ಮದುವೆಯಾದ ಕೆಲವೇ ಗಂಟೆಗಳಲ್ಲಿ ಹೊಡೆದಾಡಿಕೊಂಡ ನವದಂಪತಿ! ವಧು ಸಾವು, ವರನ ಸ್ಥಿತಿ ಗಂಭೀರ!

Shocking News in Kolar: ವಧು ಲಿಖಿತಶ್ರೀ ಹಾಗೂ ನವೀನ್ ಮದುವೆಯಾಗಿತ್ತು. ಮದುವೆಯಾದ ನಂತರ ನವದಂಪತಿ ರೂಂಗೆ ಹೋಗಿದ್ದರು. ಆದರೆ ಮ್ಯಾರೇಜ್‌ ಆದ ಖುಷಿಯಲ್ಲಿರಬೇಕಾದವರು ಅದ್ಯಾವುದೋ ಕಾರಣಕ್ಕೆ ಮನಸ್ತಾಪ ಮಾಡಿಕೊಂಡು ಜಗಳವಾಡಿದ್ದಾರೆ.

Written by - Puttaraj K Alur | Last Updated : Aug 7, 2024, 08:35 PM IST
  • ಮದುವೆಯಾದ ಕೆಲವೇ ಗಂಟೆಗಳಲ್ಲಿ ಹೊಡೆದಾಡಿಕೊಂಡ ವಧು-ವರ
  • ಘಟನೆಯಲ್ಲಿ ಗಾಯಗೊಂಡಿದ್ದ ವಧು ಸಾವು, ವರನಿಗೆ ಗಂಭೀರ ಗಾಯ
  • ಕೋಲಾರ ಜಿಲ್ಲೆ ಕೆಜಿಎಫ್ ತಾಲ್ಲೂಕು ಚಂಬರಸನಹಳ್ಳಿ ಗ್ರಾಮದಲ್ಲಿ ಘಟನೆ
ಮದುವೆಯಾದ ಕೆಲವೇ ಗಂಟೆಗಳಲ್ಲಿ ಹೊಡೆದಾಡಿಕೊಂಡ ನವದಂಪತಿ! ವಧು ಸಾವು, ವರನ ಸ್ಥಿತಿ ಗಂಭೀರ! title=
ಮದುವೆ ನಂತರ ಹೊಡೆದಾಡಿಕೊಂಡ ವಧು-ವರ!

Shocking News: ಮದುವೆಯಾದ ನಂತರ ವಧು-ವರ ಹೊಡೆದಾಡಿಕೊಂಡಿದ್ದು, ವಧು ಸಾವನ್ನಪ್ಪಿ ವರ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಚಂಬರಸನಹಳ್ಳಿ ಗ್ರಾಮದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ.

ವಧು ಲಿಖಿತಶ್ರೀ ಹಾಗೂ ನವೀನ್ ಮದುವೆಯಾಗಿತ್ತು. ಮದುವೆಯಾದ ನಂತರ ನವದಂಪತಿ ರೂಂಗೆ ಹೋಗಿದ್ದರು. ಆದರೆ ಮ್ಯಾರೇಜ್‌ ಆದ ಖುಷಿಯಲ್ಲಿರಬೇಕಾದವರು ಅದ್ಯಾವುದೋ ಕಾರಣಕ್ಕೆ ಮನಸ್ತಾಪ ಮಾಡಿಕೊಂಡು ಜಗಳವಾಡಿದ್ದಾರೆ. ಮದುವೆಯಾದ ಕೆಲವೇ ಗಂಟೆಗಳಲ್ಲಿ ಗಂಡ-ಹಂಡತಿ ಜಗಳ ಮಾಡಿಕೊಂಡು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. 

ಇದನ್ನೂ ಓದಿ: ಇಳಿವಯಸ್ಸಿನಲ್ಲಿ ಪೋಕ್ಸೋ ಕೇಸ್‌; ಯಡಿಯೂರಪ್ಪನ ಮೇಲೆ 20 ಕೇಸ್‌ಗಳಿಗೆ: ಸಿಎಂ ಸಿದ್ದರಾಮಯ್ಯ

ರೂಂನಲ್ಲೇ‌ ನವೀನ್ ಹಾಗೂ ಲಿಖಿತ ಹೊಡೆದಾಡಿಕೊಂಡಿದ್ದಾರಂತೆ. ಘಟನೆಯಲ್ಲಿ ಇಬ್ಬರಿಗೂ ಗಂಭೀರ ಗಾಯವಾಗಿತ್ತು. ಹೀಗಾಗಿ ಇಬ್ಬರನ್ನೂ ಕೆಜಿಎಫ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಲಿಖಿತ ಸಾವನ್ನಪ್ಪಿದ್ದಾಳೆ.

ಇನ್ನು ನವೀನ್‌ ಸ್ಥಿತಿ ಸಹ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಆತನನ್ನು ಕೋಲಾರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ತಿಳಿದು ಸ್ಥಳಕ್ಕೆ ಅಂಡರ್‌ಸನ್ ಪೇಟೆ ಪೊಲೀಸರ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಬಿಜೆಪಿ-ಜೆಡಿಎಸ್‌ಗೆ ಟಕ್ಕರ್‌ ಕೊಡಲು ಕಾಂಗ್ರೆಸ್‌ ಜನಾಂದೋಲನ ಸಭೆ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News