ನವದೆಹಲಿ : ಟಿಎಂಸಿ ಸಚಿವ ಪಾರ್ಥ ಚಟರ್ಜಿ ಅವರ ಆಪ್ತ ಸಹಾಯಕಿ ಅರ್ಪಿತಾ ಮುಖರ್ಜಿ ಅವರನ್ನು ಬಂಧಿಸಲಾಗಿದೆ. ಶುಕ್ರವಾರ ಜಾರಿ ನಿರ್ದೇಶನಾಲಯದ ದಾಳಿಯಲ್ಲಿ ಅರ್ಪಿತಾ ಅವರ ಮನೆಯಲ್ಲಿ 21 ಕೋಟಿ ರೂ.ಗೂ ಹೆಚ್ಚು ನಗದು ಹಣವನ್ನ ವಶಪಡಿಸಿಕೊಂಡಿದೆ.
ಪಶ್ಚಿಮ ಬಂಗಾಳ ಶಾಲಾ ಸೇವಾ ಆಯೋಗ ಮತ್ತು ಪಶ್ಚಿಮ ಬಂಗಾಳದ ಪ್ರಾಥಮಿಕ ಶಿಕ್ಷಣ ಮಂಡಳಿಯಲ್ಲಿ ನಡೆದ ನೇಮಕಾತಿ ಹಗರಣದಿಂದ ಈ ಹಣ ಪಡೆಯಲಾಗಿದೆ ಎಂದು ಶಂಕಿಸಲಾಗಿದೆ. ಟಿಎಂಸಿ ಸಚಿವ ಪಾರ್ಥ ಚಟರ್ಜಿ ಆಗಾಗ್ಗೆ ಅರ್ಪಿತಾ ಮುಖರ್ಜಿ ಮನೆಗೆ ಭೇಟಿ ನೀಡುತ್ತಿದ್ದರು ಎಂದು ಮೂಲಗಳು ತಿಳಿಸಿವೆ. ಇದರೊಂದಿಗೆ ಪಾರ್ಥ ಚಟರ್ಜಿ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ : Teacher Recruitment Scam: ಮಮತಾ ಬ್ಯಾನರ್ಜಿ ಸಚಿವರ ಆಪ್ತನ ಮನೆ ಮೇಲೆ ಇಡಿ ದಾಳಿ, 20 ಕೋಟಿ ನಗದು ವಶ!
ಇಡಿ ದಾಳಿ ವೇಳೆ 500 ಹಾಗೂ 2000 ರೂ. ಮುಖಬೆಲೆಯ ನೋಟುಗಳು ರಾಶಿ ರಾಶಿ ಹಣ ಸಿಕ್ಕಿದೆ, ನೋಟು ಎಣಿಕೆ ಮಷಿನ್ ಮೂಲಕ ಈ ಹಣ ಎಣಿಸಲಾಗಿದೆ. ತನಿಖಾ ತಂಡವು ಬ್ಯಾಂಕ್ ಅಧಿಕಾರಿಗಳ ಸಹಾಯ ತೆಗೆದುಕೊಂಡು ಈ ಮೊತ್ತದ ಹಣವನ್ನು ಲೆಕ್ಕ ಹಾಕಿದೆ.
ಬಂಗಾಳದ ಸಚಿವರ ಮೇಲೆ ಇಡಿ ದಾಳಿ
ದಾಳಿ ವೇಳೆ ಅರ್ಪಿತಾ ಮುಖರ್ಜಿ ಅವರ ಅಡಗುತಾಣದಿಂದ 20ಕ್ಕೂ ಹೆಚ್ಚು ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅದರ ಉದ್ದೇಶ ಮತ್ತು ಬಳಕೆಯ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ ಎಂದು ಇಡಿ ತಿಳಿಸಿದೆ. ಚಟರ್ಜಿ ಅವರಲ್ಲದೆ ಶಿಕ್ಷಣ ಖಾತೆ ರಾಜ್ಯ ಸಚಿವ ಪರೇಶ್ ಸಿ ಅಧಿಕಾರಿ, ಶಾಸಕ ಮಾಣಿಕ್ ಭಟ್ಟಾಚಾರ್ಯ ಮತ್ತು ಇತರರ ಮನೆಗಳ ಮೇಲೂ ಇಡಿ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ. ಶಿಕ್ಷಕರ ನೇಮಕಾತಿ ಹಗರಣದ ತನಿಖೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಇಬ್ಬರು ಸಚಿವರಾದ ಪಾರ್ಥ ಚಟರ್ಜಿ ಮತ್ತು ಪರೇಶ್ ಅಧಿಕಾರಿ ಅವರ ಮನೆಗಳ ಮೇಲೆ ಇಡಿ ಅಧಿಕಾರಿಗಳ ತಂಡ ಶುಕ್ರವಾರ ದಾಳಿ ನಡೆಸಿ, ದಾಖಲೆ ಪರಿಶೀಲಿಸಿದೆ.
ಪಾರ್ಥ ಚಟರ್ಜಿ ಪ್ರಸ್ತುತ ಕೈಗಾರಿಕೆ ಮತ್ತು ವಾಣಿಜ್ಯ ಸಚಿವರಾಗಿದ್ದಾರೆ. ಶಿಕ್ಷಣ ಸಚಿವರಾಗಿದ್ದಾಗ ಪಶ್ಚಿಮ ಬಂಗಾಳ ಶಾಲಾ ಸೇವಾ ಆಯೋಗದಿಂದ(ಡಬ್ಲ್ಯುಬಿಎಸ್ಎಸ್ಸಿ) ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಅಕ್ರಮ ನೇಮಕಾತಿಗಳನ್ನು ಮಾಡಿರುವ ಆರೋಪ ಕೇಳಿಬಂದಿದೆ. ಸಿಎಂ ಮಮತಾ ಬ್ಯಾನರ್ಜಿ ಸರ್ಕಾರದಲ್ಲಿ ಇದುವರೆಗೂ ನಡೆದ ದಾಳಿಯಲ್ಲಿ ಸಿಕ್ಕಿರುವ ಅತಿದೊಡ್ಡ ಮೊತ್ತ ಇದಾಗಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ : 30 ವರ್ಷದ ಮಹಿಳೆಯ ಮೇಲೆ ರೈಲ್ವೆ ಸಿಬ್ಬಂದಿಯ ಅತ್ಯಾಚಾರ
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.