ಪ್ರೇಮ ನಿರಾಕರಣೆ ಶಂಕೆ: ಕಾರ್ಪೋರೇಟರ್ ಮಗಳಿಗೆ 9 ಬಾರಿ ಚಾಕುವಿನಿಂದ ಇರಿದು ಹತ್ಯೆಗೈದ ಪಾಗಲ್ ಪ್ರೇಮಿ!

Hubli student murder: ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಕೊಲೆಯಾದ ವಿದ್ಯಾರ್ಥಿನಿ. ಅದೇ ಕಾಲೇಜಿನ ಹಳೇ ವಿದ್ಯಾರ್ಥಿ ಫಯಾಜ್ ನೇಹಾಗೆ 9 ಬಾರಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ.

Edited by - Bhavishya Shetty | Last Updated : Apr 18, 2024, 07:57 PM IST
    • ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಸದಸ್ಯ ನಿರಂಜನ ಹಿರೇಮಠ ಪುತ್ರಿ ನೇಹಾ ಕೊಲೆ
    • ಮಾಡುತ್ತಿದ್ದ ನೇಹಾಗೆ ಕ್ಯಾಂಪಸ್‌ನಲ್ಲೇ 9 ಬಾರಿ ಚಾಕು ಇರಿದಿದ್ದ ಅನ್ಯಕೋಮಿನ ಯುವಕ
    • ಪ್ರಥಮ ವರ್ಷದ ಎಂಸಿಎ ವಿದ್ಯಾಭ್ಯಾಸ ಮಾಡುತ್ತಿದ್ದ ನೇಹಾ
ಪ್ರೇಮ ನಿರಾಕರಣೆ ಶಂಕೆ: ಕಾರ್ಪೋರೇಟರ್ ಮಗಳಿಗೆ 9 ಬಾರಿ ಚಾಕುವಿನಿಂದ ಇರಿದು ಹತ್ಯೆಗೈದ ಪಾಗಲ್ ಪ್ರೇಮಿ! title=
Neha murder case

Crime News: ಹುಬ್ಬಳ್ಳಿ: ಅನ್ಯಕೋಮಿನ ಯುವಕನೊಬ್ಬ ಇಲ್ಲಿನ ಬಿವಿಬಿ ಕಾಲೇಜ್ ಕ್ಯಾಂಪಸ’ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿಯನ್ನು ಅಮಾನುಶವಾಗಿ ಇರಿದುಕೊಂದಿದ್ದಾನೆ.

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಕೊಲೆಯಾದ ವಿದ್ಯಾರ್ಥಿನಿ. ಅದೇ ಕಾಲೇಜಿನ ಹಳೇ ವಿದ್ಯಾರ್ಥಿ ಫಯಾಜ್ ನೇಹಾಗೆ 9 ಬಾರಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ.

ಇದನ್ನೂ ಓದಿ: ವಿರಾಟ್ ಕೊಹ್ಲಿಗೆ ಈ ಹಾಡುಗಳೆಂದರೆ ಪಂಚಪ್ರಾಣ… ಕೇಳಿದ ತಕ್ಷಣ ನಿಂತಲ್ಲೇ ಡ್ಯಾನ್ಸ್ ಮಾಡ್ತಾರಂತೆ!!

ಪ್ರಥಮ ವರ್ಷದ ಎಂಸಿಎ ವಿದ್ಯಾಭ್ಯಾಸ ಮಾಡುತ್ತಿದ್ದ ನೇಹಾಗೆ ಕ್ಯಾಂಪಸ್‌ನಲ್ಲೇ 9 ಬಾರಿ ಚಾಕು ಇರಿದಿದ್ದು, ಗಂಭೀರವಾಗಿ ಗಾಯಗೊಂಡ ಆಕೆಯನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ ಅದಾಗಲೇ ನೇಹಾ ಕೊನೆಯುಸಿರೆಳೆದಿದ್ದಾರೆ.

ಮೂಲತಃ ಬೆಳಗಾವಿ ಜಿಲ್ಲೆಯ ಸವದತ್ತಿ ನಿವಾಸಿಯಾಗಿದ್ದ ಫಯಾಜ್ ಕೆಲ ದಿನಗಳಿಂದ ನೇಹಾ ಬೆನ್ನು ಬಿದ್ದಿದ್ದ ಎನ್ನಲಾಗಿದೆ. ಆದರೆ ನೇಹಾ, ಆತನ ಪ್ರೀತಿಯನ್ನು ತಿರಸ್ಕರಿಸಿದ್ದಕ್ಕೆ ಕೊಲೆ ಎಸಗಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ. ಇನ್ನು ಕೊಲೆ ಮಾಡಿ ಪರಾರಿಯಾಗುತ್ತಿದ್ದ ಫಯಾಜ್‌’ನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಇದನ್ನೂ ಓದಿ: ಪ್ರೀತಿಸಿ ಮದ್ವೆಯಾಗಿ ಮಗುವಿದ್ದರೂ ನಟಿ ಜೊತೆ ಅಫೇರ್! ಪತ್ನಿ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದು ನರಕ ಅನುಭವಿಸಿದ ಭಾರತೀಯ ಕ್ರಿಕೆಟಿಗ ಈತನೇ..!

ಹುಬ್ಬಳ್ಳಿಯ ವಿದ್ಯಾನಗರ ಪೊಲೀಸರು ಈಗ ಫಯಾಜ್‌’ನನ್ನು ಬಂಧಿಸಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News