವಾಸವಿದ್ದರಂತೆ. ವರದಿಗಳ ಪ್ರಕಾರ, ಮಾನಸಿಕ ಒತ್ತಡ ಮತ್ತು ಕೌಟುಂಬಿಕ ಸಮಸ್ಯೆಗಳಿಂದ ಅವರು ಆತ್ಮಹತ್ಯೆಗೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಇದನ್ನೂ ಓದಿ: Vikrant Rona: ʻವಿಕ್ರಾಂತ್ ರೋಣʼನ ಬಗ್ಗೆ ಹೀಗಂದ್ರು ಅಮಿತಾಬ್ ಬಚ್ಚನ್!
ಖಿನ್ನತೆಯ ಕಾರಣದಿಂದ ಪ್ರಸಾದ್ ಡ್ರಗ್ಸ್ ಕೂಡ ಸೇವಿಸುತ್ತಿದ್ದರು ಎಂದು ಹೇಳಲಾಗಿದೆ. ಈ ಹಿಂದೆ ನಟ ಡ್ರಗ್ಸ್‌ನೊಂದಿಗೆ ಸಿಕ್ಕಿಬಿದ್ದಿರುವುದು ಸೇರಿದಂತೆ ಹಲವು ಪೊಲೀಸ್ ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ. ವರದಿಯ ಪ್ರಕಾರ, ಕಳೆದ ವರ್ಷ ಎರ್ನಾಕುಲಂ ಅಬಕಾರಿ ವೃತ್ತದ ಕಚೇರಿ ನಡೆಸಿದ ದಾಳಿಯಲ್ಲಿ ಪ್ರಸಾದ್ 2.5 ಗ್ರಾಂ ಹ್ಯಾಶಿಶ್ ಆಯಿಲ್, 0.1 ಗ್ರಾಂ ಬುಪ್ರೆನಾರ್ಫಿನ್, 15 ಗ್ರಾಂ ಗಾಂಜಾ ಸಮೇತ ಸಿಕ್ಕಿಬಿದ್ದಿದ್ದರು. ಪ್ರಸಾದ್ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಲವಾರು ಪ್ರಕರಣಗಳು ಬಾಕಿ ಇವೆ ಎಂದು ವರದಿಯಾಗಿದೆ. ಭಾರತೀಯ ಚಿತ್ರರಂಗದಲ್ಲಿ ಇತ್ತೀಚೆಗೆ ಆಗುತ್ತಿರುವ ಸರಣಿ ಆತ್ಮಹತ್ಯೆ ಪ್ರಕರಣಗಳು ಬೆಚ್ಚಿ ಬೀಳಿಸುತ್ತಿವೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