Road Accident: ಹಿಂಬದಿಯಿಂದ ಲಾರಿಗೆ ಟಿಟಿ ವಾಹನ ಡಿಕ್ಕಿ 13 ಜನರು ದುರ್ಮರಣ

Road Accident: ಸವದತ್ತಿ ಮತ್ತು ಚಿಂಚಲಿ ಮಾಯಮ್ಮ ದೇವರ ದರ್ಶನಕ್ಕೆಂದು ತೆರಳಿ ವಾಪಸ್ ಆಗುತ್ತಿದ್ದ ವೇಳೆ ಹಾವೇರಿ ಜಿಲ್ಲೆ ಬ್ಯಾಡಗಿ ತಾ. ಗುಂಡೆನಹಳ್ಳಿ ಕ್ರಾಸ್ ನಲ್ಲಿ ಘಟನೆ ಸಂಭವಿಸಿದೆ. ಬೆಳಗಿನ ಜಾವ 4 ಗಂಟೆಯ ಸುಮಾರಿಗೆ ಅಪಘಾತ ನಡೆದಿದೆ ಎನ್ನಲಾಗಿದೆ. 

Written by - Yashaswini V | Last Updated : Jun 28, 2024, 11:47 AM IST
  • ಹಿಂಬದಿಯಿಂದ ಲಾರಿಗೆ ಟಿಟಿ ವಾಹನ ಡಿಕ್ಕಿ..!
  • 13 ಜನ ದುರ್ಮರಣ, 4 ಜನರ ಸ್ಥಿತಿ ಗಂಭೀರ
  • ಬ್ಯಾಡಗಿ ತಾಲೂಕಿನ ಗುಂಡೆನಹಳ್ಳಿ ಕ್ರಾಸ್‌ನಲ್ಲಿ ಘಟನೆ
Road Accident: ಹಿಂಬದಿಯಿಂದ ಲಾರಿಗೆ ಟಿಟಿ ವಾಹನ ಡಿಕ್ಕಿ 13 ಜನರು ದುರ್ಮರಣ title=

Karnataka Road Accident: ಹಿಂಬದಿಯಿಂದ ಲಾರಿಗೆ ಟಿಟಿ ವಾಹನ ಡಿಕ್ಕಿ ಹೊಡೆದ ಪರಿಣಾಮ 13 ಜನ ದುರ್ಮರಣಕ್ಕೀಡಾಗಿರುವ ಘಟನೆ ಹಾವೇರಿ ಜಿಲ್ಲೆಯ (Haveri District) ಬ್ಯಾಡಗಿ ತಾಲೂಕಿನ ಗುಂಡೆನಹಳ್ಳಿ ಕ್ರಾಸ್ ಬಳಿ ನಡೆದಿದೆ. ಈ ದುರ್ಘಟನೆಯಲ್ಲಿ ಅಪಘಾತಕ್ಕೀಡಾದವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ. ಇವರೆಲ್ಲರಿಗೂ  ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ  ಮುಂದುವರೆಸಲಾಗಿದೆ ಎಂದು ವರದಿಯಾಗಿದೆ. 

ಸವದತ್ತಿ (Savadatti) ಮತ್ತು ಚಿಂಚಲಿ ಮಾಯಮ್ಮ ದೇವರ ದರ್ಶನಕ್ಕೆಂದು ತೆರಳಿ ವಾಪಸ್ ಆಗುತ್ತಿದ್ದ ವೇಳೆ ಹಾವೇರಿ ಜಿಲ್ಲೆ ಬ್ಯಾಡಗಿ ತಾ. ಗುಂಡೆನಹಳ್ಳಿ ಕ್ರಾಸ್ ನಲ್ಲಿ ಈ ಭೀಕರ ರಸ್ತೆ ಅಪಘಾತ ( Road Accident) ಸಂಭವಿಸಿದೆ. ಬೆಳಗಿನ ಜಾವ 4 ಗಂಟೆಯ ಸುಮಾರಿಗೆ ಅಪಘಾತ ನಡೆದಿದೆ ಎನ್ನಲಾಗಿದೆ. 

