ತುಮಕೂರು: ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಜನರು ಸಾವಿಗೀಡಾಗಿದ್ದಾರೆ. ಘಟನೆ ಕುರಿತು ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಮತ್ತು ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರ ಕಾರ್ಯಾಲಯ(PMOIndia), ‘ಕರ್ನಾಟಕದ ತುಮಕೂರು ಜಿಲ್ಲೆಯಲ್ಲಿ ನಡೆದ ಅಪಘಾತ ಹೃದಯ ವಿದ್ರಾವಕವಾಗಿದೆ. ಮೃತ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಮೃತರ ಕುಟುಂಬಕ್ಕೆ ಪಿಎಂಎನ್ಆರ್ಎಫ್ನಿಂದ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರ ನೀಡಲಾಗುತ್ತದೆ’ ಎಂದು ಹೇಳಿದೆ.
ಇದನ್ನೂ ಓದಿ: ತುಮಕೂರಿನಲ್ಲಿ ಲಾರಿ-ಟೆಂಪೋ ಟ್ರ್ಯಾಕ್ಸ್ ನಡುವೆ ಭೀಕರ ಅಪಘಾತ: 9 ಜನ ಮೃತ, 14ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ
The accident in Tumakuru district, Karnataka is heart-rending. Condolences to the bereaved families. Prayers with the injured. Rs 2 lakh from PMNRF would be paid to the next of kin of each deceased. The injured would be paid Rs. 50,000: PM @narendramodi
— PMO India (@PMOIndia) August 25, 2022
ಸಿಎಂ ಬೊಮ್ಮಾಯಿ ಸಂತಾಪ
ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಜನರು ಸಾವಿಗೀಡಾಗಿ ಹಲವರು ಗಾಯಗೊಂಡಿರುವ ವಿಷಯ ತಿಳಿದು ತೀವ್ರ ದುಃಖಿತನಾಗಿದ್ದೇನೆ.
ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ.
— Basavaraj S Bommai (@BSBommai) August 25, 2022
ಇನ್ನು ಸಿಎಂ ಬಸವರಾಜ್ ಬೊಮ್ಮಾಯಿ ಕೂಡ ತುಮಕೂರು ಜಿಲ್ಲೆಯಲ್ಲಿ ನಡೆದಿರುವ ಭೀಕರ ಅಪಘಾತಕ್ಕೆ ಬಲಿಯಾಗಿರುವ 9 ಜನರ ಸಾವಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಜನರು ಸಾವಿಗೀಡಾಗಿ ಹಲವರು ಗಾಯಗೊಂಡಿರುವ ವಿಷಯ ತಿಳಿದು ತೀವ್ರ ದುಃಖಿತನಾಗಿದ್ದೇನೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಹೇಳಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ಸಂತಾಪ
ತುಮಕೂರು ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಮಂದಿ ಮೃತಪಟ್ಟಿರುವ ಸುದ್ದಿ ಕೇಳಿ ಸಂಕಟವಾಯಿತು.
ಅಪಘಾತದಲ್ಲಿ ಮಡಿದವರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಆದಷ್ಟು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ.
ಅಪಘಾತದಿಂದ ಸಂಕಷ್ಟಕ್ಕೀಡಾದ ಕುಟುಂಬಗಳಿಗೆ @CMofKarnataka
ಅವರು ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯ ಮಾಡುತ್ತೇನೆ. pic.twitter.com/BplzZbkAyI— Siddaramaiah (@siddaramaiah) August 25, 2022
ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ತುಮಕೂರು ಜಿಲ್ಲೆಯ ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ‘ತುಮಕೂರು ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಮಂದಿ ಮೃತಪಟ್ಟಿರುವ ಸುದ್ದಿ ಕೇಳಿ ಸಂಕಟವಾಯಿತು. ಅಪಘಾತದಲ್ಲಿ ಮಡಿದವರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಆದಷ್ಟು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಅಪಘಾತದಿಂದ ಸಂಕಷ್ಟಕ್ಕೀಡಾದ ಕುಟುಂಬಗಳಿಗೆ ಸಿಎಂ ಬಸವರಾಜ್ ಬೊಮ್ಮಾಯಿಯವರು ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯ ಮಾಡುತ್ತೇನೆ’ ಅಂತಾ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: Rain Alert: ರಾಜ್ಯದ ಹಲವೆಡೆ ಇಂದು ಭಾರೀ ಮಳೆ, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.