ನವದೆಹಲಿ: ಚಹಾ ಮಾಡಿಕೊಡದ ಪತ್ನಿಯನ್ನು ಪತಿಯೊಬ್ಬ ಮನಬಂದಂತೆ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾನೆ. ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಟೀ ಮಾಡಲಿಲ್ಲವೆಂಬ ಕಾರಣಕ್ಕೆ 41 ವರ್ಷದ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಂದಿದ್ದಾನೆ. ಈ ಬಗ್ಗೆ ಮಧ್ಯಪ್ರದೇಶ ಪೊಲೀಸರು ಸೋಮವಾರ ಮಾಹಿತಿ ನೀಡಿದ್ದಾರೆ.
ಈ ಘಟನೆಯು ಝಾರ್ಡಾ ಪೊಲೀಸ್ ಠಾಣೆ ವ್ಯಾಪ್ತಿಯ ಘಾಟಿಯಾ ಗ್ರಾಮದಲ್ಲಿ ಶನಿವಾರ ನಡೆದಿದ್ದು, ವ್ಯಕ್ತಿ ತನ್ನ ಹೆಂಡತಿಯನ್ನು ಮನಬಂದಂತೆ ಥಳಿಸಿ ಕೊಂದಿದ್ದಾನೆಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರೋಪಿಯು ತನ್ನ 40 ವರ್ಷದ ಪತ್ನಿಯ ಮೇಲೆ ಚಪಾತಿ ಲಟ್ಟಿಸುವ ರೋಲಿಂಗ್ ಬೋರ್ಡ್‌ನಿಂದ ಹಲ್ಲೆ ನಡೆಸಿದ್ದಾನೆಂದು ಜಾರ್ಡಾ ಪೊಲೀಸ್ ಠಾಣೆಯ ಉಸ್ತುವಾರಿ ವೀರೇಂದ್ರ ಸಿಂಗ್ ಹೇಳಿದ್ದಾರೆ.
ಇದನ್ನೂ ಓದಿ: Corona ಭೀತಿಯೇ? ಫುಡ್ ಎಂಜಾಯ್ ಮಾಡಲು ಈತನ ಮಾಸ್ಟರ್ ಪ್ಲ್ಯಾನ್ ನೋಡಿ! ನೀವೂ ಬೇಕಿದ್ರೆ ಟ್ರೈ ಮಾಡಿ
ಟೀ ಮಾಡಿಕೊಡು ಎಂದು ಪತಿ ಕೇಳಿದಾಗ ಪತ್ನಿ ನಿರಾಕರಿಸಿದ್ದಳಂತೆ. ಇದರಿಂದ ಕೋಪಗೊಂಡ ಪತಿ ಗರ್ಭಿಣಿ ಪತ್ನಿಗೆ ಹೊಡೆದಿದ್ದಾನೆ. ಪರಿಣಾಮ ಆಕೆ ಸ್ಥಳದಲ್ಲಿಯೇ ಪ್ರಜ್ಞಾಹೀನಳಾಗಿ ಕುಸಿದುಬಿದ್ದು ಪ್ರಾಣಬಿಟ್ಟಿದ್ದಾಳೆಂದು ತಿಳುದುಬಂದಿದೆ. ಪತ್ನಿಯ ಈ ಸ್ಥಿತಿ ಕಂಡು ಗಾಬರಿಯಾದ ವ್ಯಕ್ತಿ ಆಕೆಯನ್ನು ತರಾತುರಿಯಲ್ಲಿ ಆಸ್ಪತ್ರೆಗೆ ಕರೆದೊಯ್ದಿದ್ದಾನೆ. ಆಸ್ಪತ್ರೆ ಸಿಬ್ಬಂದಿ ಬಳಿ ತನ್ನ ಪತ್ನಿಗೆ ವಿದ್ಯುತ್ ಸ್ಪರ್ಶವಾಗಿ ಪ್ರಜ್ಞೆ ತಪ್ಪಿದ್ದಾಳೆಂದು ನಾಟಕವಾಡಿದ್ದಾನೆ. ಆದರೆ ಮಹಿಳೆಯ ದೇಹದಲ್ಲಿ ವಿದ್ಯುತ್ ಸ್ಪರ್ಶದ ಯಾವುದೇ ಲಕ್ಷಣಗಳಿಲ್ಲವೆಂದು ವೈದ್ಯರಿಗೆ ಗೊತ್ತಾಗಿದೆ. ಮಹಿಳೆ ಅನುಮಾನಾಸ್ಪದ ಸಾವಿನ ಬಗ್ಗೆ ಅವರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪತ್ನಿ ಸಾವನ್ನಪ್ಪಿದ ಬಲಿಕ ಎಸ್ಕೇಪ್ ಆಗಿದ್ದ ಪತಿ!
ಪೊಲೀಸರ ಪ್ರಕಾರ, ಆರೋಪಿ ತನ್ನ ಪತ್ನಿಯ ಸಾವಿನ ನಂತರ ಆಸ್ಪತ್ರೆಯಿಂದ ತಲೆಮರೆಸಿಕೊಂಡಿದ್ದಾನೆ. ಬಳಿಕ ಪೊಲೀಸರು ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರಂಭದಲ್ಲಿ ಆರೋಪಿ ಪತಿ ಪೊಲೀಸರನ್ನು ದಾರಿ ತಪ್ಪಿಸುವ ಪ್ರಯತ್ನ ಮಾಡಿದ್ದಾನೆ. ಪೋಲೀಸರು ಮರಣೋತ್ತರ ಪರೀಕ್ಷೆಯ ವರದಿ ನೋಡಿದಾಗ ಅದರಲ್ಲಿ ಮಹಿಳೆಗೆ ಗಂಭೀರ ಪ್ರಮಾಣದ ಗಾಯಗಳಾಗಿರುವ ಬಗ್ಗೆ ತಿಳಿದುಬಂದಿದೆ.
ಇದನ್ನೂ ಓದಿ: ಚುನಾವಣಾ ನಿರಂಕುಶಾಧಿಕಾರ- ಜನಾಂಗೀಯ ಕಪಟವಾದಿಗಳ ನಡುವೆ ಸಿಲುಕಿರುವ ಭಾರತ
ಇದಾದ ಬಳಿಕ ತನಿಖೆ ವೇಳೆ ಆರೋಪಿ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ. ತಾನು ಸಿಕ್ಕಿಬೀಳಬಹುದೆಂಬ ಭಯದಲ್ಲಿದ್ದ ಆತನನ್ನು ಪೊಲೀಸರು ಬೆನ್ನಟ್ಟಿ ಹಿಡಿದು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ ವ್ಯಕ್ತಿ ತಾನುಮಾಡಿದ ಅಪರಾಧ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.