ಇದನ್ನೂ ಓದಿ- Chamarajanagar News: ಕಾಲೇಜಿಗೂ ಕಾಲಿಟ್ಟ ಖದೀಮರ ಗ್ಯಾಂಗ್ !

ಈ ಘಟನೆಯಲ್ಲಿ ಒಂಬತ್ತು ಮಂದಿ ಮಹಿಳೆಯರು,  2 ಪುಟ್ಟ ಕಂದಮ್ಮಗಳು, ಇಬ್ಬರು ಗಂಡಸರು ಮೃತಪಟ್ಟಿದ್ದಾರೆ. ಮೃತರನ್ನು ಶಿವಮೂಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಎಮ್ ಏ ಹಟ್ಟಿ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ. ಮೃತ ದೇಹಗಳನ್ನು ಹಾವೇರಿ ಜಿಲ್ಲಾ ಆಸ್ಪತ್ರೆಯ ಶವಗಾರಕ್ಕೆ ರಾವಾನಿಸಲಾಗಿದೆ. 

ಅಪಘಾತದದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಸ್ಥಿತಿ ಚಿಂತಾಜನಕ: 
ಈ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನಾಲ್ವರಲ್ಲಿ, ಗೌತಮ್ ಎಂಬ ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿದ್ದು ಅವರನ್ನು ಹಾವೇರಿ ಜಿಲ್ಲಾಸ್ಪತ್ರೆಯ ವೈದ್ಯರು ಹುಬ್ಬಳ್ಳಿ ಕಿಮ್ಸ್ ಗೆ ರವಾನೆ ಮಾಡಿದ್ದಾರೆ. 

ಇದಲ್ಲದೆ, ಅನ್ನಪೂರ್ಣ, ಅರ್ಪಿತಾ ಎಂಬುವವರನ್ನು ಶಿವಮೊಗ್ಗದ ಮೇಗಾನ್ ಆಸ್ಪತ್ರೆ ರವಾನಿಸಲಾಗಿದ್ದೇ, ಪರಶುರಾಮ್ ಎಂಬಾತನಿಗೆ ಹಾವೇರಿ ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದುಬಂದಿದೆ. 

ಈ ಘಟನೆಗೆ ಸಂಬಂಧಿಸಿದಂತೆ ಬ್ಯಾಡಗಿ ಪೋಲಿಸ್ ಠಾಣಾ (Byadgi Police Station) ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಎಸ್‌ಪಿ ಅಂಶುಕುಮಾರ್ ಶವಾಗಾರಕ್ಕೆ ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ. 

ಇದನ್ನೂ ಓದಿ- ರೈಲಿನಲ್ಲಿ ಗಾಂಜಾ ಸಾಗಿಸುತ್ತಿದ್ದ ರೈಲ್ವೆ ನೌಕರನ ಬಂಧನ..!

ಕೇವಲ 15 ದಿನಗಳ ಹಿಂದಷ್ಟೇ ಟಿಟಿ ಖರೀದಿಸಿದ್ದ ಡ್ರೈವರ್ ಆದರ್ಶ್: 
ಲಭ್ಯವಿರುವ ಮಾಹಿತಿಗಳ ಪ್ರಕಾರ, ಈ ದುರ್ಘಟನೆಯಲ್ಲಿ ಸಾವಪ್ಪನ್ನಪ್ಪಿರುವ ಮೃತ ಡ್ರೈವರ್ ಕೇವಲ 15 ದಿನಗಳ ಹಿಂದಷ್ಟೇ ಸಾಲ ಮಾಡಿ ಟಿಟಿ ವಾಹನ ಖರೀದಿಸಿದ್ದರು. ಈ ಹಿನ್ನೆಲೆಯಲ್ಲಿ ಆದರ್ಶ್ ಕುಟುಂಬಸ್ ಸಮೇತರಾಗಿ ದೇವರ ದರ್ಶನಕ್ಕೆ ತೆರಳಿದ್ದರು. ದೇವರ ದರ್ಶನ ಮುಗಿಸಿ ಹಿಂದಿರುಗುವಾಗ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.  

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News