Chamarajanagar: ಪ್ರತ್ಯೇಕ ಅಪಘಾತ; ಮೂವರು ಸಾವು, 7 ಮಂದಿಗೆ ಗಂಭೀರ ಗಾಯ!

Chamarajanagar Road accident: ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಗ್ರಾಮದ ಹೊರವಲಯದ ರಸ್ತೆಯಲ್ಲಿ ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲಿಯೇ ಬೈಕ್ ಸವಾರರಿಬ್ಬರು ದಾರುಣವಾಗಿ ಮೃತಪಟ್ಟಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.

Written by - Puttaraj K Alur | Last Updated : Jan 27, 2024, 03:29 PM IST
  • ಗುಂಡ್ಲುಪೇಟೆ ತಾಲೂಕಿನಲ್ಲಿ ಬಸ್‌ ಹಾಗೂ ಟಾಟಾ ಏಸ್‌ ನಡುವೆ ಮುಖಾಮುಖಿ ಡಿಕ್ಕಿ
  • ಸ್ಥಳದಲ್ಲಿಯೇ ಓರ್ವ ಸಾವು, ೭ ಮಂದಿಗೆ ಗಂಭೀರ ಗಾಯ & ಇಬ್ಬರು ಚಿಂತಾಜನಕ
  • ಕೊಳ್ಳೇಗಾಲ ತಾಲೂಕಿನಲ್ಲಿ ಬೈಕ್-ಕಾರು ಡಿಕ್ಕಿಯಾಗಿ ಇಬ್ಬರು ಯುವಕರ ದುರ್ಮರಣ
Chamarajanagar: ಪ್ರತ್ಯೇಕ ಅಪಘಾತ; ಮೂವರು ಸಾವು, 7 ಮಂದಿಗೆ ಗಂಭೀರ ಗಾಯ! title=
ಇಬ್ಬರು ಯುವಕರ ದುರ್ಮರಣ!

ಚಾಮರಾಜನಗರ: ಬಸ್ ಹಾಗೂ ಟಾಟಾ ಏಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಲಕ್ಕೂರು ಗೇಟ್ ಬಳಿ ನಡೆದಿದೆ. ಹಂಗಳ ಗ್ರಾಮದ ಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರ ಪರಿಸ್ಥಿತಿ ಚಿಂತಾಜನಕವಾಗಿದೆ.

ಮಹಿಳೆಯರು ಸೇರಿದಂತೆ 7 ಮಂದಿಗೆ ಗಾಯಗಳಾಗಿದ್ದು, ಎಲ್ಲರನ್ನೂ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಂಗಳ ಗ್ರಾಮಸ್ಥರು ಟಾಟಾ ಏಸ್‌ನಲ್ಲಿ ಚಿಕ್ಕಲ್ಲೂರು ಜಾತ್ರೆಗೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ. ವಾಹನಗಳು ವೇಗದಲ್ಲಿದ್ದರಿಂದ ಮುಖಾಮುಖಿ ಡಿಕ್ಕುಯಾಗಿ ನಜ್ಜುಗುಜ್ಜಾಗಿವೆ. ತೆರಕಣಾಂಬಿ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

ಇದನ್ನೂ ಓದಿ: ಜಗತ್ತಿನಲ್ಲಿ ಒಂದೆರಡು ಪ್ರಧಾನಿಗಳ ಸಾವು.. 2024 ರಲ್ಲಿ ಒಳ್ಳೆಯ ದಿನಗಳಿಲ್ಲ: ಕೋಡಿಶ್ರೀ ಭಯಾನಕ ಭವಿಷ್ಯ

ಇಬ್ಬರು ಬೈಕ್ ಸವಾರರು ಸಾವು!

ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಗ್ರಾಮದ ಹೊರವಲಯದ ರಸ್ತೆಯಲ್ಲಿ ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲಿಯೇ ಬೈಕ್ ಸವಾರರಿಬ್ಬರು ದಾರುಣವಾಗಿ ಮೃತಪಟ್ಟಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಯಳಂದೂರು ತಾಲೂಕಿ‌ನ ಯರಿಯೂರು ಗ್ರಾಮದ ಕುಮಾರ್ (27) ಹಾಗೂ ರವಿ (27) ಮೃತ ದುರ್ದೈವಿಗಳು‌.

ಮೃತ ಯುವಕರು ಶ್ರೀ ಕ್ಷೇತ್ರ ಚಿಕ್ಕಲ್ಲೂರು ಜಾತ್ರೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ‌ ಮಧುವನಹಳ್ಳಿ ಗ್ರಾಮದ ಹೊರವಲಯದ ರಸ್ತೆಯಲ್ಲಿ ಎದುರಿನಿಂದ ಬಂದ ಕಾರಿಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಫಘಾತದ ತೀವ್ರತೆಗೆ ಕುಮಾರ್ ಹಾಗೂ ರವಿ ಸ್ಥಳದಲ್ಲಿ ಪ್ರಾಣಬಿಟ್ಟಿದ್ದಾರೆ.

ಇದನ್ನೂ ಓದಿ: ಮುಸ್ಲಿಮರ ಓಲೈಕೆ, ಹಿಂದೂಗಳ ಕಡೆಗಣನೆ ನೋಡಿ ಶೆಟ್ಟರ್ ʼಕೈʼ ಬಿಟ್ಟರು

ಈ ಬಗ್ಗೆ ಮಾಹಿತಿ ತಿಳಿದ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮೃತ ದೇಹಗಳನ್ನು  ಪಟ್ಟಣದ ಸರ್ಕಾರಿ ಉಪವಿಭಾಗ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ. ಸದ್ಯ ಅಪಘಾತಕ್ಕೀಡಾದ ೨ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=xFI-KJNrEP8

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News